Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ದೇಹದ ಆರೋಗ್ಯ ಹೆಚ್ಚಿಸಲು-ನಟ್ಸ್

ನಟ್ಸ್ ನಿಂದ ದೊರೆಯುವ ಪ್ರಯೋಜನಗಳು:
1. ಬಾದಾಮಿ: ಬಾದಾಮಿಯನ್ನು ದಿನವೂ ಸೇವಿಸುವುದರಿಂದ ಹೃದಯ ಸ್ವಾಸ್ಥ್ಯವಾಗಿರುತ್ತೆ. ಇದು ಹೃದಯಕ್ಕೆ ರಕ್ತಸಂಚಲನ ಮಾಡುವ ನಾಳಗಳಲ್ಲಿನ ಕೊಲೆಸ್ಟ್ರಾಲ್ ಕಡಿಮೆಗೊಳಿಸಿ ಹೃದಯವನ್ನು ಆರೋಗ್ಯವಾಗಿಡುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ.
2. ಗೋಡಂಬಿ: ದಿನವೂ ಒಂದೆರಡು ಗೋಡಂಬಿ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು. ಇದರಲ್ಲಿರುವ ಒಲಿಯಿಕ್ ಆಸಿಡ್ ಹೃದಯಕ್ಕೆ ಉತ್ತಮ.ಇದರಲ್ಲಿ ಬಯಾಟಿನ್ ಎಂಬ ಅಂಶ, ತಾಮ್ರಾಂಶ, ಮ್ಯಾಗ್ನೀಶಿಯಂ ಮತ್ತು ಕಬ್ಬಿಣಾಂಶ ಎಲ್ಲವೂ ರಕ್ತಕಣಗಳನ್ನು ಸರಿದೂಗಿಸಿಕೊಂಡು ಹೋಗುತ್ತದೆ. ಹೃದಯದ ಸ್ನಾಯುಗಳಿಗೂ ಬಲ ನೀಡುತ್ತದೆ.
3. ಪಿಸ್ತಾ: ಪಿಸ್ತಾದಲ್ಲಿರುವ ಫೈಬರ್ ಹೃದಯಕ್ಕೆ ಆರೋಗ್ಯಕರ. ಪಿಸ್ತಾ ತಿನ್ನುವುದರಿಂದ ರಕ್ತನಾಳದಲ್ಲಿ ತುಂಬಿಕೊಂಡ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ಇದು ಕ್ಯಾನ್ಸರ್ ನಂತರ ಕಾಯಿಲೆಯನ್ನೂ ತಡೆಗಟ್ಟುತ್ತದೆ.
4. ಅಕ್ರೋಡ: ವಾಲ್ ನಟ್ ಪೌಷ್ಟಿಕಾಂಶಗಳ ಗೂಡು ಎಂದರೆ ತಪ್ಪಾಗುವುದಿಲ್ಲ. ಇದರಲ್ಲಿ ವಿಟಮಿನ್ ಬಿ 1,2,3,6 ಮತ್ತು ಇ ಇದ್ದು, ತಾಮ್ರಾಂಶ, ಕ್ಯಾಲ್ಸಿಯಂ, ಮ್ಯಾಂಗನೀಸ್ ಮತ್ತು ಕಬ್ಬಿಣಾಂಶ ತುಂಬಿಕೊಂಡಿದೆ. ವಾಲ್ ನಟ್ ರಕ್ತದ ಸಕ್ಕರೆ ಅಂಶವನ್ನು ಸಮತೋಲನದಲ್ಲಿರಿಸುತ್ತದೆ. ಹೃದಯದ ಆರೋಗ್ಯಕ್ಕೆ ಅತಿ ಅವಶ್ಯಕವಾಗಿರುವ ಒಮೆಗಾ 3 ಆಸಿಡ್ ಅನ್ನು ಸಹ ದೇಹಕ್ಕೆ ಒದಗಿಸುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ಉತ್ತಮ ಆರೋಗ್ಯ ದೊರೆಯುತ್ತದೆ.
5. ಪೆಕಾನ್ ನಟ್ಸ್: ಪೆಕಾನ್ ನಟ್ಸ್ ನಲ್ಲಿ 15 ಕ್ಕೂ ಹೆಚ್ಚು ರೀತಿಯ ವಿಟಮಿನ್ ಗಳು ಲಭ್ಯವಿರುವುದರಿಂದ ಹೃದಯವನ್ನು ಆರೋಗ್ಯವಾಗಿ ಇಡಲು ಸಹಾಯ ಮಾಡುತ್ತದೆ. ಇದನ್ನು ತಿಂದರೆ ಮೂಳೆ ಮತ್ತು ಸ್ನಾಯುಗಳೂ ಗಟ್ಟಿಗೊಳ್ಳುತ್ತದೆ
ದಿನನಿತ್ಯ ಪ್ರೊಟೀನ್ ಇರುವ ಆಹಾರ ಸೇವಿಸಿ, ಆರೋಗ್ಯವನ್ನು ಹೆಚ್ಚಿಸಿಕೊಳ್ಳಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
