Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಇದು ಅತ್ಯಂತ ಪರಿಣಾಮಕಾರಿಯಾದ ಮನೆ ಮದ್ದು!

ಆದರೆ ಆ ನೈಸರ್ಗಿಕ ವಿಧಾನಗಳು ಯಾವುವು ಎಂದು ನಮಗೆ ಹೆಚ್ಚಿನ ಭಾರಿ ಗೊತ್ತಿರುವುದೇ ಇಲ್ಲ. ಸುಲಭವಾಗಿ ಗುಣಪಡಿಸಬಹುದಾದ ಕಾಯಿಲೆಗೆ ಸಾಕಷ್ಟು ದುಡ್ಡು ಆಸ್ಪತ್ರೆಗೆ ಸುರಿಯುವುದರ ಜೊತೆಗೆ ಆಗಾಗ ಆಸ್ಪತ್ರೆಗೆ ಅಲೆದಾಡುತ್ತಿರುತ್ತೇವೆ. ಈ ಕೆಳಗೆ ಹೇಳಿದಂತಹ ಕಾಯಿಲೆಗಳಿಗೆ ಇಲ್ಲಿ ಹೇಳಿರುವ ಮನೆ ಔಷಧಿ ಮಾಡಿದ್ದೇ ಆದರೆ ಕಾಯಿಲೆ ಗುಣಮುಖವಾಗುವುದು ಖಂಡಿತ.
ಮುಟ್ಟಿನ ನೋವಿಗೆ ಕ್ಯಾಲ್ಸಿಯಂ: ಕೆಲವರಿಗೆ ಮುಟ್ಟಿನ 2-3 ದಿನದ ಮುಂಚೆ ಮತ್ತು ಮುಟ್ಟಿನ ಸಮಯದಲ್ಲಿ ತುಂಬಾ ಕಿಬ್ಬೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ. ದೇಹದಲ್ಲಿ ಕ್ಯಾಲ್ಸಿಯಂ ಕೊರತೆಯಿದ್ದರೆ ಈ ರೀತಿಯ ನೋವು ಕಾಣಿಸಿಕೊಳ್ಳುವುದು. ಕ್ಯಾಲ್ಸಿಯಂ ಅಧಿಕ ಇರುವ ಆಹಾರವನ್ನು ಸೇವಿಸುವುದರಿಂದ ಮತ್ತು ಕ್ಯಾಲ್ಸಿಯಂ ಮಾತ್ರೆಗಳನ್ನು ನುಂಗುವುದರಿಂದ ಈ ರೀತಿಯ ನೋವನ್ನು ತಡೆಗಟ್ಟಬಹುದು.
ತ್ವಚೆ ಒಡೆಯುವ ಸಮಸ್ಯೆಗೆ ಟೀ ಟ್ರೀ ಆಯಿಲ್: ತ್ವಚೆಯಲ್ಲಿ ಬಿರುಕು ಕಂಡು ಬರುವುದು, ಗಾಯ, ಚರ್ಮದಲ್ಲಿ ಉರಿ ಕಂಡು ಬರುವುದು ಈ ರೀತಿಯ ಸಮಸ್ಯೆ ಇದ್ದರೆ ಟೀ ಗಿಡದ ಎಣ್ಣೆ (Tea Tree Oil) ಹಚ್ಚಿದರೆ ಗುಣಮುಖವಾಗುವುದು.
ಸೈನಸ್ ತಲೆನೋವಿಗೆ ಸ್ಟೀಮ್ ಥೆರಪಿ: ತುಂಬಾ ಬಿಸಿ ನೀರನ್ನು ಒಂದು ಪಾತ್ರೆಯಲ್ಲಿ ಹಾಕಿಕೊಂಡು ಅದರಲ್ಲಿ 2-3 ಹನಿ ನೀಲಿಗಿರಿ ಎಣ್ಣೆ ಹಾಕಿ ಆವಿ ತೆಗೆದುಕೊಂಡರೆ ಸೈನಸ್ ತಲೆನೋವು ಕಡಿಮೆಯಾಗುವುದು.
ಮೂತ್ರ ವಿಸರ್ಜನೆ ಸಮಸ್ಯೆ ನಿವಾರಣೆಗೆ ಕ್ರಾನ್ ಬೆರಿ ಜ್ಯೂಸ್ : ಕ್ರಾನ್ ಬೆರಿ ಜ್ಯೂಸ್ (cranberry juice) ಕುಡಿಯುವುದರಿಂದ ಮೂತ್ರ ವಿಸರ್ಜನೆ ಸರಿಯಾಗಿ ಆಗುವಂತೆ ಸಹಕಾರಿಯಾಗಿದೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ. ಕ್ರಾನ್ ಬೆರಿ ಜ್ಯೂಸ್ ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಮೂತ್ರ ವಿಸರ್ಜನೆ ಸಮಸ್ಯೆಯಿಂದ ಬಳಲುತ್ತಿರುವವರು ಇದನ್ನು ಬಳಸಿದರೆ ಉತ್ತಮ ಪ್ರಯೋಜನವನ್ನು ಕಾಣಬಹುದು.
ಹಾಟ್ ಪ್ಲಾಷ್ ಗೆ ಕರಿಜೀರಿಗೆ : ಮುಟ್ಟು ನಿಲ್ಲುವ ಸಮಯದಲ್ಲಿ ಮಹಿಳೆಯರಿಗೆ ಹಾಟ್ ಪ್ಲಾಷ್ ಸಮಸ್ಯೆ ಕಂಡು ಬರುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಕರಿ ಜೀರಿಗೆಯನ್ನು ಬಳಸಿದರೆ ಸಾಕು, ಹಾಟ್ ಪ್ಲಾಷ್ ಸಮಸ್ಯೆ ಕಡಿಮೆಯಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
