Latest Updates
-
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ
ತುಂಬಾ ಹೊತ್ತು ಕೂರುವುದು ಆರೋಗ್ಯಕ್ಕೆ ಅಪಾಯ!

ಬೆನ್ನುನೋವು: ತುಂಬಾ ಹೊತ್ತು ಕೂರುವುದರಿಂದ ಸ್ನಾಯುಗಳ ಸೆಳೆತ ಉಂಟಾಗಿ ಬೆನ್ನು ನೋವು ಉಂಟಾಗುವುದು. ಅದರಲ್ಲೂ ಕಂಪ್ಯೂಟರ್ ನ ಮುಂದೆ ಕೂತು ಕೆಲಸ ಮಾಡುವವರಿಗೆ ಈ ರೀತಿಯ ಬೆನ್ನುನೋವು ಕಟ್ಟಿಟ್ಟ ಬುತ್ತಿ. ಬೆಳಗ್ಗೆ ಎದ್ದು ಯೋಗ ಮಾಡಿದರೆ ಈ ರೀತಿಯ ಬೆನ್ನು ನೋವು ಬರುವುದನ್ನು ತಡೆಯಬಹುದು.
ಕೊಲೆಸ್ಟ್ರಾಲ್ ಹೆಚ್ಚಾಗುವುದು: ತುಂಬಾ ಹೊತ್ತು ಕೂತು ಕೆಲಸ ಮಾಡಿದರೆ ಜೀರ್ಣಕ್ರಿಯೆಯಲ್ಲಿ ವ್ಯತ್ಯಾಸ ಉಂಟಾಗುವುದು ಹಾಗೂ ಒಳ್ಳೆಯ ಕೊಲೆಸ್ಟ್ರಾಲ್ ಆದ ಲಿಪೋಪ್ರೊಟೀನ್ ಕೊಲೆಸ್ಟ್ರಾಲ್ ನ ಪ್ರಮಾಣವನ್ನು ತಗ್ಗಿಸುತ್ತದೆ, ಇದರಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾಗುವುದು.
ಮಧುಮೇಹ ಬರಬಹುದು: ತುಂಬಾ ಹೊತ್ತು ಕೂರುವುದರಿಂದ ದೇಹದಲ್ಲಿ ಇನ್ಸುಲಿನ್ ಪ್ರಮಾಣವನ್ನು ತಗ್ಗಿಸುತ್ತದೆ. ಆಫೀಸ್ ನಲ್ಲಿ ಕೂರುವುದು, ಮನೆಗೆ ಬಂದು ವಿಶ್ರಾಂತಿಗಾಗಿ ಕೂರುವುದು ಮಾಡದೆ ಸ್ವಲ್ಪ ಹೊತ್ತು ನಡೆದಾಡಿದರೆ ಆರೋಗ್ಯಕ್ಕೆ ಒಳ್ಳೆಯದು.
ಕುತ್ತಿಗೆ ನೋವು: ತುಂಬಾ ಹೊತ್ತು ಸಿಸ್ಟಮ್ ನೋಡುತ್ತಾ ಕೂತು ಕೆಲಸ ಮಾಡುವುದರಿಂದ ಕುತ್ತಿಗೆ ನೋವು ಉಂಟಾಗುವುದು. ಅಲ್ಲದೆ ಕಣ್ಣಿನ ದೃಷ್ಟಿಗೆ ಕೂಡ ದೋಷ ಉಂಟಾಗುತ್ತದೆ.
ಈ ರೀತಿಯ ಸಮಸ್ಯೆಗಳು ಚಿಕ್ಕ ಪ್ರಾಯದಲ್ಲಿಯೇ ಕಾಣಿಸಿಕೊಂಡು ಬೇಗನೆ ಸಾವು ಬರುವುದು. ಆದ್ದರಿಂದ ತುಂಬಾ ಹೊತ್ತು ಕೂತು ಕೆಲಸ ಮಾಡುವವರು ದಿನದಲ್ಲಿ ಅರ್ಧಗಂಟೆ ವ್ಯಾಯಾಮ ಮಾಡಬೇಕು. ಯೋಗ, ಪ್ರಾಣಾಯಾಮ ಇವುಗಳನ್ನು ಮಾಡಿದರೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
