Latest Updates
-
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ದೇಹದಲ್ಲಿನ ಅಧಿಕ ಕೊಲೆಸ್ಟ್ರಾಲ್‌ಗೆ ಸೂಕ್ತ ಸಲಹೆಗಳು
ದೇಹದ ದೈನಂದಿನ ಚಟುವಟಿಕೆಗಳಿಗೆ ಅಗತ್ಯವಾದ ಕೊಬ್ಬಿನಾಂಶವೇ ಕೊಲೆಸ್ಟ್ರಾಲ್. ಇದು ಹಾರ್ಮೋನ್‌ನ ಉತ್ಪಾದನೆ ಮತ್ತು ಅಂಗಗಳ ಚಟುವಟಿಕೆಗೆ ಕಾರಣವಾಗಿದೆ. ಇದರಿಂದ ದೇಹದಲ್ಲಿ ಒಂದು ನಿರ್ದಿಷ್ಟ ಪ್ರಮಾಣದ ಕೊಲೆಸ್ಟ್ರಾಲ್ ಬೇಕಾಗುತ್ತದೆ. ಆದರೆ ಇಂದಿನ ದಿನಗಳಲ್ಲಿ 30 ಹರೆಯದ ಬಳಿಕ ದೇಹದಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಕೊಲೆಸ್ಟ್ರಾಲ್ ಉತ್ಪತ್ತಿಯಾಗುತ್ತದೆ. ಈ ಕೊಲೆಸ್ಟ್ರಾಲ್ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು.
ಹಾಗಾಗಿ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಕೆಲವೊಂದು ಆಹಾರಗಳಿವೆ, ಅವುಗಳು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಕೊಲೆಸ್ಟ್ರಾಲ್ ಇರುವವರು ಔಷಧಿಯನ್ನು ತೆಗೆದುಕೊಳ್ಳುವುದರ ಜೊತೆಗೆ ಈ ಕೆಳಗೆ ನೀಡಿರುವ ಆಹಾರಗಳನ್ನು ತಿನ್ನುವುದರಿಂದ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು. ನೈಸರ್ಗಿಕ ಶಕ್ತಿಯನ್ನು ಒದಗಿಸುವ ಸೊಪ್ಪಿನ ಜ್ಯೂಸ್
ಆಲಿವ್ ಎಣ್ಣೆ

ಈ ತೈಲ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡದೆ, ಕೆಟ್ಟ ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ (triglycerides) ಗಳನ್ನು ಕಡಿಮೆ ಮಾಡುವ ಮೊನೊ ಬಹು ಅಪರ್ಯಾಪ್ತ ಮೇದಸ್ಸಿನ ಆಮ್ಲಗಳನ್ನು ಹೊಂದಿದೆ. ಆದ್ದರಿಂದ ನಿಮ್ಮ ಅಡುಗೆಯಲ್ಲಿ ಬೇರೆ ಎಣ್ಣೆಗಳ ಬದಲಿಗೆ ಆಲೀವ್ ಎಣ್ಣೆಯನ್ನೇ ಬಳಸುವುದು ಉತ್ತಮ.
ಪಾಲಾಕ್ ಸೊಪ್ಪು
ಕ್ಯಾನ್ಸರ್ , ಹೃದ್ರೋಗ ಹಾಗೂ ಆಸ್ಟಿಯೊಪೊರೋಸಿಸ್‌ನ್ನು ದೂರವಿಡುವ ಸುಮಾರು 13 ಫ್ಲೇವನಾಯ್ಡ್ ಸಂಯುಕ್ತಗಳನ್ನು ಹೊಂದಿದೆ ಎಂದು ನಂಬಲಾಗಿದೆ. ದಿನದಲ್ಲಿ ಸೇವಿಸುವ ಅರ್ಧ ಕಪ್ ಈ ಲ್ಯೂಟೀನ್ ಭರಿತ ಆಹಾರ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ ಹಾಗೂ ಹೃದಯಾಘಾತ ವಿರುದ್ಧ ನಮಗೆ ಕಾವಲಾಗಿ ನಿಲ್ಲುತ್ತದೆ.
ಅಧಿಕ ತೂಕವನ್ನು ಕಡಿಮೆ ಮಾಡಿಕೊಳ್ಳಬೇಕು
ಅಧಿಕ ತೂಕವಿರುವವರು, ಒಬೆಸಿಟಿ ಸಮಸ್ಯೆ ಇರುವವರು ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಇದರಿಂದ ಕೊಲೆಸ್ಟ್ರಾಲ್ ಮಾತ್ರವಲ್ಲ ಇತರ ಸಮಸ್ಯೆ ಕೂಡ ಕಂಡು ಬರಬಹುದು. ಆದ್ದರಿಂದ ನಿಮ್ಮ ದೇಹದ ತೂಕ ಸರಿಯಾಗಿರುವಂತೆ ನೋಡಿಕೊಳ್ಳಿ. ಋತುಚಕ್ರದ ಅವಧಿಯಲ್ಲಿ ಸೇವಿಸಬೇಕಾದ ಆಹಾರಗಳು
ಎಣ್ಣೆಯಲ್ಲಿ ಕರಿದ ತಿಂಡಿಗಳು
ಎಣ್ಣೆಯಲ್ಲಿ ಕರಿದ ತಿಂಡಿಗಳು ತಿನ್ನಲು ರುಚಿಕರವಾಗಿರುತ್ತದೆ. ಆದರೆ ಎಣ್ಣೆಯಲ್ಲಿ ಕರಿದಂತಹ ತಿಂಡಿಗಳನ್ನು ಹೆಚ್ಚಾಗಿ ತಿನ್ನುವ ಅಭ್ಯಾಸ ಒಳ್ಳೆಯದಲ್ಲ. ಆರೋಗ್ಯದ ದೃಷ್ಟಿಯಿಂದ ಬಾಯಿ ರುಚಿಗೆ ಸ್ವಲ್ಪ ಕಡಿವಾಣ ಹಾಕಬೇಕಾಗುತ್ತದೆ.
ವ್ಯಾಯಾಮ
ಕೆಲವರು ನಾನೇನು ದಪ್ಪವಿಲ್ಲ, ನಾನೇಕೆ ವ್ಯಾಯಾಮ ಮಾಡಬೇಕು ಅನ್ನುವುದನ್ನು ನೀವು ಕೇಳಿರಬಹುದು. ದಪ್ಪವಿರಲಿ ಸಣ್ಣಗಿರಲಿ ವ್ಯಾಯಾಮ ಮಾಡಿದರೆ ದೇಹವು ಗಟ್ಟಿಮುಟ್ಟಾಗುತ್ತದೆ ಹಾಗೂ ದೇಹದಲ್ಲಿ ಅಧಿಕ ಕೊಬ್ಬಿನಂಶ ನಿಲ್ಲದಂತೆ ನೋಡಿಕೊಳ್ಳುತ್ತದೆ. ಪ್ರತಿದಿನ 30 ನಿಮಿಷ ಕಾಲ ವ್ಯಾಯಾಮ ಮಾಡಿದರೆ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗಿ ದೇಹದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಅಂಶ ಹೆಚ್ಚಾಗುತ್ತದೆ.
ತಂಬಾಕು
ತಂಬಾಕು ಸೇವನೆ ಹಾಗೂ ಧೂಮಪಾನ ಅಭ್ಯಾಸವು ಬಾಯಿ ಹಾಗೂ ಶ್ವಾಸಕೋಶದ ಆರೋಗ್ಯವನ್ನು ಹಾಳು ಮಾಡುತ್ತದೆ. ತಂಬಾಕಿನಲ್ಲಿರುವ ಕಾರ್ಬನ್ ಮಾನೋಕ್ಷೈಡ್ ಅಂಶವು ದೇಹದಲ್ಲಿರುವ ಒಳ್ಳೆಯ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಹೆಚ್ಚು ಮಾಡುತ್ತದೆ. ಕೊಲೆಸ್ಟ್ರಾಲ್ ತಡೆಗಟ್ಟುವ ಮಾರ್ಗಗಳು
ಸರಿಯಾದ ಪ್ರಮಾಣದಲ್ಲಿ ತಿನ್ನಿ
ಕೊಲೆಸ್ಟ್ರಾಲ್ ಕಡಿಮೆಗೊಳಿಸಲು ಕೇವಲ ಪಥ್ಯಾಹಾರಗಳನ್ನು ಸೇರಿಸುವುದು ಅಥವಾ ಕೆಲವೊಂದು ಆಹಾರಗಳನ್ನು ತಿನ್ನದಿರುವುದು ಮಾತ್ರ ಸಾಲುವುದಿಲ್ಲ. ಇದರ ಜೊತೆಗೆ ಆಹಾರಗಳನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸುವುದೂ ಕೂಡ ಮುಖ್ಯವಾಗುತ್ತದೆ. ಆಹಾರ ಪದಾರ್ಥಗಳನ್ನು ತಿನ್ನುವ ಮುಂಚೆ ಆಯಾ ಆಹಾರ ಪದಾರ್ಥಗಳಲ್ಲಿರುವ ಪೋಷಕಾಂಶಗಳ ಬಗ್ಗೆ ಸರಿಯಾಗಿ ತಿಳಿದುಕೊಂಡು ಸೇವಿಸಬೇಕು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications





