Latest Updates
-
ಅಕ್ಷಯ ತೃತೀಯ: ಸಾಲದ ಸುಳಿಯಿಲ್ಲದೆ ಚಿನ್ನ ಖರೀದಿಸುವುದು ಹೇಗೆ? -
ಬಿಸಿಲಿನ ತಾಪ: ನಿಮ್ಮ ಮನೆಯನ್ನು ತಂಪಾಗಿಡಲು ಅದ್ಭುತ ಟಿಪ್ಸ್ -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ತಂಪು ಆಹಾರಗಳೇ ಮದ್ದು -
ಹಬ್ಬದ ಸೀರೆ ಫ್ಯಾಷನ್: ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿ ಎಚ್ಚರಿಕೆ: ಸುಡುವ ಬಿಸಿಲಿನಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಸುಪ್ರೀಂ ಕೋರ್ಟ್ ಶಾಕ್: ವಿಚ್ಛೇದನ ಒಪ್ಪಂದ ಮುರಿದರೆ ಕಾದಿದೆ ಕಠಿಣ ಶಿಕ್ಷೆ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಬಿಸಿಗಾಳಿ ಕಾಟವೇ? ಈ ತಂಪು ಪಾನೀಯಗಳೇ ನಿಮ್ಮ ರಕ್ಷಕ -
ಹಬ್ಬದ ಫ್ಯಾಷನ್: ಈ ಟಿಪ್ಸ್ ಫಾಲೋ ಮಾಡಿ ಮಿಂಚಿ! -
ಬಿಸಿಲ ಧಗೆಯಿಂದ ಪಾರಾಗಲು ನಿಮ್ಮ ವರ್ಕೌಟ್ ರೂಟೀನ್ ಬದಲಾಯಿಸಿ
ಮನೆ ಔಷಧಿ: ಅಡುಗೆ ಮನೆಯ ರಾಣಿ 'ಅರಿಶಿನಕ್ಕೆ' ಭೇಷ್ ಎನ್ನಲೇಬೇಕು.....
ಅಡುಗೆಗಳಲ್ಲಿ ಅರಿಶಿನವನ್ನು ಹಿಂದಿನಿಂದಲೂ ಬಳಸುತ್ತಾ ಬಂದಿದ್ದಾರೆ. ಆರೋಗ್ಯವನ್ನು ದೃಷ್ಟಿಯಲ್ಲಿರಿಸಿಕೊಂಡೇ ಅರಿಶಿನವನ್ನು ಅಡುಗೆಯಲ್ಲಿ ಬಳಸಲಾಗುತ್ತಿದೆ. ಅರಿಶಿನವು ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಆರೋಗ್ಯವನ್ನೂ ಕಾಪಾಡುತ್ತದೆ.....
ದೇಹಕ್ಕೆ ಭಾದಿಸುವ ಕೆಲವೊಂದು ರೋಗಗಳನ್ನು ನಿವಾರಣೆ ಮಾಡಲು ನಾವು ತಿನ್ನುವಂತಹ ಪದಾರ್ಥಗಳನ್ನೇ ಬಳಸಬಹುದಾಗಿದೆ. ಸಾವಿರಾರು ವರ್ಷಗಳಿಂದಲೂ ಈ ಪದ್ಧತಿಯನ್ನು ಆಯುರ್ವೇದದಲ್ಲಿ ಬಳಸಲಾಗುತ್ತಿದೆ.
ನಾವು ಏನು ತಿನ್ನುತ್ತೇವೆಯೋ ಅದನ್ನೇ ಮದ್ದಾಗಿಯೂ ಬಳಸಬಹುದಾಗಿದೆ. ಅದರಲ್ಲೂ ಹಲವಾರು ಆರೋಗ್ಯಕಾರಿ ಗುಣಗಳನ್ನು ಹೊಂದಿರುವಂತಹ ಅರಿಶಿನದಲ್ಲಿ ಹೊಟ್ಟೆಯ ಸಮಸ್ಯೆಯನ್ನು ನಿವಾರಿಸುವಂತಹ ಶಕ್ತಿಯಿದೆ. ಅಪ್ಪಿತಪ್ಪಿಯೂ ಹೊಟ್ಟೆ ನೋವನ್ನು ನಿರ್ಲಕ್ಷಿಸಬೇಡಿ
ಭಾರತೀಯರು ಹೆಚ್ಚಾಗಿ ತಮ್ಮ ಅಡುಗೆಗಳಲ್ಲಿ ಅರಿಶಿನವನ್ನು ಹಿಂದಿನಿಂದಲೂ ಬಳಸುತ್ತಾ ಬಂದಿದ್ದಾರೆ. ಆರೋಗ್ಯವನ್ನು ದೃಷ್ಟಿಯಲ್ಲಿರಿಸಿಕೊಂಡೇ ಅರಿಶಿನವನ್ನು ಅಡುಗೆಯಲ್ಲಿ ಬಳಸಲಾಗುತ್ತಿದೆ. ಅರಿಶಿನವು ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಆಹಾರದಲ್ಲಿರುವ ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ. ಅರಿಶಿನವನ್ನು ಅಡುಗೆಯಲ್ಲಿ ಮುನ್ನೆಚ್ಚರಿಕೆಯಿಂದ ಬಳಸಲಾಗುತ್ತದೆ. ಬ್ಯಾಕ್ಟೀರಿಯಾ ವಿರೋಧಿ ಗುಣ ಹಾಗೂ ಉರಿಯೂತ ಶಮನಕಾರಿ ಗುಣವನ್ನು ಹೊಂದಿರುವಂತಹ ಅರಿಶಿನವು ಸದ್ದಿಲ್ಲದೆ ಕೆಲವೊಂದು ಕಾಯಿಲೆಗಳನ್ನು ನಿವಾರಿಸುತ್ತದೆ. ಚಿನ್ನದ ದೇವತೆ ಅರಿಶಿನದ ಚಿನ್ನದಂತಹ ಗುಣಗಳು
ದೇಹಕ್ಕೆ ಪೋಷಕಾಂಶವನ್ನು ನೀಡಬಲ್ಲ ಪ್ರಮುಖ ಪೋಷಕಾಂಶಗಳಾದ ಕಬ್ಬಿಣ, ಕ್ಯಾಲ್ಸಿಯಂ, ಪೊಟಾಶಿಯಂ, ವಿಟಮಿನ್ ಸಿ, ಮೆಗ್ನಿಶಿಯಂ ಇತ್ಯಾದಿಗಳು ಅರಿಶಿನದಲ್ಲಿವೆ. ಹೊಟ್ಟೆಯ ಕೆಲವೊಂದು ಕಾಯಿಲೆಗಳಿಗೆ ಅರಿಶಿನವು ಯಾವ ರೀತಿ ಪ್ರಯೋಜನಕಾರಿ ಎಂದು ಈ ಲೇಖನದಲ್ಲಿ ತಿಳಿದುಕೊಳ್ಳುವ.....

ಜೀರ್ಣ ಶಕ್ತಿ ಹೆಚ್ಚಿಸುವುದು
ಹೊಟ್ಟೆಯಲ್ಲಿ ಜೀರ್ಣಕ್ರಿಯೆಗೆ ಬೇಕಾಗುವ ಆರೋಗ್ಯಕಾರಿ ರಸದ ಉತ್ಪಾದನೆಯನ್ನು ಅರಿಶಿನವು ದ್ವಿಗುಣಗೊಳಿಸುವುದು. ಇದರಿಂದ ಜೀರ್ಣಕ್ರಿಯೆಯು ಸುಗಮವಾಗಿ ಸಾಗುವುದು.

ನೋವು ನಿವಾರಣೆ
ಉರಿಯೂತ ಶಮನಕಾರಿ ಗುಣವನ್ನು ಹೊಂದಿರುವಂತಹ ಅರಿಶಿನವು ಹೊಟ್ಟೆಯ ಜೀರ್ಣಾಂಗ ವ್ಯವಸ್ಥೆಯಲ್ಲಿರುವ ಉರಿಯೂತ ಮತ್ತು ಅಲ್ಸರ್ ಅನ್ನು ನಿವಾರಣೆ ಮಾಡಿ ಹೊಟ್ಟೆ ನೋವು ಕಡಿಮೆ ಮಾಡುವುದು.

ಅತಿಸಾರ ತಡೆಯುವುದು
ಬ್ಯಾಕ್ಟೀರಿಯಾ ವಿರೋಧಿ ಗುಣವನ್ನು ಹೊಂದಿರುವಂತಹ ಅರಿಶಿನವು ದೇಹದಲ್ಲಿರುವ ಬ್ಯಾಕ್ಟೀರಿಯಾ ಮತ್ತು ಸೂಕ್ಷ್ಮಾಣು ಜೀವಿಗಳನ್ನು ಹೊರಹಾಕಿ ಅತಿಸಾರವನ್ನು ತಡೆಯುವುದು.

ಗ್ಯಾಸ್ಟ್ರಿಕ್(ಜಠರದುರಿ) ಕಡಿಮೆಗೊಳಿಸುವುದು
ಹೊಟ್ಟೆಯಲ್ಲಿನ ಆಮ್ಲದ ಮಟ್ಟವನ್ನು ತಟಸ್ಥವಾಗಿಸುವ ಅರಿಶಿನವು ಅಸಿಡಿಟಿ, ಗ್ಯಾಸ್ಟ್ರಿಕ್ ಮತ್ತು ಎದೆಯುರಿಯಂತಹ ಸಮಸ್ಯೆಯನ್ನು ದೂರವಾಗಿಸುತ್ತದೆ. ತಂಪಾದ ಅರಿಶಿನ ಹಾಲನ್ನು ಸೇವನೆ ಮಾಡಿದರೆ ಸಮಸ್ಯೆ ಕಡಿಮೆಯಾಗುವುದು.

ಕರುಳನ್ನು ಶಾಂತವಾಗಿಸುವುದು
ಕರುಳು ಕೆರಳುವುದರಿಂದ ಉಂಟಾಗುವ ಜೀರ್ಣಕ್ರಿಯೆ ಸಮಸ್ಯೆಯಾದ ಅತಿಸಾರ, ಮಲಬದ್ಧತೆ ಮತ್ತು ಹೊಟ್ಟೆಯುಬ್ಬರ ಇತ್ಯಾದಿಗಳನ್ನು ಅರಿಶಿನದಲ್ಲಿರುವ ಕೆಲವೊಂದು ಪೋಷಕಾಂಶಗಳು ನಿವಾರಿಸುತ್ತದೆ ಎಂದು ಅಧ್ಯಯನಗಳು ಹೇಳಿವೆ.

ವಾಕರಿಕೆ ಕಡಿಮೆ ಮಾಡುವುದು
ವಾಕರಿಕೆ ಉಂಟಾದ ಸಂದರ್ಭದಲ್ಲಿ ಬಿಸಿ ನೀರಿಗೆ ಸ್ವಲ್ಪ ಅರಿಶಿನ ಮತ್ತು ಸ್ವಲ್ಪ ಶುಂಠಿ ರಸವನ್ನು ಹಾಕಿ ಕುಡಿದರೆ ತುಂಬಾ ಒಳ್ಳೆಯದು. ವಾಕರಿಕೆಯನ್ನು ಇದು ತಕ್ಷಣ ನಿವಾರಿಸುವುದು.

ಕರುಳಿನ ಕ್ಯಾನ್ಸರ್ ತಡೆಯುವುದು
ಅರಿಶಿನದಲ್ಲಿರುವ ಪೈಥೋನ್ಯೂಟ್ರಿಯಂಟ್ಸ್ ಕ್ಯಾನ್ಸರ್ ವಿರುದ್ಧ ಹೋರಾಡುವ ಗುಣ ಹೊಂದಿದೆ. ಇದು ಕರುಳು ಹಾಗೂ ಹೊಟ್ಟೆಯ ಕ್ಯಾನ್ಸರ್ ಬರದಂತೆ ತಡೆಯಬಲ್ಲದು.



Click it and Unblock the Notifications











