Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಹಾರ್ಮೋನ್ ಬದಲಾವಣೆ ಬಗ್ಗೆ ಹೆಚ್ಚಿನ ಮಾಹಿತಿ
ಹಾರ್ಮೋನ್ ಗಳಲ್ಲಿ ಬದಲಾವಣೆ ಉಂಟಾಗಿರುವುದರಿಂದ ನಿಮಗೆ ಆರೋಗ್ಯ ಸಮಸ್ಯೆ ಉಂಟಾಗಿದೆ ಎಂದು ವೈದ್ಯರು ಹೇಳುವುದನ್ನು ಕೇಳಿರಬಹುದು. ಹಾರ್ಮೋನ್ ಗಳು ನಮ್ಮ ದೇಹದ ಆರೋಗ್ಯದಲ್ಲಿ ಹೇಗೆ ಪ್ರಮುಖ ಪಾತ್ರವಹಿಸುತ್ತದೆ ಎಂದು ತಿಳಿದುಕೊಳ್ಳುವ ಕುತೂಹಲವೇ? ಇದರ ಬಗ್ಗೆ ಮಾಹಿತಿ ನೋಡಿ ಇಲ್ಲಿದೆ.
ಹಾರ್ಮೋನ್ ಅನ್ನುವುದು ನಮ್ಮ ದೇಹದಲ್ಲಿಯೇ ಉತ್ಪತ್ತಿಯಾಗುವ ರಾಸಾಯನಿಕಗಳು. ಇದು ರಕ್ತದ ಮುಖಾಂತರ ನಮ್ಮ ದೇಹದ ಎಲ್ಲಾ ಭಾಗವನ್ನು ಸೇರಿ, ಪ್ರತಿಯೊಂದು ಅಂಗಗಳು ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ. ಉದಾಹರಣೆಗೆ ನಮ್ಮ ಗಂಟಲಿನಲ್ಲಿ ಥೈರಾಯ್ಡ್ ಎಂಬ ಹಾರ್ಮೋನ್ ಉತ್ಪತ್ತಿಯಾಗುತ್ತದೆ. ಈ ಹಾರ್ಮೋನ್ ಸರಿಯಾದ ಪ್ರಮಾಣದಲ್ಲಿ ಉತ್ಪತ್ತಿಯಾಗದಿದ್ದರೆ ಥೈರಾಯ್ಡ್ ಸಮಸ್ಯೆ ಉಂಟಾಗುವುದು. ಮುಟ್ಟಿನ ಸಮಸ್ಯೆ ಈ ರೀತಿಯ ಸಮಸ್ಯೆಗಳು ಹಾರ್ಮೋನ್ ಗಳ ವ್ಯತ್ಯಾಸದಿಂದ ಉಂಟಾಗುತ್ತದೆ.

ಹಾರ್ಮೋನ್ ಗಳಲ್ಲಿ ಅಸಮತೋಲನವಾದರೆ ಕಂಡು ಹಿಡಿಯುವುದು ಹೇಗೆ?
ಹಾರ್ಮೋನ್ ಗಳಲ್ಲಿ ಬದಲಾವಣೆಯಾದರೆ 600ಕ್ಕೂ ಹೆಚ್ಚಿನ ಆರೋಗ್ಯ ಸಂಬಂಧಿ ಸಮಸ್ಯೆಗಳು ಉಂಟಾಗುತ್ತದೆ. ಪುರುಷರಲ್ಲಿ ಅವರು ಹದಿ-ಹರೆಯಕ್ಕೆ ಬಂದಾಗ ಹಾರ್ಮೋನ್
ಗಳ ಉತ್ಪತ್ತಿ ಸಮತೋಲನಕ್ಕೆ ಬರುತ್ತದೆ. ಆದರೆ ಮಹಿಳೆಯರಲ್ಲಿ ಗರ್ಭಿಣಿಯಾದಾಗ, ಮಗುವಾದಾಗ ಹಾರ್ಮೋನ್ ಗಳಲ್ಲಿ ವ್ಯತ್ಯಾಸ ಉಂಟಾಗುವುದು. ಮುಟ್ಟಿನ ಸಮಸ್ಯೆ, ಇದ್ದಕ್ಕಿದ್ದಂತೆ ತೂಕದಲ್ಲಿ ಏರಳಿಕೆ ಕಂಡು ಬಂದರೆ ಹಾರ್ಮೋನ್ ಸಮಸ್ಯೆ ಇರಬಹುದು. ಆದ್ದರಿಂದ ದೇಹದಲ್ಲಿ ವ್ಯತ್ಯಾಸ, ತುಂಬಾ ಕೂದಲು ಉದುರುವುದು ಈ ರೀತಿಯ ಸಮಸ್ಯೆ ಕಂಡು ಬಂದರೆ ವೈದ್ಯರನ್ನು ಕಾಣುವುದು ಒಳ್ಳೆಯದು.
ಮಹಿಳೆಯರಲ್ಲಿ ಹಾರ್ಮೋನ್ ಗಳಲ್ಲಿ ಅಸಮತೋಲನ ಉಂಟಾಗಲು ಕಾರಣಗಳು
ಗರ್ಭಾವಸ್ಥೆಯಲ್ಲಿ
ಮೆನೋಪಸ್ ಸಮಯದಲ್ಲಿ
ಕೆಲವೊಂದು ಔಷಧಿಗಳನ್ನು ತೆಗೆದುಕೊಂಡಾಗ
ಥೈರಾಯ್ಡ್
ಮಧುಮೇಹ
ವೈದ್ಯರ ಸಲಹೆಯಿಲ್ಲದೆ ಗರ್ಭನಿರೋಧಕ ಮಾತ್ರೆ ತೆಗೆದುಕೊಳ್ಳುವುದರಿಂದ
ಹಾರ್ಮೋನ್ ಗಳಲ್ಲಿ ಅಸಮತೋಲನ ಉಂಟಾದರೆ ಕಂಡು ಬರುವ ಲಕ್ಷಣಗಳು
ಅನಿಯಮಿತ ಮುಟ್ಟು
ನಿದ್ದೆ ಸರಿಯಾಗಿ ಬರದಿರುವುದು
ಏಕಾಗ್ರತೆ ಇಲ್ಲದಿರುವುದು
ತೂಕದಲ್ಲಿ ಹೆಚ್ಚು, ಕಡಿಮೆ
ಪರಿಹಾರ
ವೈದ್ಯರ ಸಲಹೆ ಪಡೆಯಿರಿ
ಟೀ, ಕಾಫಿ ಕುಡಿಯದಿರುವುದು ಒಳ್ಳೆಯದು
ನಿದ್ದೆ ಚೆನ್ನಾಗಿ ಮಾಡಬೇಕು
ವ್ಯಾಯಾಯ
ಲೈಫ್ ಸ್ಟೈಲ್ ಚೆನ್ನಾಗಿರಬೇಕು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications