Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಕ್ಯಾನ್ಸರ್ ರೋಗ ನಿಯಂತ್ರಣಕ್ಕೆ ಸೂಕ್ತ ಆಹಾರ ಕ್ರಮ
ಕ್ಯಾನ್ಸರ್ - ಈ ಹೆಸರನ್ನು ಕೇಳುತ್ತಲೇ ಬಹುತೇಕ ಜನರ ಜಂಘಾಬಲವೇ ಉಡುಗಿಹೋಗುತ್ತದೆ. ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್. ಆದಾಗ್ಯೂ, ಆಧುನಿಕ ವೈದ್ಯಕೀಯ ಕ್ಷೇತ್ರವು ಎಷ್ಟೊoದು ಮುಂದುವರೆದಿದೆ ಎಂದರೆ, ಒಂದು ವೇಳೆ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿದರೆ ಅದನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ. ಎಚ್ಚರ: ಈ 5 ಕಾರಣಗಳಿಂದಲೂ ಕ್ಯಾನ್ಸರ್ ಬರಬಹುದು!
ಎಷ್ಟೇ ಆದರೂ ಸಹ, Prevention is better than cure ಎಂಬ ಗಾದೆಯಂತೆ ಸಾಧ್ಯವಾದಷ್ಟರ ಮಟ್ಟಿಗೆ ಕ್ಯಾನ್ಸರ್ ಬಾರದಂತೆ ತಡೆಗಟ್ಟುವುದರಲ್ಲಿಯೇ ನಮ್ಮ ಜಾಣತನವು ಅಡಗಿದೆ. ಧೂಮಪಾನ, ಮದ್ಯಪಾನಗಳಂತಹ ದುಶ್ಚಟಗಳೊoದಿಗೆ, ನಮ್ಮ ಆಹಾರಕ್ರಮವೂ ಕೂಡ ಅನೇಕ ಬಾರಿ ಕ್ಯಾನ್ಸರ್‌ಗೆ ಕಾರಣವಾಗಬಹುದು. ಆದ್ದರಿಂದ ಕ್ಯಾನ್ಸರ್ ಅನ್ನು ದೂರವಿರಿಸಲು ನೆರವಾಗುವ ಆಹಾರಕ್ರಮವು ಯಾವುದೆಂದು ತಿಳಿಯಬಯಸುವಿರಾ? ಹಾಗಿದ್ದರೆ ಇದನ್ನು ಓದಿರಿ...
ಕ್ಯಾನ್ಸರ್ ರೋಗ ನಿಯಂತ್ರಣಕ್ಕೆ ಸೂಕ್ತ ಆಹಾರ ಕ್ರಮಗಳು

ತರಕಾರಿ ಮತ್ತು ಹಣ್ಣನ್ನು ಸೇವಿಸಿರಿ
ತಾಜಾ ತರಕಾರಿ ಮತ್ತು ಹಣ್ಣುಗಳನ್ನು ನಿಮ್ಮ ದಿನನಿತ್ಯದ ಆಹಾರದ ಕ್ರಮದಲ್ಲಿ ಸೇರಿಸಿಕೊಳ್ಳುವುದರ ಮೂಲಕ ನಿಮ್ಮ ಶರೀರಕ್ಕೆ ಅವಶ್ಯಕವಾಗಿರುವ ಪೋಷಕಾಂಶಗಳು ಮತ್ತು ವಿಟಮಿನ್ ಗಳನ್ನು ಒದಗಿಸಬಹುದು. ಈ ಪೋಷಕಾಂಶಗಳು ಮತ್ತು ವಿಟಮಿನ್‌ಗಳು , ನಿಮ್ಮ ರೋಗನಿರೋಧಕ ಮಟ್ಟವನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಸೋಂಕುಗಳು ಮತ್ತು ಕ್ಯಾನ್ಸರ್ ನ ವಿರುದ್ಧ ಕಾದಾಡಲೂ ಕೂಡ ಸಹಕಾರಿಯಾಗಿವೆ. ಅಲ್ಲದೇ, ಇವು ಜಂಕ್ ಮತ್ತು ಕೊಬ್ಬುಯುಕ್ತ ಆಹಾರಗಳ ಬಗೆಗಿನ ನಿಮಗಿರುವ ಹಸಿವನ್ನು ತನ್ನಿಂತಾನಾಗಿಯೇ ಕಡಿಮೆ ಮಾಡುತ್ತವೆ. ಕ್ಯಾಬೇಜು, brococoli, ಹೂಕೋಸು (cauiflower), ಪಾಲಾಕ್ ಸೊಪ್ಪು, ಸೇಬುಗಳು ಇತ್ಯಾದಿ ಗಳನ್ನು ದಿನನಿತ್ಯ ಸೇವಿಸುವುದರಿಂದ ಇದು ಸಾಬೀತಾಗುತ್ತದೆ.

ನಾರುಯುಕ್ತ ಆಹಾರಪದ್ಧತಿ
ರೋಗಗಳ ವಿರುದ್ಧ ನಿಮ್ಮ ಶರೀರವನ್ನು ಗುರಾಣಿಯoತೆ ಹುರಿಯಾಗಿಸಲು, ನಿಮ್ಮ ಅಹಾರಪದ್ಧತಿಯಲ್ಲಿ ನಾರುಯುಕ್ತ ಆಹಾರಪದಾರ್ಥಗಳನ್ನು ಸೇರಿಸಿರಿ. ಈ ಕ್ರಮವನ್ನು ಕೈಗೊಳ್ಳಲು ಇರುವ ಸರಳ ಮಾರ್ಗವೆಂದರೆ, ನಿಮ್ಮ ಬೆಳಗಿನ ಉಪಹಾರದಲ್ಲಿ ಬಿಳಿಯ ಬ್ರೆಡ್ಡಿಗೆ ಬದಲಾಗಿ ಕಂದು ಬಣ್ಣದ ಬ್ರೆಡ್ಡನ್ನು ಬಳಸುವುದು, ಕಂದು ಬಣ್ಣದ ಅಕ್ಕಿ(ಕುಚ್ಚಲಕ್ಕಿ), ಕಾಳುಗಳನ್ನು ಬಳಸುವುದು ಇತ್ಯಾದಿ.

ಎಲೆಕೋಸು
ವಿಟಮಿನ್ ಮತ್ತು ಖನಿಜಾಂಶಗಳನ್ನು ಯಥೇಚ್ಛವಾಗಿ ಒಳಗೊಂಡಿರುವ ಎಲೆಕೋಸಿನಲ್ಲಿ ಪೊಟಾಶಿಯಂ ಮತ್ತು ಫೋಲೆಟ್‍ಗಳಂತ ಖನಿಜಾಂಶಗಳು ಅಧಿಕವಾಗಿ ಇರುತ್ತವೆ. ಕ್ಯಾನ್ಸರನ್ನು ನಿಯಂತ್ರಿಸುವಲ್ಲಿ ಎಲೆಕೋಸುಗಳು ಮುಂಚೂಣಿಯಲ್ಲಿ ನಿಲ್ಲುವ ತರಕಾರಿಯಾಗಿದೆ. ಇದರಲ್ಲಿರುವ ಸಿನಿಗ್ರಿನ್, ಸಲ್ಫೋರಫೇನ್ ಮತ್ತು ಲುಪಿಯೊಲ್‍ಗಳು ನಮ್ಮ ದೇಹದಲ್ಲಿ ಟ್ಯೂಮರ್ ಬೆಳವಣಿಗೆಯನ್ನು ನಿಯಂತ್ರಿಸುವ ಎನ್‍ಜೈಮ್‍ಗಳನ್ನು ಉದ್ಧೀಪನಗೊಳಿಸುತ್ತದೆ.

ಬೀನ್ಸ್
ಬೀನ್ಸ್‌ಗಳಲ್ಲಿ ವಿಟಮಿನ್ ಬಿಗಳು ಅಧಿಕ ಪ್ರಮಾಣದಲ್ಲಿರುತ್ತವೆ. ಇದು ಕ್ಯಾನ್ಸರ್ ನಿಯಂತ್ರಿಸಲು ಗಣನೀಯವಾದ ಕೊಡುಗೆಯನ್ನು ನೀಡುತ್ತದೆ. ಇವುಗಳು ಕಾರ್ಸಿನೊಜೆನ್‍ಗಳನ್ನು ನಿವಾರಿಸುವ ಲುಲುಟೇನ್ ಮತ್ತು ವೈಯೊಲಕ್ಸಂಥಿನ್ ಮತ್ತು ಬೀಟಾ-ಕೆರೊಟಿನ್‍ಗಳು ಅಧಿಕ ಪ್ರಮಾಣದಲ್ಲಿರುತ್ತವೆ.

ಅಡುಗೆ ಮಾಡುವಾಗ ಸ್ವಚ್ಛತೆಯನ್ನು ಕಾಪಾಡಿರಿ
ಆರೋಗ್ಯಯುತ ಅಡುಗೆವಿಧಾನಗಳು ಮತ್ತು ಅಡುಗೆಮನೆಯಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು, ನಿಮ್ಮ ಶರೀರವನ್ನು ಯಾವುದೇ ರೋಗದಿಂದ ದೂರವಿರಿಸಲು ಅತಿ ಮುಖ್ಯವಾಗಿದೆ. ಉಪಯೋಗಿಸುವ ಮೊದಲು ತರಕಾರಿಗಳು ಮತ್ತು ಹಣ್ಣುಗಳನ್ನು ಚೆನ್ನಾಗಿ ತೊಳೆಯುವುದು, ತರಕಾರಿಗಳನ್ನು ಅತಿಯಾಗಿ ಪ್ಯಾಕ್ ಮಾಡಿ ಇಡದಿರುವುದು, ಮತ್ತು ಸಾಧ್ಯವಾದಷ್ಟು ತಾಜಾ ಆಹಾರವನ್ನೇ ಸೇವಿಸುವುದು ಇವೇ ಮೊದಲಾದವು, ನೀವು ಅನುಸರಿಸಲೇಬೇಕಾಗಿರುವ ಮೂಲಭೂತ ಸೂತ್ರಗಳು.



Click it and Unblock the Notifications