Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
ಮಾನಸಿಕ ಒತ್ತಡವನ್ನು ಹೊರದಬ್ಬುವುದು ಹೇಗೆ?

1. ಒತ್ತಡಕ್ಕೆ ಕಾರಣವೇನು ಎಂದು ಕಂಡು ಹಿಡಿಯಬೇಕು: ಕಾಯಿಲೆ ಗೊತ್ತಾದರೆ ಮಾತ್ರ ಔಷಧಿ ಮಾಡಲು ಸುಲಭ. ಅದೇ ರೀತಿ ತುಂಬಾ ಮಾನಸಿಕ ಒತ್ತಡವಿದ್ದರೆ ಅದಕ್ಕೆ ಕಾರಣವೇನು ಎಂದು ಕಂಡುಹಿಡಿಯಬೇಕು. ಮನೆಯೇ, ಕೆಲಸವೇ, ಟಾರ್ಗೆಟ್ ಇನ್ಯಾವೊದೋ ಸಮಸ್ಯೆ ಇರಬಹುದು. ಮೊದಲು ಆ ಸಮಸ್ಯೆಯ ಬಗ್ಗೆ ಯೋಚಿಸಿ.
2. ಒತ್ತಡಕ್ಕೆ ಹೊಂದಿಕೊಂಡು ಹೋಗಲು ಸಾಧ್ಯವೇ ಎಂದು ಯೋಚಿಸಿ: ಬದುಕು ಎಂದ ಮೇಲೆ ಒಂದಲ್ಲಾ ಒಂದು ಒತ್ತಡವಿದ್ದೇ ಇರುತ್ತದೆ. ಈ ಒತ್ತಡವನ್ನು ಸಹಿಸಲು ಸಾಧ್ಯನಾ ಎಂದು ಯೋಚಿಸಿ. ಪ್ರತಿಯೊಬ್ಬರಿಗೆ ಅವರವರ ಸಮಸ್ಯೆ ತುಂಬಾ ದೊಡ್ಡದಾಗಿ ಕಾಣುತ್ತದೆ. ಆದ್ದರಿಂದ ಇಷ್ಟು ಒತ್ತಡವನ್ನು ಸಹಿಸುವ ಅವಶ್ಯಕತೆ ಇದೆಯೇ ಎಂದು ಯೋಚಿಸಿ.
3. ಆ ಪರಿಸ್ಥಿತಿಯಿಂದ ಬದಲಾಗಲು ಪ್ರಯತ್ನಿಸಿ: ಒತ್ತಡಕ್ಕೆ ಹೊಂದಿಕೊಳ್ಳಲು ಸಾಧ್ಯವಾಗುತ್ತಿಲ್ಲ ಅಂದರೆ ಆ ಪರಿಸ್ಥಿತಿಯಿಂದ ಹೊರಬರಲು ಪ್ರಯತ್ನಿಸಿ. ಕೆಲಸದಲ್ಲಿ ಟಾರ್ಗೆಟ್ ಮುಟ್ಟಲಿಲ್ಲ ಅಂದರೆ ಅಸಮರ್ಥರು ಅನ್ನಿಸಿಕೊಳ್ಳಬೇಕಾಗುತ್ತದೆ, ಇದನ್ನು ನೆನೆಸಿಕೊಂಡರೆ ಮತ್ತಷ್ಟು ಒತ್ತಡ ಉಂಟಾಗುತ್ತದೆ. ಆದರೆ ಸಹಿಸಲು ಅಸಾಧ್ಯವಾದ ಒತ್ತಡವನ್ನು ಹೊರಲು ಸಿದ್ಧರಾಗಬೇಡಿ, ಯಾವುದೇ ಗುರಿ ಮುಟ್ಟಲು ಸ್ಪಷ್ಟ ನಿರ್ಧಾರದಿಂದ ಮಾತ್ರ ಸಾಧ್ಯ ಹೊರತು ಒತ್ತಡದಿಂದಲ್ಲ.
4. ವಾಸ್ತವತೆಯನ್ನು ಒಪ್ಪಿಕೊಳ್ಳುವುದು: ಕೆಲವೊಂದು ವಿಷಯಗಳನ್ನು ಬದಲಾಯಿಸಲು ಸಾಧ್ಯವಿಲ್ಲ, ಅಂತಹ ಸಂದರ್ಭದಲ್ಲಿ ವಾಸ್ತವತೆಯನ್ನು ಒಪ್ಪಿಕೊಳ್ಳುವುದರಿಂದ ಅರ್ಧದಷ್ಟು ಒತ್ತಡ ಕಡಿಮೆಯಾಗುತ್ತದೆ. ನಮ್ಮಿಂದ ಆಗದ ವಿಷಯದ ಬಗ್ಗೆ ಚಿಂತಿಸಿ ಕೊರಗಿ ಅನಾರೋಗ್ಯ ಹೆಚ್ಚು ಮಾಡಿಕೊಳ್ಳುವುದಕ್ಕಿಂತ ವಾಸ್ತವತೆಯನ್ನು ಒಪ್ಪಿಕೊಳ್ಳಿ. ಈ ರೀತಿ ಮಾಡಿದರೆ ಒತ್ತಡ ಕಡಿಮೆಯಾಗುತ್ತದೆ.
5. ಮನರಂಜನೆ ವಿಷಯದ ಕಡೆಗೆ ಗಮನ ಹರಿಸಬೇಕು: ತುಂಬಾ ಜನರು ಒತ್ತಡ ಹೆಚ್ಚಾದಂತೆ ಒತ್ತಡ ಕಡಿಮೆ ಮಾಡಿಕೊಳ್ಳಲು ಧೂಮಪಾನ, ಮದ್ಯಪಾನದಂತಹ ಕೆಟ್ಟ ಚಟಗಳನ್ನು ಅಭ್ಯಾಸ ಮಾಡಿಕೊಳ್ಳುತ್ತಾರೆ. ಈ ರೀತಿಯ ಅಭ್ಯಾಸದಿಂದ ಮೈಮರೆತು ಒತ್ತಡವನ್ನು ಕ್ಷಣ ಕಾಲ ಮರೆಯಬಹುದು ಅಲ್ಲದೆ ಈ ಅಭ್ಯಾಸಗಳಿಂದ ಜೀವನ ಮತ್ತಷ್ಟು ನರಕವಾಗುವುದು. ಅದರ ಬದಲು ತುಂಬಾ ಒತ್ತಡವಿದ್ದಾಗ ಪ್ರಾಣಾಯಾಮ ಮಾಡುವುದು ಒಳ್ಳೆಯ ಸಂಗೀತವನ್ನು ಕೇಳುವುದು, ಮನಸ್ಸಿಗೆ ಖುಷಿ ಕೊಡುವ ಆಟ ಆಡುವುದು ಇವುಗಳಿಂದ ಮಾನಸಿಕ ಒತ್ತಡವನ್ನು ಕಡಿಮೆ ಮಾಡಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications