Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಹಲಸಿನ ಹಣ್ಣು ತಿಂದರೆ 10 ಪ್ರಯೋಜನಗಳು!
ಕೆಲವೊಂದು ಹಣ್ಣುಗಳು ವರ್ಷಪೂರ್ತಿ ಸಿಗುವುದಿಲ್ಲ, ಸೀಸನ್ ಸಮಯದಲ್ಲಿ ಮಾತ್ರ ದೊರೆಯುತ್ತದೆ, ಅಂತಹ ಸೀಸನ್ ಹಣ್ಣಾದ ಹಲಸಿನ ಹಣ್ಣು ಏಪ್ರಿಲ್ ತಿಂಗಳಿನಿಂದ ಜುಲೈ ಅಥವಾ ಆಗಸ್ಟ್ ತಿಂಗಳವರೆಗೆ ಸಿಗುತ್ತದೆ. ಲೇಟಾಗಿ ಕಾಯಿ ಬಿಟ್ಟಿದ್ದ ಮರದಲ್ಲಿ ಮಾತ್ರ ಹಲಸಿನ ಹಣ್ಣುಗಳು ಸೆಪ್ಟಂಬರ್ ತಿಂಗಳಿನವರೆಗೆ ಇರುತ್ತದೆ, ನಂತರ ತಿನ್ನಬೇಕೆಂದರೆ ಮುಂದಿನ ವರ್ಷ ಏಪ್ರಿಲ್ ವರೆಗೂ ಕಾಯಬೇಕು.
ಮಳೆ ಬಿದ್ದ ಮೇಲೆ ಹಲಸಿನ ಹಣ್ಣನ್ನು ತಿಂದರೆ ಕಾಯಿಲೆ ಬರಬಹುದು ಎಂಬ ಭಯ ನಮ್ಮಲ್ಲಿ ಅನೇಕರಲ್ಲಿ ಇದೆ. ಆದರೆ ಈ ಹಣ್ಣು ಕಾಯಿಲೆ ತರುವುದಿಲ್ಲ, ಕಾಯಿಲೆ ಹೋಗಲಾಡಿಸಲು ಸಹಕಾರಿಯಾಗಿದೆ. ಇದನ್ನು ತಿಂದರೆ ಈ ಕೆಳಗಿನ 10 ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ಸಲಹೆ: ಇದನ್ನು ತಿಂದರೆ ಜ್ವರ ಬರುವುದಿಲ್ಲ, ಆದರೆ ಜ್ವರ ಇದ್ದಾಗ ಈ ಹಣ್ಣುಗಳನ್ನು ತಿನ್ನಲು ಹೋಗಬೇಡಿ.
ಹಲಸಿನ ಹಣ್ಣಿನ ಆರೋಗ್ಯಕರ ಗುಣಗಳು:
1.ರೋಗನಿರೋದಕ ಶಕ್ತಿ ಹೆಚ್ಚು ಮಾಡುತ್ತದೆ: ಹಲಸಿನ ಹಣ್ಣು ತಿಂದರೆ ಕಾಯಿಲೆ ಬರುತ್ತದೆ ಎಂದು ತಿನ್ನಲು ಭಯಪಡುವಾಗ ಇದನ್ನು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಅಂದರೆ ಆಶ್ಚರ್ಯವಾಗುವುದು ಸಹಜ. ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ತಮ ಪೋಷಕಾಂಶಗಳಿದ್ದು ಶೀತ, ಸೋಂಕು ಇವುಗಳನ್ನು ತಪ್ಪಿಸಲು ಸಹಕಾರಿಯಾಗಿದೆ. ಇದರಲ್ಲಿ antioxidant ಪ್ರಮಾಣ ಅಧಿಕವಾಗಿದೆ.
2. ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ: ದೇಹದಲ್ಲಿ ಖನಿಜಾಂಶಗಳ ಕೊರತೆ ಉಂಟಾದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗುತ್ತದೆ. ಹಲಸಿನ ಹಣ್ಣಿನಲ್ಲಿ ಖನಿಜಾಂಶಗಳು ಅಧಿಕವಾಗಿ ಇರುವುದರಿಂದ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.
3. ಮೂಳೆ ಸವೆತವನ್ನು ತಡೆಗಟ್ಟುತ್ತದೆ: ಈ ಹಣ್ಣಿನಲ್ಲಿ ಅಧಿಕ ಮ್ಯಾಗ್ನಿಷಿಯಂ ಮತ್ತು ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ. ಮ್ಯಾಗ್ನಿಷಿಯಂ, ಕ್ಯಾಲ್ಸಿಯಂ, ಪೊಟಾಷ್ಯಿಯಂ ಅಧಿಕವಿರುವ ಆಹಾರ ತಿಂದರೆ ಮೂಳೆಗಳು ಗಟ್ಟಿಯಾಗುವುದು.
4. ಥೈರಾಯ್ಡ್ ಗ್ರಂಥಿಯನ್ನು ಆರೋಗ್ಯಕರವಾಗಿ ಇಡುತ್ತದೆ: ಹಲಸಿನ ಹಣ್ಣಿನಲ್ಲಿರುವ ಖನಿಜಂಶಗಳು (micromineral) ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಕಾಪಾಡುತ್ತದೆ. ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿಯನ್ನು ಸರಿ ಪ್ರಮಾಣದಲ್ಲಿ ಇಡಲು ಥೈರಾಯ್ಡ್ ಗ್ರಂಥಿ ಮುಖ್ಯ ಪಾತ್ರವಹಿಸುತ್ತದೆ.
5. ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ: ಒಂದು ಹಲಸಿನ ಹಣ್ಣಿನಲ್ಲಿ ಬಾಳೆಹಣ್ಣಿನಲ್ಲಿರುವಷ್ಟು ಪೊಟಾಷ್ಯಿಯಂ ಅಂಶವಿರುತ್ತದೆ. ಪೊಟಾಷ್ಯಿಯಂ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.
6. ಜೀರ್ಣಶಕ್ತಿ: ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆ ಇರುವವರು ಇದನ್ನು ತಿನ್ನುವುದು ಒಳ್ಳೆಯದು.
7. ಇರುಳು ಕುರುಡುತನ ನಿವಾರಣೆಗೆ ಸಹಕಾರಿಯಾಗಿದೆ: ಇದರಲ್ಲಿ ಕ್ಯಾರೆಟ್ ನಲ್ಲಿರುವ ಕಾಲು ಭಾಗದಷ್ಟು ವಿಟಮಿನ್ ಎ ಅಂಶವಿರುವುದರಿಂದ ಹಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ವಿಟಮಿನ್ ಎ ಕೊರತೆ ಉಂಟಾದರೆ ಇರುಳು ಕುರುಡುತನ ಉಂಟಾಗುವುದು.
8.ಹೃದಯದ ಸ್ವಾಸ್ಥ್ಯ ಹೆಚ್ಚಿಸುತ್ತದೆ: ಇದರಲ್ಲಿ ವಿಟಮಿನ್ ಬಿ6 ಅಂಶವಿರುವುದರಿಂದ ರಕ್ತದಲ್ಲಿರುವ homocystein ಪ್ರಮಾಣ ಕಡಿಮೆ ಮಾಡಿ ಹೃದಯದ ಸ್ವಾಸ್ಥ್ಯ ಹೆಚ್ಚಿಸಲು ಸಹಕಾರಿಯಾಗಿದೆ.
9. ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ: ಇದರಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ದೇಹದಲ್ಲಿ ರಕ್ತ ಸರಾಗವಾಗಿ ಹರಿಯಲು ಸಹಕಾರಿಯಾಗಿದೆ. ಮೂಳೆಗಳನ್ನು ಬಲಪಡಿಸಿ ಶರೀರದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ.
10. ರಕ್ತ ಹೀನತೆಯನ್ನು ತಡೆಗಟ್ಟುತ್ತದೆ: ಇದರಲ್ಲಿ ಕಬ್ಬಿಣದಂಶ ಕೂಡ ಇರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ಇದನ್ನು ತಿನ್ನುವುದು ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications









