Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ವಯಸ್ಸು ಮೂವತ್ತಾಯಿತೇ? ಸ್ತನ ಕ್ಯಾನ್ಸರ್ ಬಗ್ಗೆ ಎಚ್ಚರ!
ಸ್ತನ ಕ್ಯಾನ್ಸರ್ ಬಗ್ಗೆ ಪ್ರತಿಯೊಬ್ಬ ಮಹಿಳೆಯೂ ಎಚ್ಚೆತ್ತುಕೊಳ್ಳಬೇಕು. 30ವರ್ಷ ದಾಟಿದ ಪ್ರತೀ 229 ಮಹಿಳೆಯರಲ್ಲಿ 1 ಮಹಿಳೆಗೆ, 44 ವರ್ಷದ ಪ್ರತೀ 68 ಮಹಿಳೆಯರಲ್ಲಿ 1 ಒಬ್ಬರಿಗೆ, 50 ವರ್ಷದ ದಾಟಿದ ಪ್ರತೀ 37 ಮಹಿಳೆಯರಲ್ಲಿ ಒಬ್ಬರಿಗೆ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಎಂದು ಯೂರೋಪ್ ನಲ್ಲಿ ನಡೆಸಿದ ಸಂಶೋಧನೆಯಿಂದ ತಿಳಿದು ಬಂದಿದೆ.
ಮನೆಯಲ್ಲಿ ಯಾರಿಗಾದರೂ ಸ್ತನ ಕ್ಯಾನ್ಸರ್ ಉಂಟಾದರೆ, ಆ ಮಹಿಳೆಯ ಅಕ್ಕ, ತಂಗಿ, 20 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳು ಪರೀಕ್ಷಿಸುವುದು ಒಳ್ಳೆಯದು. ಏಕೆಂದರೆ ಇದು ವಂಶಪಾರಂಪರ್ಯವಾಗಿ ಕೂಡ ಬರಬಹುದು.
ಇಲ್ಲಿ ನಾವು ಸ್ತನ ಕ್ಯಾನ್ಸರ್ ತಡೆಯುವ 7 ಮಾರ್ಗಗಳ ಬಗ್ಗೆ ಹೇಳಿದ್ದೇವೆ ನೋಡಿ:

1. ವ್ಯಾಯಾಮ
ಮಹಿಳೆಯರು ಪ್ರತಿನಿತ್ಯ ತಪ್ಪದೆ ವ್ಯಾಯಾಮ ಮಾಡುವುದು ಒಳ್ಳೆಯದು. ದೈಹಿಕ ಶ್ರಮ ಪಡುವವರಿಗೆ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆ ತುಂಬಾ ಕಡಿಮೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ.

2. ದೇಹದ ತೂಕ
ತೂಕವನ್ನು ಮಿತಿಯಲ್ಲಿ ಇಟ್ಟುಕೊಳ್ಳುವುದು ಆರೋಗ್ಯದ ದೃಷ್ಟಿಯಲ್ಲಿ ತುಂಬಾ ಒಳ್ಳೆಯದು. ಮೆನೋಪಸ್ ನಂತರ ದೇಹದ ತೂಕ ಹೆಚ್ಚಾಗದಂತೆ ನೋಡಿಕೊಳ್ಳಿ. ಏಕೆಂದರೆ 40 ವರ್ಷ ದಾಟಿದ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಂಡು ಬರುತ್ತದೆ.

3. ಕೊಬ್ಬಿನಂಶವಿರುವ ಆಹಾರಗಳಿಂದ ದೂರವಿಡಿ
ಅಧಿಕ ಕೊಬ್ಬಿನಂಶವಿರುವ ಆಹಾರ ತಿನ್ನುವುದಕ್ಕೂ ಸ್ತನ ಕ್ಯಾನ್ಸರಿಗೂ ಒಂದಕ್ಕೊಂದು ಸಂಬಂಧವಿದೆ. ಅಧಿಕ ಕ್ಯಾಲೋರಿ ಇರುವ ಆಹಾರಗಳನ್ನು ತಿಂದಷ್ಟು ಸ್ತನ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು.

4. ಹಣ್ಣು-ತರಕಾರಿಗಳು
ಮಹಿಳೆಯರು ಯಾರು ಕ್ಯಾರೋಟಿನ್ ಇರುವ ಪದಾರ್ಥಗಳನ್ನು ಕಡಿಮೆ ತಿಂದರೆ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು. ತರಕಾರಿ ಹಾಗೂ ಹಣ್ಣುಗಳಲ್ಲಿ ಕ್ಯಾರೋಟಿನ್ ಅಂಶ ಅಧಿಕವಿದೆ.

5. ಸೋಯಾ
ಸೋಯಾವನ್ನು ಅಡುಗೆಯಲ್ಲಿ ಬಳಸುವುದು ಒಳ್ಳೆಯದು. ಸೋಯಾ ತಿಂದಷ್ಟು ಸ್ತನ ಕ್ಯಾನ್ಸರ್ ಬರುವ ಸಾಧ್ಯತೆ ಕಡಿಮೆ.

6. ಎದೆ ಹಾಲು ಕೊಡದಿರುವುದು
ಅಬಾರ್ಷನ್ ಮಾಡಿಸಿದರೆ, ಮಗುವಿಗೆ ಎದೆ ಹಾಲು ಕೊಡದಿದ್ದರೆ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು. ಮಕ್ಕಳಿಗೆ ಎದೆ ಹಾಲನ್ನು 1- 2 ವರ್ಷದವರೆಗೆ ಕೊಟ್ಟರೆ ಮಗುವಿಗೆ ಹಾಗೂ ತಾಯಿಗೂ ಒಳ್ಳೆಯದು.

7. ಧೂಮಪಾನ
ಮಾಡರ್ನ್ ಲೈಫ್ ಸ್ಟೈಲ್ ಪಾಲಿಸಿ ಕೆಲ ಮಹಿಳೆಯರು ಧೂಮಪಾನ ಮಾಡುತ್ತಾರೆ. ಫ್ಯಾಷನ್ ಗಾಗಿ ಪ್ರಾರಂಭಿಸಿದ ಧೂಮಪಾನ ಬಂಜೆತನ, ಸ್ತನ ಕ್ಯಾನ್ಸರ್ ಈ ರೀತಿಯ ಅನೇಕ ತೊಂದರೆಗಳನ್ನು ತರಬಹುದು.



Click it and Unblock the Notifications
