Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಪ್ರತಿ ದಿನ ಸೋಂಪು ತಿನ್ನಿ, ಆರೋಗ್ಯವಾಗಿರಿ

ಬಾಯಿ ದುರ್ವಾಸನೆ ಹೋಗಲಾಡಿಸುತ್ತದೆ: ಸೋಂಪು ಕಾಳನ್ನು ಪ್ರತಿದಿನ ಊಟವಾದ ಬಳಿಕ ಒಂದೆರಡು ಚಮಚ ತಿನ್ನುವುದರಿಂದ ಅಜೀರ್ಣ ನಿವಾರಣೆಯಾಗುತ್ತದೆ. ಊಟದ ನಂತರ ತಿನ್ನುವುದರಿಂದ ಬಾಯಲ್ಲಿನ ವಾಸನೆಯೂ ಕಮ್ಮಿಯಾಗುತ್ತದೆ.
ಕಣ್ಣಿಗೆ ಒಳ್ಳೆಯದು: ಸೋಂಪು ಕಾಳನ್ನು ರಾತ್ರಿ ನೀರಿನಲ್ಲಿ ನೆನೆಸಿ, ಬೆಳಗ್ಗೆ ಅದರ ನೀರಿನಿಂದ ಕಣ್ಣುಗಳನ್ನು ತೊಳೆಯುವುದರಿಂದ ಕಣ್ಣಿನ ಅನೇಕ ತೊಂದರೆಗಳು ನಿವಾರಣೆಗಳಾಗುತ್ತವೆ.
ಮುಟ್ಟಿನ ನೋವು ನಿವಾರಿಸುತ್ತೆ: ಸೋಂಪು ಅನ್ನು ನೀರಿನಲ್ಲಿ ಕುದಿಸಿ, ಅದನ್ನು ಸೇವಿಸುವುದರಿಂದ ಮಹಿಳೆಯರಲ್ಲಿ ಮಾಸಿಕ ದಿನಗಳಲ್ಲಿ ಉಂಟಾಗುವ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಹೊಟ್ಟೆನೋವು ಮತ್ತು ಇತರೆ ತೊಂದರೆ ನಿವಾರಣೆಯಾಗುವುದು ಹಾಗೂ ಮುಟ್ಟು ನಿಯಮಿತವಾಗುತ್ತದೆ.
ಮಕ್ಕಳ ಹೊಟ್ಟೆ ಸಮಸ್ಯೆ ನಿವಾರಿಸುತ್ತೆ: ಇದು ಮಕ್ಕಳಿಗೂ ಒಳ್ಳೆಯದು. ಇದರಿಂದ ಅವರಲ್ಲಿ ಉಂಟಾಗುವ ಉದರ ತೊಂದರೆಗಳ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ.
ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ: ಅಜೀರ್ಣ ಸಮಸ್ಯೆಯಿಂದ ಬಳಲುವವರು ಊಟದ ನಂತರ ಸ್ವಲ್ಪ ಸೋಂಪು ತಿಂದರೆ ಸಾಕು ಜೀರ್ಣಕ್ರಿಯೆಗೆ ಸಹಕಾರಿಯಾಗುವುದು
ರಕ್ತವನ್ನು ಶುದ್ಧ ಮಾಡುತ್ತದೆ: ದೇಹದಲ್ಲಿರುವ ಕಶ್ಮಲಗಳನ್ನು ಹೋಗಲಾಡಿಸಿ ರಕ್ತವನ್ನು ಶುದ್ಧೀಕರಿಸುತ್ತದೆ.
ಮೆದುಳಿನ ಆರೋಗ್ಯ: ಸೋಂಫು ಮೆದುಳಿನ ಸಾಮರ್ಥ್ಯ ಹೆಚ್ಚಿಸುವ ಆಹಾರಗಳಲ್ಲಿ ಒಂದಾಗಿದೆ. ಇದು ಮೆದುಳಿನ ಚಟುವಟಿಕೆಗಳನ್ನು ಹೆಚ್ಚಿಸುತ್ತದೆ.
ಉಸಿರಾಟದ ಕ್ರಿಯೆಗೆ ಸಹಾಯ ಮಾಡುತ್ತದೆ: ಅಲರ್ಜಿಯಿಂದ ಕೆಮ್ಮು ಮತ್ತು ಉಸಿರಾಟದ ತೊಂದರೆಗಳು ಕಾಣಿಸಿಕೊಂಡಿದ್ದರೆ ಇದನ್ನು ತಿಂದರೆ ಗುಣವಾಗುವುದು.
ತ್ವಚೆಯ ಆರೋಗ್ಯ: ಸೋಂಪನ್ನು ಪ್ರತಿನಿತ್ಯ ತಿಂದರೆ ತ್ವಚೆಯ ಹೊಳಪನ್ನು ಹೆಚ್ಚಿಸುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
