Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಖಿನ್ನತೆಯನ್ನು ಗುಣ ಪಡಿಸದಿದ್ದರೆ ಜೀವಕ್ಕೆ ಅಪಾಯ
ಹಳ್ಳಿಯವರಿಗಿಂತ ನಗರ ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಮಾನಸಿಕ ಆರೋಗ್ಯದ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತದೆ. ಕೆಲಸದ ಒತ್ತಡ, ಒಂಟಿತನ, ಮೋಸ, ಆರ್ಥಿಕ ಸಮಸ್ಯೆ ಇವೆಲ್ಲಾ ಮಾನಸಿಕ ಸಮಸ್ಯೆ ಉಂಟಾಗಲು ಪ್ರಮುಖ ಕಾರಣಗಳಾಗಿವೆ.
ಈ ರೀತಿ ಉಂಟಾದರೆ ಖಿನ್ನತೆ, ಸುಸ್ತು, ನಿರಾಸೆ, ನಿರಾಸಕ್ತಿ ಉಂಟಾಗುತ್ತದೆ. ಈ ರೀತಿ ಒಂದು ಅಥವಾ ಎರಡು ದಿನವಿದ್ದರೆ ಸರಿ, ಆದರೆ ಇದೇ ಖಿನ್ನತೆ ತುಂಬಾ ದಿನಗಳವರೆಗೆ ಇದ್ದರೆ ಆ ವ್ಯಕ್ತಿ ಮಾನಸಿಕ ಸ್ಥಿಮಿತ ಕಳೆದುಕೊಳ್ಳಬಹುದು. ಆದ್ದರಿಂದ ನಮ್ಮ ಮನೆಯಲ್ಲಿ ಯಾರಾದರೂ ಅಥವಾ ನಮ್ಮ ಗೆಳೆಯರು ಖಿನ್ನತೆಯಲ್ಲಿದ್ದರೆ ಮೊದಲನೇ ಹಂತದಲ್ಲಿಯೇ ಅವರನ್ನು ಅದರಿಂದ ಹೊರತರಲು ಶ್ರಮಿಸಬೇಕು. ಇಲ್ಲದಿದ್ದರೆ ಅವರ ಸ್ಥಿತಿ ಮತ್ತಷ್ಟು ಗಂಭೀರವಾಗಬಹುದು ಅಥವಾ ಏನಾದರೂ ಅನಾಹುತ ಮಾಡಿಕೊಳ್ಳಬಹುದು.

ಕಾರಣ ತಿಳಿದುಕೊಳ್ಳಲು ಪ್ರಯತ್ನಿಸಿ: ಅವರು ಈ ರೀತಿ ಖಿನ್ನತೆಯಿಂದ ಇರಲು ಕಾರಣವೇನು ಎಂದು ತಿಳಿದುಕೊಳ್ಳಲು ಪ್ರಯತ್ನಿಸಿ. ಅವರು ಹೇಳದಿದ್ದರೂ ಹೇಗಾದರೂ ಕಾರಣವನ್ನು ತಿಳಿದುಕೊಳ್ಳಲು ಪ್ರಯತ್ನಿಸಿ. ಕಾರಣ ತಿಳಿದರೆ ಅದಕ್ಕೆ ಪರಿಹಾರ ಹುಡುಕುವುದು ಸುಲಭವಾಗುತ್ತದೆ.
ನೈಜತೆಯನ್ನು ಒಪ್ಪಿಕೊಳ್ಳಲು ಹೇಳಿ: ಕೆಲವೊಂದು ಆಘಾತಗಳನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದಾಗ ಖಿನ್ನತೆ ಉಂಟಾಗಬಹುದು. ಆಗ ಅವರಿಗೆ ಇದೇ ವಾಸ್ತವೆಂದು ಮನವೊಲೆಸಿ.
ಕೌನ್ಸಿಲಿಂಗ್ ಕೊಡಿಸಿ: ನಿಮಗೆ ಅವರ ಸ್ಥಿತಿಯನ್ನು ಸುಧಾರಿಸಲು ಸಾಧ್ಯವಾಗದಿದ್ದರೆ ಕೌನ್ಸಿಲಿಂಗ್ ಕೊಡಿಸಿ. ಬರೀ ಮಾತ್ರೆ ನುಂಗುವುದರಿಂದ ಪ್ರಯೋಜನವಿಲ್ಲ, ಈ ಸಮಯದಲ್ಲಿ ಅವರಿಗೆ ಭಾವನಾತ್ಕವಾದ ಬೆಂಬಲ (ಸಪೋರ್ಟ್) ನೀಡಬೇಕು.
ಸ್ಥಳ ಬದಲಾವಣೆ: ಆ ಸ್ಥಳದಿಂದ ಅವರನ್ನು ಪ್ರಕೃತಿ ರಮಣೀಯ ಸ್ಥಳಗಳಿಗೆ ಕೊಂಡೊಯ್ಯಿರಿ. ಇದರಿಂದ ಅವರಿಗೊಂದು ಚೇಂಜ್ ದೊರೆಯುತ್ತದೆ, ಅವರ ಮಾನಸಿಕ ಸ್ಥಿತಿಯೂ ಸುಧಾರಿಸುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
