Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಖರ್ಜೂರದಲ್ಲಿದೆ 7 ಪ್ರಮುಖ ಆರೋಗ್ಯವರ್ಧಕ ಗುಣಗಳು
ಖರ್ಜೂರ ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವಂತಹ ಹಣ್ಣಾಗಿದೆ. ಸಿಹಿಯಾದ, ಪುಷ್ಠಿಯಾದ ಈ ಹಣ್ಣಿನಲ್ಲಿ ಆರೋಗ್ಯವರ್ಧಕ ಗುಣಗಳಿರುವುದರಿಂದ ಪ್ರತಿದಿನ ಒಂದು ಅಥವಾ ಎರಡು ಖರ್ಜೂವನ್ನು ಬಾಯಿಗೆ ಹಾಕಿಕೊಳ್ಳುವುದು ಒಳ್ಳೆಯದು. ಇದನ್ನು ತಿಂದರೆ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ರಕ್ತ ಹೀನತೆ ಸಮಸ್ಯೆಯನ್ನು ಹೋಗಲಾಡಿಸಬಹುದು. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಕರ್ಜೂರ ತಿಂದರೆ ಸಾಕು ಕಡಿಮೆಯಾಗುವುದು.
ಖರ್ಜೂರದಲ್ಲಿ ವಿಟಮಿನ್ ಗಳು ಮತ್ತು ಖನಿಜಾಂಶಗಳು ಹೇರಳವಾಗಿರುವುದರಿಂದ ಈ ಕೆಳಗಿನ ಪ್ರಮುಖ ಕಾಯಿಲೆಗಳ ನಿಬವಾರಣೆಗೆ ತುಂಬಾ ಸಹಕಾರಿಯಾಗಿದೆ.

1.ಹೃದ್ರೋಗ ಸಮಸ್ಯೆ ಕಡಿಮೆಮಾಡಲು
ಹೃದ್ರೋಗ ಸಮಸ್ಯೆ ಇರುವವರು ಖರ್ಜೂರವನ್ನು ರಾತ್ರಿಯಲ್ಲಿ ನೀರಿನಲ್ಲಿ ನೆನೆಹಾಕಿ ಬೆಳಗ್ಗೆ ಅದನ್ನು ಜ್ಯೂಸ್ ರೀತಿ ಮಾಡಿ ಕುಡಿದರೆ ತುಂಬಾ ಒಳ್ಳೆಯದು. ಖರ್ಜೂರದಲ್ಲಿ ಕಬ್ಬಿಣದಂಶ ಇರುವುದರಿಂದ ರಕ್ತಹೀನತೆಯನ್ನು ತಡೆಗಟ್ಟಬಹುದು.

2. ಗರ್ಭಿಣಿ, ತಾಯಿ ಮತ್ತು ಮಗು
ಗರ್ಭಿಣಿಯಾದಾಗ ಕೆಲವರಲ್ಲಿ ಹಿಮೋಗ್ಲೋಬಿನ್ ಅಂಶ ಕಡಿಮೆ ಇದ್ದರೆ ಖರ್ಜೂರ ತಿಂದರೆ ಸಾಕು ದೇಹದಲ್ಲಿ ರಕ್ತ ಕಣಗಳು ಹೆಚ್ಚಾಗಿ ಗರ್ಭಿಣಿಯ ಆರೋಗ್ಯ ವೃದ್ಧಿಸುತ್ತದೆ. ಖರ್ಜೂರದಲ್ಲಿರುವ ಖನಿಜಾಂಶಗಳು ಭ್ರೂಣದ ಬೆಳವಣಿಗೆಗೆ ಸಹಕಾರಿಯಾಗಿದೆ. ಹೆರಿಗೆಯ ನಂತರ ಎದೆಯಲ್ಲಿಹಾಲು ಹೆಚ್ಚು ಉತ್ಪತ್ತಿ ಮಾಡುತ್ತದೆ. ಖರ್ಜೂರ ಹಾಕಿ ಕಾಯಿಸಿದ ಹಾಲು ಮಕ್ಕಳಿಗೆ ಅತ್ಯುತ್ತಮವಾದ ಪೋಷಕಾಂಶವಾಗಿದೆ.

3. ಮಲಬದ್ಧತೆ
ಮಲಬದ್ಧತೆ ಸಮಸ್ಯೆಯಿದ್ದರೆ ಖರ್ಜೂರವನ್ನು ರಾತ್ರಿಯಲ್ಲಿ ನೀರಿನಲ್ಲಿ ನೆನೆ ಹಾಕಿ ಬೆಳಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು. ಇದರಲ್ಲಿ ನಾರಿನಂಶ ಅಧಿಕವಿರುವುದರಿಂದ ಮಲಬದ್ಧತೆ ಸಮಸ್ಯೆ ಕಂಡುಬರುವುದಿಲ್ಲ.

4. ಇರುಳು ಕುರುಡು
ಖರ್ಜೂರದಲ್ಲಿ ವಿಟಮಿನ್ ಎ ಹಾಗೂ antioxidant ಪ್ರಮಾಣ ಅಧಿಕವಿರುವುದರಿಂದ ಇರುಳು ಕುರುಡು ಸಮಸ್ಯೆಯ ವಿರುದ್ಧ ಹೋರಾಡುತ್ತದೆ.

5. ಸಂಧಿವಾತ
ಸಂಧಿ ನೋವು ಹೆಚ್ಚಿನವರಲ್ಲಿ ಕಂಡು ಬರುವ ಸಮಸ್ಯೆಯಾಗಿದೆ. ಮೂಳೆಯಲ್ಲಿ ಕ್ಯಾಲ್ಸಿಯಂ ಅಂಶಕಡಿಮೆ ಇರುವುದರಿಂದ ಈ ರೀತಿಯ ಸಮಸ್ಯೆ ಕಂಡು ಬರುತ್ತದೆ. ಖರ್ಜೂರದಲ್ಲಿ ಕ್ಯಾಲ್ಸಿಯಂ ಇರುವುದರಿಂದ ಮೂಳೆಗಳ ಆರೋಗ್ಯವನ್ನು ವೃದ್ಧಿಸುತ್ತದೆ.

6. ವಿಟಮಿನ್ ಗಳ ಕೊರತೆ:
ಇದರಲ್ಲಿ ಕ್ಯಾಲ್ಸಿಯಂ, ವಿಟಮಿನ್ ಬ5, ನಾರಿನಂಶ, ವಿಟಮಿನ್ ಬಿ3, ರಂಜಕ, ಕೊಬ್ಬಿನಂಶ, ಪೊಟಾಷ್ಯಿಯಂ, ತಾಮ್ರದ ಅಂಶವಿರುವುದರಿಂದ ವಿಟಮಿನ್ ಗಳ ಕೊರತೆ ಉಂಟಾಗುವುದಿಲ್ಲ.

7. ಹಲ್ಲಿನ ಆರೋಗ್ಯಕ್ಕೆ
ಹಲ್ಲಿನ ತೊಂದರೆ ಬರುವುದನ್ನು ತಡೆಯಲು ಖರ್ಜೂರ ತಿನ್ನುವುದು ಒಳ್ಳೆಯದು. ಇದರಲ್ಲಿ ಫ್ಲೋರೈನ್ ಅಂಶ ಇರುವುದರಿಂದ ಹಲ್ಲಿನ ಆರೋಗ್ಯ ಕಾಪಾಡುತ್ತದೆ.



Click it and Unblock the Notifications
