Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಅನಾನಸ್ ಹಣ್ಣು ನೆನೆಸಿದ ನೀರು ಕುಡಿಯಿರಿ, ಆರೋಗ್ಯ ಪಡೆಯಿರಿ
ಇಂದಿನ ಜೀವನ ಶೈಲಿಯಲ್ಲಿ ನಾವು ಆರೋಗ್ಯ ಕಾಪಾಡಿಕೊಳ್ಳುವುದನ್ನೇ ಮರೆತು ಬಿಡುತ್ತೇವೆ. ಉತ್ತಮ ಆರೋಗ್ಯ ಪಡೆಯಬೇಕಾದರೆ ದೇಹದಲ್ಲಿನ ಪ್ರತಿರಕ್ಷಣಾ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವುದು ತುಂಬಾ ಮುಖ್ಯ. ಕೆಲವೊಂದು ಅನಾರೋಗ್ಯಗಳು ದೇಹವನ್ನು ಇನ್ನಿಲ್ಲದಂತೆ ಕಾಡಬಹುದು. ಇದಕ್ಕೆ ಹಲವಾರು ರೀತಿಯ ಕಾರಣಗಳಿರಬಹುದು. ಇಂತಹ ಸಮಸ್ಯೆಗಳು ನಿಮ್ಮ ವಯಸ್ಸನ್ನೂ ಕಡಿಮೆಗೊಳಿಸುವುದು. ಆದರೆ ಜೀವನಶೈಲಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಂಡು ಉತ್ತಮ ಆರೋಗ್ಯ ಪಡೆಯಬಹುದು. ಹುಳಿ ಮಿಶ್ರಿತ ಸಿಹಿಯಾದ ಅನಾನಸ್ ಜ್ಯೂಸ್‌ನ ಮಹತ್ವ ಅರಿಯಿರಿ!
ಬೆಳಿಗ್ಗೆ ಎದ್ದು ಉಗುರುಬೆಚ್ಚಗಿನ ನೀರನ್ನು ಕುಡಿಯುವುದು, ನಿಂಬೆರಸಕ್ಕೆ ಜೇನುತುಪ್ಪ ಬೆರಸಿ ಕುಡಿಯುವುದು ಅಥವಾ ತರಕಾರಿ ಜ್ಯೂಸ್ ಕುಡಿಯುವುದರಿಂದ ನಿಮ್ಮ ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಉತ್ತಮಪಡಿಸಬಹುದು. ಇವು ನಿಮ್ಮ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಕಾಕಿ ಪ್ರತಿರಕ್ಷಣಾ ವ್ಯವಸ್ಥೆಯನ್ನು ವೃದ್ಧಿಗೊಳಿಸುತ್ತದೆ. ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಅನಾನಸು ನೀರು ಅನ್ನು ಕುಡಿಯುವುದರಿಂದ ಆರೋಗ್ಯವು ಉತ್ತಮಗೊಳ್ಳುವುದು. ಸಾದಾ ನೀರಿಗಿಂತ 'ಹಣ್ಣು ನೆನೆಸಿದ' ನೀರೇ ಆರೋಗ್ಯಕಾರಿ
ಅನಾನಸಿನಲ್ಲಿರುವ ವಿಟಮಿನ್ ಸಿ, ಬ್ರೊಮೆಲೈನ್ ಮತ್ತು ಇತರ ಹಲವಾರು ರೀತಿಯ ಪೋಷಕಾಂಶಗಳಿವೆ. ಅನಾನಸನ್ನು ತುಂಡು ತುಂಡಾಗಿ ಮಾಡಿ ಅದನ್ನು ನೀರು ತುಂಬಿರುವ ಜಗ್‌ಗೆ ಹಾಕಿ. ಅದಕ್ಕೆ ಕೆಲವೊಂದು ಐಸ್ ತುಂಡುಗಳನ್ನು ಹಾಕಿಕೊಳ್ಳಿ. ಇದನ್ನು ರಾತ್ರಿ ವೇಳೆ ಪ್ರಿಡ್ಜ್ ನಲ್ಲಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಇಂತಹ ಆರೋಗ್ಯಕರ ಹವ್ಯಾಸಗಳು ನಿಮ್ಮ ಆರೋಗ್ಯ ವೃದ್ಧಿಸುವುದು. ಅನಾನಸು ನೀರನ್ನು ಕುಡಿಯುವುದರಿಂದ ಆಗುವಂತಹ ಲಾಭಗಳ ಬಗ್ಗೆ ನೀವು ಈ ಲೇಖನದಲ್ಲಿ ಓದಿ ತಿಳಿದುಕೊಳ್ಳಿ.

ಪ್ರಯೋಜನ #1
ಅನಾನಸಿನಲ್ಲಿ ವಿಟಮಿನ್ ಎ ಮತ್ತು ಬೆಟಾ ಕ್ಯಾರೋಟಿನ್ ಅಂಶಗಳಿವೆ. ಇದು ಕಣ್ಣುಗಳಿಗೆ ಒಳ್ಳೆಯದು. ಅನಾನಸು ನೀರನ್ನು ದಿನಾಲೂ ಕುಡಿದರೆ ಕಣ್ಣಿನ ಸಮಸ್ಯೆ ದೂರವಾಗುತ್ತದೆ.

ಪ್ರಯೋಜನ #2
ಅನಾನಸಿನಲ್ಲಿರುವ ಬ್ರೊಮೆಲೈನ್ ಎನ್ನುವ ಅಂಶವು ಹಲವಾರು ರೀತಿಯ ಕ್ಯಾನ್ಸರ್ ನ್ನು ತಡೆಗಟ್ಟುತ್ತದೆ ಎಂದು ಕೆಲವೊಂದು ಸಂಶೋಧನೆಗಳು ಹೇಳಿವೆ.

ಪ್ರಯೋಜನ #3
ಅನಾನಸು ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುವುದು. ಬ್ರೊಮೆಲೈನ್ ಜೀರ್ಣಕ್ರಿಯೆಗೆ ನೆರವಾಗುತ್ತದೆ.

ಪ್ರಯೋಜನ #4
ಇದರಲ್ಲಿರುವ ನಾರಿನಾಂಶ ಮತ್ತು ಆ್ಯಂಟಿ ಆಕ್ಸಿಡೆಂಟ್ ಗಳಿವೆ. ಇವುಗಳು ನಿಮ್ಮ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.

ಪ್ರಯೋಜನ #5
ಅನಾನಸು ಕರುಳು ಮತ್ತು ಯಕೃತ್ ನಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. ಇಷ್ಟು ಮಾತ್ರವಲ್ಲದೆ ಹುಳುಗಳನ್ನ ಹೊರಹಾಕುತ್ತದೆ.

ಪ್ರಯೋಜನ #6
ಅನಾನಸು ನೀರಿನಲ್ಲಿರುವ ಕೆಲವೊಂದು ಅಂಶಗಳು ಹಲ್ಲಿನಲ್ಲಿ ಪದರಗಳು ನಿರ್ಮಾಣವಾಗುವುದನ್ನು ತಡೆಯುತ್ತದೆ ಮತ್ತು ಹಲ್ಲುಗಳನ್ನು ಸ್ವಚ್ಛವಾಗಿಡುತ್ತದೆ.

ಪ್ರಯೋಜನ #7
ಅನಾನಸಿನಲ್ಲಿರುವ ಐಯೋಡಿನ್ ಮತ್ತು ಬ್ರೊಮೆಲೈನ್ ಅಂಶಗಳು ಥೈರಾಯ್ಡ್ ಸಮಸ್ಯೆಯನ್ನು ನಿವಾರಿಸುತ್ತದೆ.

ಪ್ರಯೋಜನ #8
ಇದು ದೇಹದಲ್ಲಿರುವ ಉರಿಯೂತವನ್ನು ಕಡಿಮೆ ಮಾಡಿ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ.



Click it and Unblock the Notifications
