Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಏಲಕ್ಕಿಯ 5 ಆರೋಗ್ಯಕರ ಗುಣಗಳು
ಸಾಮಾನ್ಯವಾಗಿ ವಿಶೇಷ ಅಡುಗೆಗಳಲ್ಲಿ, ಸಿಹಿ ತಿಂಡಿಗಳಲ್ಲಿ ಏಲಕ್ಕಿಯನ್ನು ಬಳಸುತ್ತೇವೆ. ಏಲಕ್ಕಿ ಹಾಕಿದರೆ ಆ ಪದಾರ್ಥಗಳು ರುಚಿಯ ಜೊತೆಗೆ ಘಮ್ಮೆನ್ನುವ ಸುವಾಸನೆ ಹೊಂದಿರುತ್ತದೆ. ಇದು ಅಡುಗೆಯ ಸ್ವಾದ ಮಾತ್ರ ಹೆಚ್ಚಿಸುವುದು ಮಾತ್ರವಲ್ಲ ಆರೋಗ್ಯವನ್ನು ಹೆಚ್ಚಿಸುತ್ತದೆ. ಏಲಕ್ಕಿ ತಿಂದರೆ ಈ ಕೆಳಗಿನ ಆರೋಗ್ಯಕರ ಗುಣಗಳನ್ನು ಪಡೆಯಬಹುದು.

1. ಗ್ಯಾಸ್ಟ್ರಿಕ್ ಸಮಸ್ಯೆ ನಿವಾರಿಸುತ್ತದೆ: ಇದು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹತೋಟಿಯಲ್ಲಿಡುವಲ್ಲಿ ಸಹಕಾರಿಯಾಗಿದೆ. ಇದು ಗ್ಯಾಸ್ಟ್ರಿಕ್ ರಸ ಉತ್ಪತ್ತಿಯಾಗುವುದನ್ನು ತಡೆಯುತ್ತದೆ. ಆದ್ದರಿಂದ ಅಸಿಡಿಟಿ ಮತ್ತು ಗ್ಯಾಸ್ ಸಮಸ್ಯೆಯನ್ನು ನಿವಾರಿಸುವಲ್ಲಿ ಸಹಕಾರಿಯಾಗಿದೆ.
2.ಅಸ್ತಮಾ ಕಾಯಿಲೆ ನಿಯಂತ್ರಣಕ್ಕೆ ಒಳ್ಳೆಯದು: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರೆ ಏಲಕ್ಕಿಯನ್ನು ಜೇನಿನ ಜೊತೆ ಮಿಶ್ರ ಮಾಡಿ ಸೇವಿಸಿದರೆ ಉತ್ತಮವಾದ ಪ್ರಯೋಜನ ಪಡೆಯಬಹುದು. ಗಂಟಲಿನಲ್ಲಿ ಕೆರತ ಕಂಡು ಬಂದರೆ ಕೂಡ ಇದನ್ನು ಜೇನಿನ ಜೊತೆ ಮಿಶ್ರ ಮಾಡಿ ತಿಂದರೆ ಒಳ್ಳೆಯದು.
3. ತಲೆನೋವು ನಿವಾರಿಸುತ್ತೆ: ತುಂಬಾ ತಲೆನೋವು ಕಂಡು ಬಂದರೆ ಟೀಗೆ ಸ್ವಲ್ಪ ಏಲಕ್ಕಿ ಹಾಕಿ ಕುಡಿದರೆ ತಲೆನೋವು ಕಡಿಮೆಯಾಗುವುದು. ಇದನ್ನು ತಲೆ ನೋವು ನಿವಾರಕ ಬಾಮ್ ಗಳ ತಯಾರಿಯಲ್ಲಿ ಕೂಡ ಬಳಸಲಾಗುವುದು.
4. ಕೆಫಿನ್ ಅಂಶವನ್ನು ಹೋಗಲಾಡಿಸುತ್ತದೆ: ತುಂಬಾ ಕಾಫಿ ಕುಡಿಯುವ ಅಭ್ಯಾಸದಿಂದ ಕೆಫಿನ್ ಅಂಶ ಹೆಚ್ಚಾಗಿ ಆರೋಗ್ಯಕ್ಕೆ ತೊಂದರೆ ಉಂಟಾಗುತ್ತದೆ. ಆದರೆ ಏಲಕ್ಕಿ ತಿಂದರೆ ಈ ರೀತಿಯ ಕೆಫಿನ್ ಅಂಶಗಳನ್ನು ಹೋಗಲಾಡಿಸಲು ಸಹಕಾರಿಯಾಗಿದೆ. ಇದನ್ನು ಟೀ ಮಾಡುವಾಗ ಹಾಕಿ ಕುಡಿಯುವುದು ಒಳ್ಳೆಯದು.
5. ಆರ್ಯುವೇದದಲ್ಲಿ ಬಳಸಲಾಗುವುದು: ಆರ್ಯುವೇದದಲ್ಲಿ ಕೂಡ ಏಲಕ್ಕಿಯನ್ನು ಔಷಧಿಗಳ ತಯಾರಿಯಲ್ಲಿ ಬಳಸುತ್ತಾರೆ. ಇದನ್ನು ತಿಂದರೆ ದೇಹದ ಆರೋಗ್ಯ ಹೆಚ್ಚುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
