Latest Updates
-
ಓಣಂ ಹಬ್ಬ: ಮಳೆಗೆ ಹಾಳಾಗದ, ₹500ರೊಳಗೆ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್! -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಜಾಗ ಉಳಿಸುವ ಸುಂದರ ಪೂಕಳಂ ಐಡಿಯಾಗಳು -
ಓಣಂ ಸದ್ಯದ ಸಂಭ್ರಮ: ಡಯಾಬಿಟಿಸ್ ಇದ್ದರೂ ಆರೋಗ್ಯಕರವಾಗಿ ಸವಿಯುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ಮೊಟ್ಟೆ ದರ ಏರಿಕೆ ಚಿಂತೆಯೇ? ಕಡಿಮೆ ಬಜೆಟ್ನಲ್ಲಿ ಪ್ರೋಟೀನ್ ಪಡೆಯಲು ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ಕುಟುಂಬದೊಂದಿಗೆ ಸಂಭ್ರಮಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಪ್ಲಾನ್! -
ವರ್ಕ್ ಫ್ರಮ್ ಹೋಮ್ ಜೊತೆ ಭಾರತ-ಶ್ರೀಲಂಕಾ ಟೆಸ್ಟ್ ಮ್ಯಾಚ್: ಲೈವ್ ಸ್ಕೋರ್ ಮತ್ತು ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
ದೆಹಲಿ ಟಫ್ಮನ್ ಹಾಫ್ ಮ್ಯಾರಥಾನ್: ತೇವಾಂಶದ ನಡುವೆಯೂ ಓಟದಲ್ಲಿ ಮಿಂಚಲು ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರು ರನ್ನಿಂಗ್ ಡೇ: ಮಳೆಗಾಲದಲ್ಲಿ ಓಡುವಾಗ ಈ ತಪ್ಪುಗಳನ್ನು ಮಾಡಬೇಡಿ, ಸುರಕ್ಷಿತವಾಗಿರಿ! -
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ!
ಪುರುಷರು ತಿನ್ನಲೇಬೇಕಾದ ಆಹಾರಗಳಿವು
ದೇಹಕ್ಕೆ ಅಗ್ಯತವಾದ ಪೋಷಕಾಂಶಗಳು ಪುರುಷರಲ್ಲಿ ಹಾಗೂ ಮಹಿಳೆಯರಲ್ಲಿ ಭಿನ್ನವಾಗಿರುತ್ತದೆ. ಮಹಿಳೆಯರಿಗೆ ಹೆರಿಗೆ ಸಮಯದಲ್ಲಿ ತುಂಬಾ ಕ್ಯಾಲ್ಸಿಯಂ ನಷ್ಟವಾಗುವುದರಿಂದ ಕ್ಯಾಲ್ಸಿಯಂ ಇರುವ ಆಹಾರಗಳನ್ನು ತಿನ್ನಬೇಕು. ಪುರುಷರಿಗೆ ಕ್ಯಾಲ್ಸಿಯಂಕ್ಕಿಂತ ಪ್ರೊಟೀನ್ ಅವಶ್ಯಕ.
ಆದ್ದರಿಂದಲೇ ಪುರುಷ ಮತ್ತು ಮಹಿಳೆಯರಿಗೆ ಬೇರೆ-ಬೇರೆ ಆಹಾರಕ್ರಮವಿದೆ. ಕೆಲವು ಆಹಾರಗಳು ಮಹಿಳೆಯರಿಗೆ ಅಗತ್ಯವಾದ ಪೋಷಕಾಂಶವನ್ನು ಒದಗಿಸುತ್ತದೆ, ಮತ್ತೆ ಕೆಲವು ಆಹಾರ ಪುರುಷರಿಗೆ ಅಗ್ಯತವಾದ ಪೋಷಕಾಂಶವನ್ನು ನೀಡುತ್ತದೆ.
ಇಲ್ಲಿ ನಾವು ಪುರುಷರು ತಮ್ಮ ಆಹಾರಕ್ರಮದಲ್ಲಿ ಸೇರಿಸಬೇಕಾದ ಆಹಾರಗಳ ಬಗ್ಗೆ ಮಾಹಿತಿ ನೀಡಿದ್ದೇವೆ ನೋಡಿ:

ಟೊಮೆಟೊ
ಟೊಮೆಟೊ ಹಣ್ಣನ್ನು ತಮ್ಮ ದಿನನಿತ್ಯದ ಆಹಾರಕ್ರಮದಲ್ಲಿ ಸೇರಿಸುವುದು ತುಂಬಾ ಒಳ್ಳೆಯದು. ಲೈಕೋಪೆನೆ ಅಧಿಕವಿರುವ ಆಹಾರ ತಿಂದರೆ ಕರುಳಿನ ಕ್ಯಾನ್ಸರ್, ಹೃದಯದ ಸಮಸ್ಯೆ, ಕೊಲೆಸ್ಟ್ರಾಲ್ ಇವುಗಳ ವಿರುದ್ಧ ಹೋರಾಡುತ್ತದೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ.

ಎಲೆಕೋಸು
ಎಲೆಕೋಸು, ಬ್ರೊಕೋಲಿ ಇವೆಲ್ಲಾ ಪುರುಷರು ತಿನ್ನಲೇಬೇಕಾದ ಆಹಾರವಾಗಿದೆ. ಇದರಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುವ ಅಂಶವಿದೆ. ಪುರುಷರಲ್ಲಿರುವ ಜನನೇಂದ್ರಿಯಕ್ಕೆ ಸಂಬಂಧಪಟ್ಟ ಗ್ರಂಥಿಯ ಆರೋಗ್ಯವನ್ನು ಕಾಪಾಡುತ್ತದೆ.

ಮೊಟ್ಟೆ
ತುಂಬಾ ಕೂದಲು ಉದುರುತ್ತಿದ್ದರೆ ದಿನಾ ಒಂದು ಮೊಟ್ಟೆ ತಿನ್ನುವುದು ಒಳ್ಳೆಯದು. ಮೊಟ್ಟೆಯ ಹಳದಿಯಲ್ಲಿ ಕಬ್ಬಿಣದಂಶ, ಸತುವಿದ್ದು ಕೂದಲು ಉದುರುವುದನ್ನು ತಡೆಗಟ್ಟುತ್ತದೆ.

ಬೆರ್ರಿ ಹಣ್ಣುಗಳು
ಬೆರ್ರಿ ಹಣ್ಣುಗಳು ಕೂಡ ಪುರುಷರಲ್ಲಿರುವ ಜನನೇಂದ್ರಿಯಕ್ಕೆ ಸಂಬಂಧಪಟ್ಟ ಗ್ರಂಥಿಗೆ ಕ್ಯಾನ್ಸರ್ ಕಣಗಳು ದಾಳಿ ಮಾಡದಂತೆ ತಡೆಯುತ್ತದೆ. ಇದು ಹೃದಯದ ಆರೋಗ್ಯಕ್ಕೆ ಒಳ್ಳೆಯದು, ಟೈಪ್ 2 ಡಯಾಬಿಟಿಸ್ ಅನ್ನು ನಿಯಂತ್ರಣದಲ್ಲಿಡುತ್ತದೆ. ಈ ಹಣ್ಣುಗಳು ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚು ಪ್ರಭಾವ ಬೀರುತ್ತದೆ.

ದಾಳಿಂಬೆ
ದಾಳಿಂಬೆಯಲ್ಲಿ antioxidants ಅಧಿಕವಿದೆ. ಪುರುಷರಲ್ಲಿ ಕೊಲೆಸ್ಟ್ರಾಲ್ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತದೆ. ದಾಳಿಂಬೆಯನ್ನು ಪ್ರತಿದಿನ ತಿಂದರೆ ಕೊಲೆಸ್ಟ್ರಾಲ್ ಬರುವುದಿಲ್ಲ ಎಂದು ಸಂಶೋಧನೆಯಿಂದ ದೃಢಪಟ್ಟಿದೆ.

ಬೆಳ್ಳುಳ್ಳಿ
ಬೆಳ್ಳುಳ್ಳಿ ರೋಗ ನಿರೋಧಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಈರುಳ್ಳಿ ಕೂಡ ತುಂಬಾ ಒಳ್ಳೆಯದು.

ದವಸಧಾನ್ಯಗಳು
ದವಸ ಧಾನ್ಯಗಳಲ್ಲಿ ವಿಟಮಿನ್ ಬಿ. ವಿಟಮಿನ್ ಬಿ ಪುರುಷ ಹಾಗೂ ಮಹಿಳೆಯರಿಬ್ಬರಿಗೆ ಒಳ್ಳೆಯದು. ಮೊಳೆಕೆ ಬರಿಸಿದ ಧಾನ್ಯಗಳನ್ನು ತಿನ್ನಿ.



Click it and Unblock the Notifications