Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ತೂಕ ಹೆಚ್ಚಾದರೂ ಥೈರಾಯ್ಡ್ ಪರೀಕ್ಷೆ ಮಾಡಿಸಬೇಕೆ?
ಗಂಟಲಿನಲ್ಲಿ ನೋವು , ಹೆಚ್ಚುತ್ತಿರುವ ದೇಹದ ತೂಕ, ಮುಟ್ಟು ಸರಿಯಾಗಿ ಆಗುತ್ತಿಲ್ಲ, ಪದೇ ಪದೇ ಗರ್ಭಪಾತ ಈ ರೀತಿಯ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಆಸ್ಪತ್ರೆಗ ಹೋದಾಗ ವೈದ್ಯರು ಥೈರಾಯ್ಡ್ ಚಿಕಿತ್ಸೆ ಮಾಡಿಸಿ ಎಂದು ಹೇಳುತ್ತಾರೆ. ಏಕೆಂದರೆ ಥೈರಾಯ್ಟ್ ಸಮಸ್ಯೆಯಿದ್ದರೆ ಈ ರೀತಿಯ ಲಕ್ಷಣಗಳು ಕಂಡು ಬರುವುದು ಸಹಜ. ಆದ್ದರಿಂದ ಇದ್ದಕ್ಕಿದ್ದ ಹಾಗೇ ದೇಹದ ತೂಕ ಹೆಚ್ಚಾದರೆ ಥೈರಾಯ್ಡ್ ಪರೀಕ್ಷೆ ಮಾಡಿಸಿಕೊಳ್ಳುವುದು ಒಳ್ಳೆಯದು. ದೇಹದಲ್ಲಿ ಅಯೋಡಿನ್ ಕೊರತೆ ಉಂಟಾದಾಗ ಈ ರೀತಿಯ ಸಮಸ್ಯೆ ಉಂಟಾಗುವುದು. ಅದರಲ್ಲೂ ಈ ರೀತಿಯ ಸಮಸ್ಯೆ ಮಹಿಳೆಯರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ.

ಥೈರಾಯ್ಡ್ ಸಮಸ್ಯೆಯಿಂದ ಬಳಲುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದೇಹದಲ್ಲಿ ಅಯೋಡಿನ್ ಕೊರತೆಯಿಮದ ಥೈರಾಯ್ಡ್ ಸಮಸ್ಯೆ ಉಂಟಾಗುತ್ತದೆ. ಆದ್ದರಿಂದ T3 ಮತ್ತು T4 ಟೆಸ್ಟ್ (ಪರೀಕ್ಷೆ) ಮಾಡಿಸಲು ಹೇಳುತ್ತಾರೆ. ನಮ್ಮ ಗಂಟಲಿನಲ್ಲಿ ಥೈರಾಯ್ಡ್ ಗ್ರಂಥಿ ಇದ್ದು ಇದು ದೇಹದ ರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖವಾಗಿದೆ. ಥೈರಾಯ್ಡ್ ಗ್ರಂಥಿಯ ಕಾರ್ಯವನ್ನು ಗಾಡಿಯ ಚಕ್ರದಲ್ಲಿರುವ ಗಾಳಿಗೆ ಹೋಲಿಸಬಹುದು. ಹೇಗೆ ಗಾಡಿ ಚಲಿಸಲು ಟೈರ್ ನಲ್ಲಿ ಗಾಳಿ ಅವಶ್ಯಕವೊ ಅದೇ ರೀತಿ ದೇಹದ ಕಾರ್ಯಗಳು ಸರಿಯಾಗಿ ನಿರ್ವಹಿಸಲು ಥೈರಾಯ್ಡ್ ಗ್ರಂಥಿ ಅವಶ್ಯಕ. ಥೈರಾಯ್ಡ್ ಸಮಸ್ಯೆಯನ್ನು ಪ್ರಾರಂಭಿಕ ಹಂತದಲ್ಲಿಯೇ ಗುರುತಿಸಿ ಚಿಕಿತ್ಸೆಯನ್ನು ಪ್ರಾರಂಭಿಸಿದರೆ ಯಾವುದೇ ತೊಂದರೆ ಉಂಟಾಗುವುದಿಲ್ಲ. ಆದರೆ ಅದನ್ನು ಹಾಗೇ ಬಿಟ್ಟರೆ ಥೈರಾಯ್ಡ್ ಕ್ಯಾನ್ಸರ್ ಬರಬಹುದು. ಇದನ್ನು ಚಿಕಿತ್ಸೆ ಮಾಡದೇ ಹೋದರೆ ಮೆದುಳಿಗೆ ತೊಂದರೆ ಉಂಟಾಗಬಹುದು.
ಥೈರಾಯ್ಡ್ ಕ್ಯಾನ್ಸರ್ ಅನ್ನು ಈ ಕೆಳಗಿನ ಲಕ್ಷಣಗಳಿಂದ ಕಂಡು ಹಿಡಿಯಬಹುದು.
1. ಗಂಟಲಿನಲ್ಲಿ ಊತ
2. ಇದ್ದಕಿದ್ದ ಹಾಗೇ ಶಬ್ದದಲ್ಲಿ ವ್ಯತ್ಯಾಸ ಉಂಟಾಗುವುದು
3. ಗಂಟಲು ನಾಳ ದಪ್ಪಗಾಗುವುದು
4. ಅಲರ್ಜಿ ಮತ್ತು ಕಡಿಮೆಯಾಗದ ಕೆಮ್ಮು
ಚಿಕಿತ್ಸೆ: ಥೈರಾಯ್ಡ್ ಕ್ಯಾನ್ಸರ್ ಉಂಟಾದರೆ ಅದನ್ನು ಚಿಕಿತ್ಸೆ ಮೂಲಕ ಪರಿಹರಿಸಬಹುದು. ಕಲೆ ಮತ್ತು ನೋವಿಲ್ಲದೆ ಶಸ್ತ್ರ ಚಿಕಿತ್ಸೆ ಮಾಡಬಹುದಾಗಿದೆ. ಈ ರೀತಿಯ ಚಿಕಿತ್ಸೆಯ ನಂತರ ಐಯೋಡಿನ್ ಚಿಕಿತ್ಸೆಯನ್ನು ನೀಡಲಾಗುವುದು. ರೋಗಿ ಸ್ವಲ್ಪ ಗುಣಮುಖವಾದ ನಂತರ ಥೈರಾಯ್ಡ್ ಹಾರ್ಮೋನ್ ಮಾತ್ರೆ ನೀಡಲಾಗುವುದು. ಈ ಮಾತ್ರೆಯನ್ನು ಜೀವಿಸಿರುವಷ್ಟು ಕಾಲ ತೆಗೆದುಕೊಳ್ಳಬೇಕಾಗುತ್ತದೆ. ಈ ಮಾತ್ರೆ ಬೆಲೆ ಕೂಡ ತುಂಬ ಕಮ್ಮಿಯಿದ್ದು ಇದರಿಂದ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
