Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಪ್ರತಿಯೊಬ್ಬರು ತಿನ್ನಲೇಬೇಕಾದ ಹಣ್ಣು-ಅಂಜೂರ
ಅಂಜೂರದ್ಲಲಿರುವ ಆರೋಗ್ಯಕರ ಗುಣಗಳನ್ನು ನೋಡುವಾಗ ಪ್ರತಿಯೊಬ್ಬರು ಇದನ್ನು ತಿನ್ನಲೇಬೇಕೆಂದು ಸಲಹೆ ನೀಡುವುದು ತಪ್ಪಲ್ಲ ಎಂದೆನಿಸುತ್ತದೆ. ಇದರಲ್ಲಿ ಖನಿಜಾಂಶಗಳು ಹಾಗೂ ವಿಟಮಿನ್ ಗಳು ಹೇರಳವಾಗಿವೆ.
ಇದರಲ್ಲಿರುವ ವಿಟಮಿನ್ ಎ, ವಿಟಮಿನ್ ಬಿ1, ವಿಟಮಿನ್ ಬಿ2, ಕ್ಯಾಲ್ಸಿಯಂ, ಕಬ್ಬಿಣದಂಶ, ರಂಜಕದ ಅಂಶ, ಸೋಡಿಯಂ,ಕ್ಲೋರೀನ್ ಈ ಅಂಶಗಳು ಈ ಕೆಳಗಿನ ಕಾಯಿಲೆಗಳನ್ನು ತಡೆಗಟ್ಟುವಲ್ಲಿ ಸಹಕಾರಿಯಾಗಿದೆ.
ಅಂಜೂರದ ಆರೋಗ್ಯಕರ ಗುಣಗಳು

1. ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ: ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿರುವವರು ಈ ಅಂಜೂರವನ್ನು ಪ್ರತಿನಿತ್ಯ ತಿಂದರೆ ಸಾಕು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಬಹುದು.
2. ಸಮತೂಕಕ್ಕೆ ಸಹಾಯ ಮಾಡುತ್ತದೆ: ಇದರಲ್ಲಿ ನಾರಿನಂಶ ಅಧಿಕವಿರುವುದರಿಂದ ಹಸಿವನ್ನು ನಿಯಂತ್ರಿಸುತ್ತದೆ, ಹಸಿವು ಕಮ್ಮಿಯಿದ್ದರೆ ಮಿತಿಯಲ್ಲಿ ಊಟ ಮಾಡುತ್ತೇವೆ. ಇದರಿಂದಾಗಿ ಸಮತೂಕವನ್ನು ಪಡೆಯಬಹುದು.
3.ಮೆನೋಪೆಸ್ ನಂತರದ ಸ್ತನ ಕ್ಯಾನ್ಸರ್ ತಡೆಯುತ್ತದೆ: ಮೆನೋಪಸ್ ನಂತರ ಪ್ರತಿದಿನ ಅಂಜೂರ ತಿನ್ನುವುದು ಒಳ್ಳೆಯದು, ಇದರಿಂದ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆಯನ್ನು ತಡೆಗಟ್ಟಬಹುದು ಎಂದು ವೈದ್ಯಕೀಯವಾಗಿ ಸಾಬೀತಾಗಿದೆ.
4. ಲೈಂಗಿಕ ನಿಶ್ಯಕ್ತಿ: ಇದು ಲವ್ ಹಾರ್ಮೋನ್ ಹೆಚ್ಚಾಗುವಂತೆ ಮಾಡಿ ಲೈಂಗಿಕ ನಿಶ್ಯಕ್ತಿಯನ್ನು ಹೋಗಲಾಡಿಸುತ್ತದೆ.
5. ಮೂಳೆಗಳನ್ನು ಬಲಪಡಿಸುತ್ತದೆ: ಇದರಲ್ಲಿ ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳ ಆರೋಗ್ಯಕ್ಕೆ ಒಳ್ಳೆಯದು.
6. ಹೃದಯದ ಸ್ವಾಸ್ಥ್ಯ ಹೆಚ್ಚಿಸುತ್ತದೆ: ಅಂಜೂರ ರಕ್ತದಲ್ಲಿರುವ triglyceride ಅಂಶವನ್ನು ಕಡಿಮೆ ಮಾಡುತ್ತದೆ. ಈ ಅಂಶ ಹೆಚ್ಚಾದರೆ ಒಬೆಸಿಟಿ ಮತ್ತು ಹೃದಯ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುವುದು.
7. ಮಧುಮೇಹದ ವಿರುದ್ಧ ಹೋರಾಡುತ್ತದೆ: ಇದು ಸಿಹಿಯಾಗಿದ್ದರೂ ಮಧುಮೇಹಿಗಳು ಇದನ್ನು ತಿನ್ನಬಹುದು. ಏಕೆಂದರೆ ಇದು ಮಧುಮೇಹವನ್ನು ನಿಯಂತ್ರಣದಲ್ಲಿಡುವ ಸಾಮರ್ಥ್ಯವನ್ನು ಹೊಂದಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
