ಪುರುಷರ ಲೈಂಗಿಕ ಶಕ್ತಿಯನ್ನು ಹೆಚ್ಚಿಸುವ ಎಂಟು ಆಹಾರ ಪದಾರ್ಥಗಳು

By: Deepak
Subscribe to Boldsky

ಲೈಂಗಿಕ ಸಾಮರ್ಥ್ಯವು ನೇರವಾಗಿ ನಾವು ಸೇವಿಸುವ ಆಹಾರ ಪದಾರ್ಥದ ಮೇಲೆ ಅವಲಂಬಿತವಾಗಿರುತ್ತದೆ. ಆದ್ದರಿಂದಲೇ ಆಹಾರವನ್ನು ಸಾತ್ವಿಕ, ರಾಜಸಿಕ ಮತ್ತು ತಾಮಸಿಕ ಎಂದು ಮೂರು ವಿಭಾಗಗಳಲ್ಲಿ ವಿಂಗಡಿಸಿರುತ್ತಾರೆ. ನಾವು ತಿನ್ನುವ ಆಹಾರವು ನಮ್ಮ ವರ್ತನೆಯನ್ನು ನಿರ್ಧರಿಸುತ್ತದೆ ಎಂದು ಆಯುರ್ವೇದದಲ್ಲಿಯೇ ಉಲ್ಲೇಖಗೊಂಡಿದ್ದು, ಆಧುನಿಕ ವೈದ್ಯ ಪದ್ಧತಿಯು ಸಹ ಇದನ್ನು ಅನುಮೋದಿಸುತ್ತದೆ.   ದಾಂಪತ್ಯ ಮಿಲನಕ್ಕೆ ಪೂರಕ ಈ 20 ಕಾರಣಗಳು!

ಆಧುನಿಕ ಜೀವನ ಶೈಲಿಯು ಪುರುಷರ ಲೈಂಗಿಕತೆಯ ಮೇಲೆ ನಕಾರಾತ್ಮಕವಾಗಿ ಪರಿಣಾಮವನ್ನು ಬೀರುತ್ತಿರುವುದನ್ನು ಪ್ರತಿಯೊಬ್ಬರೂ ಗಮನಿಸಬಹುದು. ನಿಮಿರುವಿಕೆಯ ದೋಷ ಹಾಗು ಶೀಘ್ರ ವೀರ್ಯ ಸ್ಖಲನವು ಪುರುಷರ ಲೈಂಗಿಕ ಸಾಮರ್ಥ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಇದಕ್ಕಾಗಿ ಪುರುಷರು ತಮ್ಮ ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ವಯಾಗ್ರ ಹಾಗು ಅದೇ ರೀತಿಯ ಹಲವಾರು ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ.   ಲೈಂಗಿಕ ಕ್ರಿಯೆ ನಡೆಸಿದ ಮೇಲೆ ಮೂತ್ರ ವಿಸರ್ಜನೆ ಮಾಡಲೇಬೇಕು!

ಆದರೂ ಈ ಔಷಧಿಗಳು ತತ್‌ಕ್ಷಣಕ್ಕೆ ನೆರವಾದರೂ ಸಹ ಮುಂದಿನ ಜೀವನದಲ್ಲಿ ಹಲವಾರು ಅಡ್ಡಪರಿಣಾಮಗಳನ್ನು ಉಂಟು ಮಾಡುತ್ತವೆ. ದೀರ್ಘಕಾಲದ ನಿಮಿರುವಿಕೆ ಸಮಸ್ಯೆಗಳು ಮತ್ತು ಇತರೆ ಅಡ್ಡಪರಿಣಾಮಗಳು ಈ ಔಷಧಿಗಳು ಉಂಟು ಮಾಡುತ್ತವೆ. ಆದರೆ ಈಗ ಈ ಔಷಧಿಗಳನ್ನು ನೀವು ಅವಲಂಬಿಸಿ ನಿಮ್ಮ ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವ ಅಗತ್ಯವಿಲ್ಲ. ಈ ಔಷಧಿಗಳು ಮಾಡುವ ಕೆಲಸವನ್ನು ಕೆಲವೊಂದು ಸ್ವಾಭಾವಿಕ ಆಹಾರ ಪದಾರ್ಥಗಳು ಮಾಡುತ್ತವೆ.  ಬೆಡ್‌ರೂಮ್‌ನಲ್ಲಿ ವಿಜೃಂಭಿಸಲು ನೆರವಾಗುವ ವಯಾಗ್ರ ಜ್ಯೂಸ್

ಈ ಆಹಾರ ಪದಾರ್ಥಗಳು ಶಿಶ್ನಕ್ಕೆ ರಕ್ತ ಸಂಚಾರವನ್ನು ಹೆಚ್ಚಿಸುತ್ತವೆ, ವೀರ್ಯದ ಗುಣಮಟ್ಟಗಳನ್ನು ಹೆಚ್ಚಿಸುತ್ತವೆ, ನಿಮಿರುವಿಕೆಯ ದೋಷಗಳನ್ನು ಸರಿಪಡಿಸುತ್ತವೆ ಮತ್ತು ಲೈಂಗಿಕ ಸಾಮರ್ಥ್ಯವನ್ನು ಸಹ ಹೆಚ್ಚಿಸುತ್ತವೆ. ಈ ಆಹಾರ ಪದಾರ್ಥಗಳು ವಯಾಗ್ರಕ್ಕೆ ಬದಲಿಯಾಗಿ ಪುರುಷರ ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸಲು ನೆರವಾಗುತ್ತದೆ.. ಬನ್ನಿ ಇನ್ನು ತಡಮಾಡದೆ ಆ ಆಹಾರ ಪದಾರ್ಥಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ.....    

ಶುಂಠಿ

ಶುಂಠಿ

ಈ ಮಸಾಲೆ ಪದಾರ್ಥವು ನಿಮ್ಮ ಲೈಂಗಿಕ ಜೀವನವನ್ನು ಗಣನೀಯವಾಗಿ ಸುಧಾರಿಸುತ್ತದೆ. ಅದರಲ್ಲಿಯೂ ಇದು ನಿಮಿರುವಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ಶುಂಠಿಯು ಶಿಶ್ನಕ್ಕೆ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ, ವೀರ್ಯದ ಗುಣಮಟ್ಟವನ್ನು ಸುಧಾರಿಸುತ್ತದೆ ಮತ್ತು ನಿಮಿರುವಿಕೆಯ ದೋಷವನ್ನು ಸರಿಪಡಿಸುತ್ತದೆ. ಒಂದು ಟೀಸ್ಪೂನ್ ಶುಂಠಿಯನ್ನು ಪ್ರತಿದಿನ ಕೆಲವು ವಾರಗಳವರೆಗೆ ಸೇವಿಸಿ. ಇದರಿಂದ ಟೆಸ್ಟೋಸ್ಟಿರೋನ್ ಮಟ್ಟಗಳು ಹೆಚ್ಚಾಗುತ್ತವೆ ಎಂದು ಹೇಳಲಾಗುತ್ತದೆ.

ದಾಳಿಂಬೆ

ದಾಳಿಂಬೆ

ದಾಳಿಂಬೆಯು ತನ್ನಲ್ಲಿರುವ ಆಂಟಿಆಕ್ಸಿಡೆಂಟ್ ಕಾರಣವಾಗಿ ಶಿಶ್ನಕ್ಕೆ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ. ದಾಳಿಂಬೆಯನ್ನು ಸೇವಿಸುವುದರಿಂದ ನಿಮಿರುವಿಕೆಯ ದೋಷವನ್ನು ಸರಿಪಡಿಸಿಕೊಳ್ಳಬಹುದು ಮತ್ತು ನಿಮ್ಮ ಶಿಶ್ನವನ್ನು ಗಟ್ಟಿಗೊಳಿಸಬಹುದು. ದಾಳಿಂಬೆಯು ರಕ್ತವನ್ನು ಶುದ್ಧಿಗೊಳಿಸುತ್ತದೆ ಎಂಬ ನಂಬಿಕೆ ಹಲವರಲ್ಲಿ ಇದೆ. ಜೊತೆಗೆ ಇದು ಅನಿಮಿಯಾಗೂ ಸಹ ಒಳ್ಳೆಯದು.

ಬಾಳೆಹಣ್ಣು

ಬಾಳೆಹಣ್ಣು

ಬಾಳೆಹಣ್ಣಿನಲ್ಲಿ ಪೊಟಾಶಿಯಂ ಪ್ರಮಾಣ ಸಮೃದ್ಧವಾಗಿರುತ್ತದೆ. ಇದು ಶಿಶ್ನಕ್ಕೆ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ ಮತ್ತು ರಕ್ತದೊತ್ತಡವನ್ನು ನಿವಾರಿಸುತದೆ. ಎರಡು ಬಾಳೆಹಣ್ಣನ್ನು ಪ್ರತಿದಿನ ಸೇವಿಸಿದರೆ ಶಿಶ್ನದ ಆರೋಗ್ಯ ಸುಧಾರಿಸುತ್ತದೆ ಮತ್ತು ಲೈಂಗಿಕ ಕ್ರಿಯೆಯಲ್ಲಿ ಮತ್ತಷ್ಟು ಆನಂದ ದೊರೆಯುತ್ತದೆ.

ಕಲ್ಲಂಗಡಿ

ಕಲ್ಲಂಗಡಿ

ಇದರಲ್ಲಿ ಸಮೃದ್ಧವಾಗಿರುವ ಎಲ್-ಸಿಟ್ರಲ್ಲೈನ್ ಎಂಬ ಅಮೈನೊ ಆಮ್ಲವು ನಿಮಿರುವಿಕೆಯನ್ನು ಗಟ್ಟಿಗೊಳಿಸುತ್ತದೆಯಂತೆ. ಈ ಅಮೈಒ ಆಮ್ಲವು ಶಿಶ್ನಕ್ಕೆ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ ಹಾಗು ದೇಹದಲ್ಲಿ ನೈಟ್ರಿಕ್ ಆಮ್ಲವನ್ನು ಉತ್ಪಾದಿಸುತ್ತದೆ. ಕಲ್ಲಂಗಡಿಯು ನಿಮ್ಮ ಶಿಶ್ನದ ಆರೋಗ್ಯವನ್ನು ಹೆಚ್ಚಿಸಲು ಇರುವ ಅತ್ಯುತ್ತಮ ಆಹಾರ ಪದಾರ್ಥವಾಗಿರುತ್ತದೆ.

ಕಾಫಿ

ಕಾಫಿ

ಒಂದು ಅಧ್ಯಯನದ ಪ್ರಕಾರ ಯಾರು ಒಂದು ದಿನಕ್ಕೆ ಎರಡು ಅಥವಾ ಮೂರು ಕಪ್ ಸೇವಿಸುತ್ತಾರೋ ಅವರಿಗೆ ನಿಮಿರುವಿಕೆಯ ದೋಷ ಬರುವ ಸಾಧ್ಯತೆಯು ಕಾಫಿ ಸೇವಿಸದೆ ಇರುವ ಪುರುಷರಿಗೆ ಹೋಲಿಸಿದರೆ ಕಡಿಮೆ ಇರುತ್ತದೆಯಂತೆ. ಕಾಫಿಯಲ್ಲಿರುವ ಉದ್ದೀಪನಕಾರಕಗಳು ಶಿಶ್ನಕ್ಕೆ ರಕ್ತ ಸಂಚಾರವನ್ನು ಹೆಚ್ಚಿಸುತ್ತವೆಯಂತೆ ಹಾಗು ಆ ಮೂಲಕ ಶಿಶ್ನವನ್ನು ಸದೃಢವಾಗಿ ಇರಿಸುತ್ತವೆಯಂತೆ.

ಬಿಸಿ ಮಸಾಲೆ ಪದಾರ್ಥಗಳು

ಬಿಸಿ ಮಸಾಲೆ ಪದಾರ್ಥಗಳು

ಒಂದು ಅಧ್ಯಯನದ ಪ್ರಕಾರ ಬಿಸಿ ಸಾಸ್ ಮತ್ತು ಮಸಾಲೆ ಪದಾರ್ಥಗಳನ್ನು ಸೇವಿಸುವ ಪುರುಷರಲ್ಲಿ ಪುರುಷರ ಹಾರ್ಮೋನ್ ಆದ ಟೆಸ್ಟೋಸ್ಟಿರೋನ್ ಅಧಿಕವಾಗಿರುವುದು ಕಂಡು ಬರುತ್ತದೆಯಂತೆ. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ಅಂಶವು ಶಿಶ್ನದ ಗಾತ್ರವನ್ನು ಹೆಚ್ಚಿಸುತ್ತದೆ ಮತ್ತು ಹೊಟ್ಟೆಯ ಸುತ್ತ ಇರುವ ಕೊಬ್ಬನ್ನು ಸಹ ಕರಗಿಸುತ್ತದೆಯಂತೆ.

ಟೊಮೇಟೊ ಹಣ್ಣುಗಳು

ಟೊಮೇಟೊ ಹಣ್ಣುಗಳು

ಟೊಮೇಟೊಗಳನ್ನು ಸೇವಿಸುವ ಪುರುಷರಲ್ಲಿ ವೀರ್ಯದ ಗುಣಮಟ್ಟವು ಉತ್ತಮವಾಗಿರುತ್ತದೆ ಹಾಗು ಇವರಲ್ಲಿ ಪ್ರೋಸ್ಟೇಟ್ ಕ್ಯಾನ್ಸರ್ ಬರುವ ಸಾಧ್ಯತೆ ಕಡಿಮೆ ಇರುತ್ತದೆ ಎಂದು ತಿಳಿದು ಬಂದಿದೆ. ಇದಕ್ಕೆ ಟೊಮಾಟೊದಲ್ಲಿರುವ "ಲೈಕೊಪೀನ್" ಎಂಬ ಆಂಟಿಆಕ್ಸಿಡೆಂಟ್ ಕಾರಣ. ಇದು ಪುರುಷರ ಜನನಾಂಗದ ಸಾಮರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ ದೇಹದಲ್ಲಿರುವ ಟಾಕ್ಸಿನ್‌ಗಳನ್ನು ಸಹ ನಿವಾರಿಸುತ್ತದೆ.

ಪಾಲಕ್ ಸೊಪ್ಪು

ಪಾಲಕ್ ಸೊಪ್ಪು

ಇದು ಶಿಶ್ನಕ್ಕೆ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ. ಪಾಲಕ್‌ನಲ್ಲಿ ಮೆಗ್ನಿಷಿಯಂ ಪ್ರಮಾಣ ಅಧಿಕವಾಗಿರುತ್ತದೆ ಮತ್ತು ಇದು ರಕ್ತ ನಾಳಗಳ ಉರಿಯೂತವನ್ನು ಕಡಿಮೆ ಮಾಡುವ ಮೂಲಕ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ. ಪಾಲಕ್ ಅನ್ನು ಪ್ರತಿದಿನ ಸೇವಿಸುವ ಮೂಲಕ ವಯಾಗ್ರ ನೀಡುವಂತಹ ಶಕ್ತಿಯನ್ನು ನಾವು ಸ್ವಾಭಾವಿಕವಾಗಿ ಪಡೆಯಬಹುದು. ಇದರಲ್ಲಿ ಉದ್ದೀಪನಗೊಳಿಸುವ ಅಂಶ ಹಾಗು ಲೈಂಗಿಕ ಕ್ರಿಯೆ ನಡೆಸುವಾಗ ಅಧಿಕ ಆನಂದವನ್ನು ಸಹ ನೀಡಲು ಸಹಾಯ ಮಾಡುತ್ತದೆ.

English summary

8-sexual-super-foods-for-males

Sexual health depends directly on the foods that we eat. The foods that we eat has a major impact on our sexual health. Men can face a lot of problems when it comes to their sexual life due to problems such as erectile dysfunction and premature ejaculation. For this, they use many medicines including Viagra, which is the most commonly used drug, to improve their performance on bed.
Subscribe Newsletter