Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಬೆಳ್ಳುಳ್ಳಿಯಲ್ಲಿದೆ ಹಲವು ಕಾಯಿಲೆಗೆ ಮದ್ದು
ಮನೆ ಮದ್ದಿನಲ್ಲಿ ಬೆಳ್ಳುಳ್ಳಿಯ ಪ್ರಮುಖ ಪಾತ್ರ ವಹಿಸುತ್ತದೆ. ಕೆಮ್ಮು, ಶೀತದಂತಹ ಸಣ್ಣ ಪುಟ್ಟ ಕಾಯಿಲೆಗಳ ನಿವಾರಣೆಯಿಂದ ಹಿಡಿದು ಅಧಿಕ ರಕ್ತದೊತ್ತಡ, ಹೃದ್ರೋಗ, ಕ್ಷಯ ಮತ್ತು ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳನ್ನು ಗುಣಪಡಿಸುವ ಸಾಮರ್ಥ್ಯವನ್ನು ಹೊಂದಿರುವ ಬೆಳ್ಳುಳ್ಳಿಯನ್ನು ಆಯುರ್ವೇದದ ಔಷಧಿಗಳಲ್ಲಿ ಬಳಸಲಾಗುವುದು.
ಬೆಳ್ಳುಳ್ಳಿಯಲ್ಲಿ ಪ್ರೊಟೀನ್ ಮತ್ತು ವಿಟಮಿನ್ ಎ, ಬಿ, ಸಿ ಅಂಶಗಳಿವೆ. ಈ antioxidant ಗುಣ ಹೊಂದಿರುವ ಬೆಳ್ಳುಳ್ಳಿಯನ್ನು ಮನೆಮದ್ದಿನಲ್ಲಿ ಹೇಗೆ ಬಳಸಬಹುದೆಂದು ತಿಳಿಯೋಣ:

* ಬೆಳ್ಳುಳ್ಳಿ ಕ್ಯಾನ್ಸರ್ ರೋಗವನ್ನ ತಡೆಗಟ್ಟುವ ಸಾಮರ್ಥ್ಯ ಹೊಂದಿದೆ.
* ದೇಹದಲ್ಲಿ ರೋಗನಿರೋಧಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ
* ಹಾಲಿನಲ್ಲಿ ಬೆಳ್ಳುಳ್ಳಿ ಹಾಕಿ ಕುದಿಸಿ ಬಾಣಂತಿಯರಿಗೆ ಕೊಟ್ಟರೆ ಮೊಲೆ ಹಾಲು ಹೆಚ್ಚಾಗುವುದು.
* ಬೆಳ್ಳುಳ್ಳಿ ಹಾಕಿ ಕುದಿಸಿದ ಎಣ್ಣೆ ಹಚ್ಚುವುದರಿಂದ ಸಾಧಾರಣವಾಗಿ ಬರುವ ಕಾಲು ನೋವು ಕಡಿಮೆಯಾಗುತ್ತದೆ.
* ಬೆಳ್ಳುಳ್ಳಿಯುಕ್ತ ಮಾತ್ರೆಗಳ ಸೇವನೆ ಮಾಡಿದರೆ ಕೊಲೆಸ್ಟ್ರಾಲ್ ಕಡಿಮೆಯಾಗುವುದು.
* ಅಸಿಡಿಟಿ ಗ್ಯಾಸ್ಟ್ರಿಕ್ ತೊಂದರೆಗಳಿಗೆ ಒಳ್ಳೆಯದು.
* ವಾತ ಸಂಬಂಧಿ ಕೀಲುನೋವು, ವಯಸ್ಸಾದಾಗ ಬರುವ ಸಂಧಿವಾತಗಳಿಗೂ ಬೆಳ್ಳುಳ್ಳಿ ಸೇವನೆ ಹಿತಕರ.
* ಕಾಲಿನಲ್ಲಿ ಸೆಳತ ಕಂಡು ಬಂದರೆ ಎರಡು ಎಸಳು ಬೆಳ್ಳುಳ್ಳಿ ಯನ್ನು ಜಜ್ಜಿ ಹೆಬ್ಬೆರೆಳಿನ ತಳಭಾಗದಲ್ಲಿಟ್ಟು ಒಂದು ಬಟ್ಟೆ ಕಟ್ಟಿದರೆ ಕಾಲಿನ ಸೆಳತ ಕಡಿಮೆಯಾಗುತ್ತದೆ.
* ಬೆನ್ನು ನೋವಿದ್ದರೆ ಎರಡು ಅಥವಾ ಮೂರು ಕಾಳು ಲವಂಗವನ್ನು ಬೆಳಗ್ಗೆ ಸೇವಿಸಿ, ನಂತರ ಬೆಳ್ಳುಳ್ಳಿ ಎಣ್ಣೆಯಿಂದ ಬೆನ್ನು ನೋವಿರುವಲ್ಲಿಗೆ ಹಚ್ಚಿ ಮಸಾಜ್ ಮಾಡಿದರೆ ನೋವು ಬೇಗನೆ ಶಮನವಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
