Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ತುಪ್ಪದ ಅಡುಗೆ ಆರೋಗ್ಯಕ್ಕೆ ಒಳ್ಳೆಯದೇ?
ತುಪ್ಪ ಹಾಕಿ ತಯಾರಿಸಿದ ಅಡುಗೆಯೂ ಸುವಾಸನೆಯ ಜೊತೆಗೆ ತುಂಬಾ ರುಚಿಕರವಾಗಿರುತ್ತದೆ. ಆದ್ದರಿಂದ ವಿಶೇಷವಾದ ಅಡುಗೆಗಳನ್ನು ಮಾಡುವಾಗ ತುಪ್ಪ ಹಾಕಿ ತಯಾರಿಸಲಾಗುವುದು. ಆದರೆ ಈ ತುಪ್ಪ ತಿಂದರೆ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಉಂಟಾಗಬಹುದೇ? ತಿನ್ನುವುದಾದರೆ ಎಷ್ಟು ಪ್ರಮಾಣದಲ್ಲಿ ತಿಂದರೆ ಒಳ್ಳೆಯದು ಎಂಬ ಮಾಹಿತಿಯನ್ನು ತಿಳಿದಿದ್ದರೆ ಒಳ್ಳೆಯದು.
ಶುದ್ಧ ತುಪ್ಪದಲ್ಲಿ ಕೊಬ್ಬಿನಂಶ ಇತರ ಪ್ರಾಣಿಗಳಲ್ಲಿರುವ ಕೊಬ್ಬಿನಂಶಕ್ಕಿಂತ ಕಡಿಮೆ ಇರುತ್ತದೆ. ಆದ್ದರಿಂದ ಮಿತಿಯಲ್ಲಿ ತುಪ್ಪವನ್ನು ತಿಂದರೆ ಆರೋಗ್ಯಕ್ಕೆ ಒಳ್ಳೆಯದು.

ಆದರೆ ಈ ಕೆಳಗಿನ ವ್ಯಕ್ತಿಗಳು ತುಪ್ಪವನ್ನು ತಿನ್ನಬಾರದು.
* ಹೃದಯದ ತೊಂದರೆ ಇರುವವರು, ಅಧಿಕ ತೂಕವಿರುವವರು ತುಪ್ಪ ತಿನ್ನಬಾರದು.
* ಒಬೆಸಿಟಿ ಸಮಸ್ಯೆ ಇರುವವರು ತುಪ್ಪವನ್ನು ತಿನ್ನಬಾರದು.
ಇತರರು ತುಪ್ಪವನ್ನು ಒಂದು ದಿನದಲ್ಲಿ 10-15 ಗ್ರಾಂನಷ್ಟು ಮಾತ್ರ ತಿನ್ನುವುದು ಒಳ್ಳೆಯದು.
ತುಪ್ಪ ತಿಂದರೆ ಈ ಕೆಳಗಿನ ಪ್ರಮುಖ ಪ್ರಯೋಜನಗಳನ್ನು ಪಡೆಯಬಹುದು:
* ತುಪ್ಪ ದೇಹದ ಹಾಗೂ ಮೆದುಳಿನ ಆರೋಗ್ಯವನ್ನು ಹೆಚ್ಚಿಸುತ್ತದೆ.
* ಕೊಲೆಸ್ಟ್ರಾಲ್ ಸಮಸ್ಯೆ ಇರುವವರು ಬೆಣ್ಣೆ ತಿನ್ನಬಾರದು, ಆದರೆ ಶುದ್ಧ ತುಪ್ಪವನ್ನು ಸ್ವಲ್ಪ ಪ್ರಮಾಣದಲ್ಲಿ ತಿನ್ನಬಹುದು.
* ಕಡಿಮೆ ಪ್ರಮಾಣದ ತುಪ್ಪ ಆಹಾರದಲ್ಲಿದ್ದರೆ ಜೀರ್ಣಕ್ರಿಯೆಗೂ ಒಳ್ಳೆಯದು.
* ತುಪ್ಪದಲ್ಲಿ ವಿಟಮಿನ್ ಎ, ಡಿ, ಇ ಮತ್ತು ಕೆ ವಿಟಮಿನ್ ಅಂಶವಿರುತ್ತದೆ.
ಅಡುಗೆಯಲ್ಲಿ ತುಪ್ಪ: ತುಪ್ಪವನ್ನು ಅಡುಗೆಗೆ ಬಳಸುವಾಗ ಗಮನಿಸಬೇಕಾದ ಮುಖ್ಯವಾದ ವಿಷಯವೆಂದರೆ ತುಂಬಾ ಬಿಸಿ ಮಾಡಬಾರದು. ಯಾವುದೇ ಕಲೆಬೆರೆಕೆಯಿಲ್ಲದ ತುಪ್ವನ್ನು ಅಡುಗೆಗೆ ಬಳಸಿ, ಆದರೆ ಮಿತಿಯಲ್ಲಿ ಬಳಸಿ ಆರೋಗ್ಯವನ್ನು ಹೆಚ್ಚಿಸಿಕೊಳ್ಳಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
