Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
ಮಸಾಲೆಯಲ್ಲಿದೆ ಮಧುಮೇಹಕ್ಕೆ ಮದ್ದು
ಮಧುಮೇಹ ಬಂದರೆ ಅದನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ. ಆದರೆ ತಡೆಗಟ್ಟಬಹುದು. ಮಧುಮೇಹವನ್ನು ಇನ್ಸುಲಿನ್ ಚುಚ್ಚುಮದ್ದು ಮತ್ತು ಡಯಟ್ ಇವುಗಳಿಂದ ತಡೆಗಟ್ಟಬಹುದು. ಈ ಹಿಂದೆ ಬರೆದ ಲೇಖನದಲ್ಲಿ ಶುಂಠಿ ಬಳಸಿ ಮಧುಮೇಹವನ್ನು ತಡೆಗಟ್ಟುತ್ತದೆ ಎಂದು ಹೇಳಿದ್ದೆವು. ಶುಂಠಿ ಮಧುಮೇಹವನ್ನು ತಡೆಯುವಲ್ಲಿ ಪ್ರಮುಖ ಪಾತ್ರವಹಿಸಿದರೆ ಈ ಕೆಳಗಿನ ಮಸಾಲೆ ಪದಾರ್ಥಗಳು ಮಧುಮೇಹವನ್ನು ನಿಯಂತ್ರಣದಲ್ಲಿಡಲು ಮತ್ತಷ್ಟು ಸಹಕಾರಿಯಾಗಿದೆ.

ಚಕ್ಕೆ: ಚಕ್ಕೆ ದೇಹದಲ್ಲಿ ಗ್ಲೂಕೋಸ್ ಪ್ರಮಾಣವನ್ನು ಹೆಚ್ಚು ಮಾಡಿ ದೇಹದಲ್ಲಿ ಇನ್ಸುಲಿನ್ ಉತ್ಪತ್ತಿಯನ್ನು ಹೆಚ್ಚು ಮಾಡಲು ಸಹಕಾರಿಯಾಗಿದೆ. ಇದರಲ್ಲಿ ಮೀಥೈಲ್ ಹೈಡ್ರೋಕ್ಸಿ ಚಾಲಕೋನ್ ಪಾಲಿಮರ್ (methyl hydroxy chalcon polymer) ಇದ್ದು ಇದು ದೇಹವು ಸಕ್ಕರೆ ಪ್ರಮಾಣವನ್ನು ಹೀರಿಕೊಳ್ಳಲು ಸಹಾಯಮಾಡುತ್ತದೆ. ಇದರಿಂದಾಗಿ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ.
ಬೆಳ್ಳುಳ್ಳಿ: ಇದರಲ್ಲಿ ಚಕ್ಕೆಗಿಂತ ಪಾಲಿಫೀನೈಲ್ ಅಂಶವಿದ್ದು ಇದ್ದು ಮಧುಮೇಹವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.
ಕೆಂಪು ಮೆಣಸಿನಕಾಯಿ: ಕೆಂಪು ಮೆಣಸಿನಕಾಯಿ ತಿಂದರೆ ದೇಹದಲ್ಲಿ ರಕ್ತಸಂಚಲನಕ್ಕೆ ಸಹಾಯ ಮಾಡುತ್ತದೆ. ಇದರಿಂದ ಮಧುಮೇಹವನ್ನು ನಿಯಂತ್ರಿಸುವಲ್ಲಿ ಸ್ವಲ್ಪ ಮಟ್ಟಿಗೆ ಸಹಕಾರಿಯಾಗಿದೆ.
ಅರಿಶಿಣ: ಅರಿಶಿಣಕ್ಕೆ ಅಜೀರ್ಣದಂತಹ ಸಮಸ್ಯೆಯನ್ನು ಹೋಗಲಾಡಿಸುವ ಸಾಮರ್ಥ್ಯ ಇದೆ. ಮಧುಮೇಹ ಸಮಸ್ಯೆ ಇರುವವರು ಅಜೀರ್ಣ ಮತ್ತು ಮಲಬದ್ಧತೆ ಸಮಸ್ಯೆಯಿಂದ ಬಳಲುವುದು ಹೆಚ್ಚು. ಅರಿಶಿಣ ಈ ರೀತಿಯ ಸಮಸ್ಯೆಯನ್ನು ತಡೆಗಟ್ಟಿ ಜೀವನಿರೋಧಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications