Latest Updates
-
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ -
ಹಬ್ಬದ ಸೀಸನ್: ಕಲಬೆರಕೆ ಆಹಾರದಿಂದ ಎಚ್ಚರ! ಮಹಾರಾಷ್ಟ್ರ FDA ಕಠಿಣ ತಪಾಸಣೆ ಆರಂಭ -
ಶಿಕ್ಷಕರ ದಿನಾಚರಣೆ 2026: ನಿಮ್ಮ ಪೋಸ್ಟ್ ಟ್ರೆಂಡ್ ಆಗಲು ಬೆಸ್ಟ್ ಕ್ಯಾಪ್ಷನ್ಸ್ ಮತ್ತು ಗಿಫ್ಟ್ ಐಡಿಯಾಗಳು! -
ಮಳೆಗಾಲದ ಎಚ್ಚರಿಕೆ: ಹೊರಗೆ ವಾಕಿಂಗ್ ಹೋಗುವ ಮುನ್ನ ಈ ವಿಷಯ ಗಮನಿಸಿ, ಮನೆಯಲ್ಲೇ ಫಿಟ್ ಆಗಿರಿ -
ಗೃಹಹಿಂಸೆಯ ಸುಳಿಯಲ್ಲಿ ಸಿಲುಕಿದ್ದೀರಾ? ಸುರಕ್ಷಿತವಾಗಿ ಪಾರಾಗಲು ಈ ಮಾರ್ಗದರ್ಶಿ ಮತ್ತು ತುರ್ತು ಸಹಾಯವಾಣಿಗಳು ನಿಮಗೆ ನೆರವಾಗಲಿವೆ
ಮೆಂತೆ ಕಾಳು ನೆನೆಸಿದ ನೀರು- ಆಯಸ್ಸು ನೂರು!
ಒಂದು ಲೋಟ ನೀರಿಗೆ ಎರಡು ಚಮಚ ಮೆಂತೆ ಕಾಳುಗಳನ್ನು ಹಾಕಿ ರಾತ್ರಿಯಿಡಿ ನೆನೆಸಿಟ್ಟು, ಬೆಳಿಗ್ಗೆ ಇದನ್ನು ಸೋಸಿಕೊಂಡು ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿದರೆ, ಆರೋಗ್ಯ ವೃದ್ಧಿಸುವುದು....
ಭಾರತೀಯ ಆಯುರ್ವೇದ ಔಷಧಿಯಲ್ಲಿ ಹಿಂದಿನಿಂದಲೂ ತನ್ನದೇ ಆದ ಸ್ಥಾನ ಪಡೆದುಕೊಂಡು ಬಂದಿರುವಂತಹ ಮೆಂತೆ ಕಾಳಿನಲ್ಲಿ ಹಲವಾರು ರೀತಿಯ ಆರೋಗ್ಯ ಗುಣಗಳು ಇವೆ. ಇದು ಕಾಯಿಲೆಗಳನ್ನು ನಿವಾರಿಸುವುದು ಮಾತ್ರವಲ್ಲದೆ ಕೆಲವೊಂದು ರೋಗಗಳು ಬರದಂತೆ ತಡೆಯುವುದು.
ಹೌದು, ಮೆಂತೆ ಕಾಳು ನೆನೆಸಿದ ನೀರಿನ ಉಪಯೋಗವನ್ನು ಪಡೆದುಕೊಳ್ಳಬೇಕಾದರೆ ಈ ಲೇಖನವನ್ನು ಓದಬೇಕು. ಒಂದು ಲೋಟ ನೀರಿಗೆ ಎರಡು ಚಮಚ ಮೆಂತೆ ಕಾಳುಗಳನ್ನು ಹಾಕಿ ರಾತ್ರಿಯಿಡಿ ನೆನೆಸಿಡಬೇಕು. ಬೆಳಿಗ್ಗೆ ಇದನ್ನು ಸೋಸಿಕೊಂಡು ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು.
ಇದರ ಲಾಭ ಪಡೆಯಬೇಕಾದರೆ ಒಂದು ತಿಂಗಳ ಕಾಲ ಹೀಗೆ ಮುಂದುವರೆಸಿ, ಆರೋಗ್ಯ ವೃದ್ಧಿಸಿಕೊಳ್ಳಿ.... ಬನ್ನಿ ಇದರ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಫೋಟೋ ಕ್ಲಿಕ್ ಮಾಡಿ....

ತೂಕ ಕಳೆದುಕೊಳ್ಳಲು
ಮೆಂತೆ ನೆನಸಿದ ನೀರನ್ನು ಕುಡಿಯುವುದರಿಂದ ಮತ್ತು ನೆನೆಸಿದ ಮೆಂತೆಯನ್ನು ಸ್ವಲ್ಪ ತಿನ್ನುವುದರಿಂದ ಹಸಿವು ಕಡಿಮೆಯಾಗುವುದು. ಇದರಿಂದ ತೂಕ ಕಳೆದುಕೊಳ್ಳಲು ಸಹಕಾರಿ.

ಜೀರ್ಣಕ್ರಿಯೆ
ಮೆಂತೆ ನೀರಿನಲ್ಲಿರುವ ಉರಿಯೂತ ಶಮನಕಾರಿ ಗುಣವು ಜೀರ್ಣಕ್ರಿಯೆಯು ಸರಾಗವಾಗಲು ನೆರವಾಗುವುದು ಮತ್ತು ಹೊಟ್ಟೆ ಉರಿಯನ್ನು ಶಮಗೊಳಿಸುವುದು.

ರಕ್ತದೊತ್ತಡ ನಿಯಂತ್ರಿಸುವುದು
ಮೆಂತೆಯಲ್ಲಿ ಗ್ಲಾಕ್ಟೊಮನ್ನನ್ ಮತ್ತು ಪೊಟಾಶಿಯಂ ಇದೆ. ಇವೆರಡು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಕಾರಿ.

ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುವುದು
ಮೆಂತೆಯು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ತೆಗೆದುಹಾಕುವುದು ಎಂದು ಹಲವಾರು ಅಧ್ಯಯನಗಳು ಹೇಳಿವೆ. ಇದರೊಂದಿಗೆ ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಇದು ಕಾಪಾಡುವುದು.

ಸಂಧಿವಾತ
ಆ್ಯಂಟಿಆಕ್ಸಿಡೆಂಟ್ ಹಾಗೂ ಉರಿಯೂತ ಶಮನಕಾರಿ ಗುಣವನ್ನು ಹೊಂದಿರುವ ಮೆಂತ್ಯೆಯು ಸಂಧಿವಾತದ ನೋವನ್ನು ನಿವಾರಿಸುವುದು.

ಕ್ಯಾನ್ಸರ್ ತಡೆಗಟ್ಟುವುದು
ಮೆಂತೆಯು ದೇಹದ ಅದರಲ್ಲೂ ಕರುಳಿನಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆದುಹಾಕುವುದರಿಂದ ಕ್ಯಾನ್ಸರ್ ಬರದಂತೆ ತಡೆಯುವುದು.

ಮಧುಮೇಹ
ಮೆಂತೆಯಲ್ಲಿ ಗ್ಲಾಕ್ಟೊಮನ್ನನ್ ಎನ್ನುವ ಪ್ರಮುಖ ನಾರಿನಾಂಶವು ರಕ್ತವು ಸಕ್ಕರೆ ಅಂಶವು ಹೀರಿಕೊಳ್ಳುವುದನ್ನು ತಗ್ಗಿಸುವುದು. ಇದರಿಂದ ಮಧುಮೇಹ ತಡೆಯಬಹುದು.

ಕಿಡ್ನಿಯ ಕಲ್ಲು
ಖಾಲಿ ಹೊಟ್ಟೆಯಲ್ಲಿ ಒಂದು ತಿಂಗಳ ಕಾಲ ಮೆಂತೆ ನೆನೆಸಿದ ನೀರನ್ನು ಕುಡಿಯಿರಿ. ಇದು ಕಿಡ್ನಿಯಲ್ಲಿ ಕಲ್ಲನ್ನು ಹೊರಹಾಕಲು ನೆರವಾಗುವುದು.



Click it and Unblock the Notifications