Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಕಿತ್ತಳೆಯ ಸಿಪ್ಪೆಯನ್ನು ಬಿಸಾಡಬೇಡಿ!
ಸಿಟ್ರಸ್ ಆಹಾರಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರಲ್ಲೂ ಕಿತ್ತಳೆ ಹಣ್ಣು ಹುಳಿ-ಮಿಶ್ರಿತ ಸಿಹಿಯಾಗಿರುವುದರಿಂದ ತಿನ್ನಲು ತುಂಬಾ ರುಚಿಕರವಾಗಿರುತ್ತದೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಮಾತ್ರವಲ್ಲದೆ ನಾರಿನಂಶ ಕೂಡ ಇರುವುದರಿಂದ ಜೀರ್ಣಕ್ರಿಯೆಗೆ ತುಂಬಾ ಸಹಕಾರಿ. ಕಿತ್ತಳೆ ರಸ ಮುಖಕ್ಕೆ ಹಚ್ಚಿದರೆ ಮುಖದ ಹೊಳಪು ಹೆಚ್ಚಾಗುವುದು. ಈ ರೀತಿ ಕಿತ್ತಳೆ ಹಣ್ಣಿನ ಪ್ರಯೋಜನಗಳ ಬಗ್ಗೆ ನಮ್ಮಲ್ಲಿ ಅನೇಕರಿಗೆ ಗೊತ್ತು.
ಆದರೆ ಕಿತ್ತಳೆಯ ಸಿಪ್ಪೆ ಆರೋಗ್ಯಕ್ಕೆ ಒಳ್ಳೆಯದು ಎಂದು ತಿಳಿಯದೆ ಸಿಪ್ಪೆಯನ್ನು ನೀಟಾಗಿ ಸುಲಿದು ಕಸದ ಬುಟ್ಟಿಗೆ ಹಾಕಿ ಬಿಡುತ್ತಾರೆ. ಇನ್ನು ಮುಂದೆ ಹೀಗೆ ಬಿಸಾಡುವ ಮುನ್ನ ಯೋಚಿಸುವುದು ಒಳ್ಳೆಯದು. ಏಕೆಂದರೆ ಅದರ ಸಿಪ್ಪೆಯಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು ಮತ್ತು ಆರೋಗ್ಯಕ್ಕೂ ಒಳ್ಳೆಯದು! ಕಿತ್ತಳೆಯ ಸಿಪ್ಪೆಯನ್ನು ತ್ವಚೆ ಆರೋಗ್ಯಕ್ಕೆ ಬಳಸಬಹುದು ಅನ್ನುವುದು ಗೊತ್ತಿರುವ ವಿಷಯ. ಆದರೆ ಇದು ಹೇಗೆ ಆರೋಗ್ಯಕ್ಕೆ ಒಳ್ಳೆಯದು ಎಂದು ನೋಡೋಣ ಬನ್ನಿ:

ಎದೆ ಉರಿ
ಇದರ ಸಿಪ್ಪೆ ತಿಂದರೆ ಗ್ಯಾಸ್ ಪ್ರಾಬ್ಲಮ್, ಎದೆ ಉರಿ, ವಾಂತಿ ಮುಂತಾದ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದು ಸುಸ್ತು ಹೋಗಲಾಡಿಸುತ್ತದೆ. ಇದನ್ನು ಹಾಗೇ ತಿನ್ನಲು ಸಾಧ್ಯವಿಲ್ಲ. ಆದ್ದರಿಂದ ಇದನ್ನು ಅಡುಗೆ ಜೊತೆ ಹಾಕಿ ಬೇಯಿಸಿ ನಂತರ ತಿನ್ನಿ. ಕಿತ್ತಳೆ ಸಿಪ್ಪೆಯ ಪುಡಿಯನ್ನು ತಿಂದರೆ ಅಸ್ತಮಾ ಕಡಿಮೆಯಾಗುವುದು.

ಕೊಲೆಸ್ಟ್ರಾಲ್ ಕಡಿಮೆ ಮಾಡಲು
ಕಿತ್ತಳೆಯ ಸಿಪ್ಪೆ ಕೊಲೆಸ್ಟ್ರಾಲ್ ಕಡಿಮೆ ಮಾಡುವ ಸಾಮರ್ಥ್ಯ ಹೊಂದಿದೆ. ಒಬೆಸಿಟಿ ಇರುವವರು ಇದನ್ನು ತಿಂದರೆ ಉತ್ತಮವಾದ ಪ್ರಯೋಜನವನ್ನು ಪಡೆಯಬಹುದು. ಅಲ್ಲದೆ ಇದು ಕರುಳಿನ ಕ್ಯಾನ್ಸರ್ ವಿರುದ್ಧ ಹೋರಾಡುವ ಸಾಮರ್ಥ್ಯ ಹೊಂದಿದೆ.

ತ್ವಚೆ ಆರೈಕೆಗೆ
ಕಿತ್ತಳೆಯ ಸಿಪ್ಪೆಯನ್ನು ಸುಲಿದು ಒಣಗಿಸಿ ಅದನ್ನು ಪುಡಿ ಮಾಡಿ ಮುಖಕ್ಕೆ ಹಚ್ಚಿದರೆ ಮುಖದಲ್ಲಿರುವ ಮೊಡವೆಗಳು ಕಡಿಮೆಯಾಗುವುದು ಹಾಗೂ ಮುಖದ ಕಾಂತಿ ಕೂಡ ಹೆಚ್ಚಾಗುವುದು.

ಕಪ್ಪು ಕಲೆ ನಿವಾರಣೆ
ಮುಖದಲ್ಲಿರುವ ಕಪ್ಪು ಕಲೆಗಳನ್ನು ಹೋಗಲಾಡಿಸುತ್ತದೆ. ಸ್ನಾನದ ನೀರಿನಲ್ಲಿ ಕಿತ್ತಳೆ ಸಿಪ್ಪೆ ಹಾಕಿ ಸ್ನಾನ ಮಾಡಿದರೆ ಮೂಡ್ ಫ್ರೆಶ್ ಆಗುತ್ತದೆ.

ಕೆಟ್ಟ ವಾಸನೆ:
ಕಿತ್ತಳೆ ಸಿಪ್ಪೆಯನ್ನು ಒಣಗಿಸಿ ಪುಡಿ ಮಾಡಿಡಬೇಕು. ಮನೆಯ ಮೂಲೆಯಲ್ಲಿ ಕೆಟ್ಟ ವಾಸನೆ ಬಂದರೆ ಈ ಪುಡಿಯನ್ನು ಹಾಕಿದರೆ ಸಾಕು ದುರ್ವಾಸನೆ ಕಡಿಮೆಯಾಗುವುದು. ಈ ಪುಡಿ ಹಾಕಿ ಡಬ್ಬಿಗಳನ್ನು ತೊಳೆದರೆ ಡಬ್ಬಿಗಳಲ್ಲಿ ಆಹಾರಗಳ ವಾಸನೆ ಉಳಿಯುವುದಿಲ್ಲ.



Click it and Unblock the Notifications
