Latest Updates
-
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು? -
ಮುಂಬೈ ಸೆಕೆ ಮತ್ತು ಆರ್ದ್ರತೆ: ಹೊರಗೆ ಹೋಗಿ ಸುಸ್ತಾಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ಇಂದು ರಾತ್ರಿ ದೆಹಲಿ-ಎನ್ಸಿಆರ್ನಲ್ಲಿ ಭೀಕರ ಮಳೆ: ಹೊರಗೆ ಹೋಗುವ ಪ್ಲಾನ್ ಇದೆಯಾ? ಎಚ್ಚರ!
ಹೊಟ್ಟೆ ಉಬ್ಬುವಿಕೆಗೆ ಕಾರಣ ತಿಳಿದುಕೊಳ್ಳಿ
ಜೀರ್ಣಕ್ರಿಯೆ ಸರಿಯಾಗಿ ಆಗದಿದ್ದರೆ ಹೊಟ್ಟೆ ಉಬ್ಬುವ ಸಮಸ್ಯೆ ಉಂಟಾಗುವುದು ಸಾಮಾನ್ಯ. ಈ ರೀತಿಯ ಸಮಸ್ಯೆ ಅನೇಕ ಕಾರಣಗಳಿಂದ ಉಂಟಾಗುತ್ತದೆ. ನಾವು ತಿಂದ ಆಹಾರದದಿಂದ ಅಥವಾ ಅನಾರೋಗ್ಯದದಿಂದ ಈ ರೀತಿ ಹೊಟ್ಟೆ ಉಬ್ಬುವ ಸಮಸ್ಯೆ ಕಂಡು ಬರುವುದು.
ಹೊಟ್ಟೆ ಉಬ್ಬಿದರೆ ಕೂರಲು ಆಗದೆ, ನಡೆದಾಡಲೂ ಆಗದೆ ಸಂಕಟವನ್ನು ಅನುಭವಿಸಬೇಕಾಗುತ್ತದೆ. ಸ್ವಲ್ಪ ಮುನ್ನೆಚ್ಚರಿಕೆಕ್ರಮ ಅನುಸರಿಸಿದರೆ ಈ ಸಮಸ್ಯೆಯಿಂದ ಪಾರಾಗಬಹುದು. ಮುನ್ನೆಚ್ಚರಿಕೆ ಕ್ರಮದ ಬಗ್ಗೆ ತಿಳಿಯುವ ಮುನ್ನ ಹೊಟ್ಟೆ ಉಬ್ಬುವಿಕೆಗೆ ಕಾರಣವಾಗುವ ಅಂಶಗಳ ಬಗ್ಗೆ ತಿಳಿದರೆ ಮಾತ್ರ, ಪರಿಹಾರವನ್ನು ಕಂಡುಕೊಳ್ಳಲು ಸಾಧ್ಯ. ಆದ್ದರಿಂದ ಮೊದಲಿಗೆ ಕಾರಣಗಳನ್ನು ತಿಳಿದುಕೊಳ್ಳುವ:

ಅಸಿಡಿಟಿ
ಅಸಿಡಿಟಿ ಶುರುವಾದರೆ ಹೊಟ್ಟೆ ಉಬ್ಬುವಿಕೆ ಕಂಡು ಬರುವುದು ಸಾಮಾನ್ಯ. ಅಸಿಡಿಟಿ ಬರಲು ಪ್ರಮುಖ ಕಾರಣವೆಂದರೆ ಸರಿಯಾದ ಸಮಯಕ್ಕೆ ಆಹಾರ ತಿನ್ನದಿರುವುದು, ಖಾರ, ಹುಳಿಯನ್ನು ಹೆಚ್ಚಾಗಿ ತಿನ್ನುವುದು. ಅಸಿಡಿಟಿಯನ್ನು ನಿರ್ಲಕ್ಷ್ಯ ಮಾಡಿದರೆ ಅಲ್ಸರ್ ಉಂಟಾಗಬಹುದು. ಆದ್ದರಿಂದ ಆರೋಗ್ಯಕರ ಆಹಾರವನ್ನು ಸರಿಯಾದ ಸಮಯಕ್ಕೆ ತಿನ್ನುವ ಅಭ್ಯಾಸ ಒಳ್ಳೆಯದು.

ಅಜೀರ್ಣ ಸಮಸ್ಯೆ
ಅಜೀರ್ಣ ಸಮಸ್ಯೆ ಉಂಟಾದರೆ ಹೊಟ್ಟೆನ ಉಬ್ಬುವುದು. ಆಗಾಗ ಮಲ ವಿಸರ್ಜನೆಗೆ ಹೋಗುವುದು, ಊಟ ಮಾಡಿದ ತಕ್ಷಣ ಮಲ ವಿಸರ್ಜನೆಗೆ ಹೋಗ ಬೇಕೆನಿಸುವುದು ಈ ರೀತಿಯ ಸಮಸ್ಯೆಯಿದ್ದರೆ ವೈದ್ಯರನ್ನು ಕಾಣುವುದು ಒಳ್ಳೆಯದು.

ಉದರದ ಕಾಯಿಲೆಗಳು
ಉದರದ ಕಾಯಿಲೆಗಳು ಬಂದರೆ ಮೊದಲು ಕಂಡು ಬರುವ ಲಕ್ಷಣವೆಂದರೆ ಹೊಟ್ಟೆ ಉಬ್ಬುವ ಸಮಸ್ಯೆ. ಗೋಧಿ, ಮತ್ತಿತರ ಧಾನ್ಯಗಳನ್ನು ತಿಂದಾಗ ಹೊಟ್ಟೆ ಉಬ್ಬುವ ಸಮಸ್ಯೆ ಕಂಡು ಬಂದರೆ ಉದರದ ಸಮಸ್ಯೆಯಿಂದ ಇರಬಹುದು.

ಮಲಬದ್ಧತೆ
ನಾರಿನಂಶ ಇರುವ ಆಹಾರವನ್ನು ಕಮ್ಮಿ ತಿನ್ನುವುದರಿಂದ, ನೀರನ್ನು ಮಿತವಾಗಿ ಕುಡಿಯುವುದರಿಂದ ಮಲಬದ್ಧತೆ ಸಮಸ್ಯೆ ಕಾಡುವುದು. ಆಗ ಕೂಡ ಹೊಟ್ಟೆ ಉಬ್ಬಿ ತುಂಬಾ ಹೊತ್ತು ಕೂರಲು ಸಂಕಟವಾಗುತ್ತದೆ. ಮಲದ್ಧತೆ ಸಮಸ್ಯೆ ಕಂಡು ಬಂದರೆ ಸಾಕಷ್ಟು ನೀರು ಕುಡಿಯಿರಿ, ಬಾಳೆ ಹಣ್ಣು, ಕಿತ್ತಳೆ, ಮೂಸಂಬಿ ಹೀಗೆ ನಾರಿನಂಶ ಅಧಿಕವಿರುವ ಆಹಾರಗಳನ್ನು ತಿನ್ನುವುದರಿಂದ ಮಲವಿಸರ್ಜನೆ ಸರಿಯಾಗಿ ಆಗುವಂತೆ ಮಾಡಬಹುದು.

ಹಾರ್ಮೋನ್ ಗಳಲ್ಲಿ ಬದಲಾವಣೆ
ಹಾರ್ಮೋನ್ ಗಳಲ್ಲಿ ಬದಲಾವಣೆ ಉಂಟಾದರೆ ಕೂಡ ಈ ರೀತಿಯ ಸಮಸ್ಯೆ ಕಂಡು ಬರುತ್ತದೆ.



Click it and Unblock the Notifications