Latest Updates
-
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ
ಆರೋಗ್ಯ ಟಿಪ್ಸ್: ಬಿರು ಬಿಸಿಲಿನ ದಾಹಕ್ಕೆ, ತಂಪುಣಿಸುವ 'ಮಜ್ಜಿಗೆ'
ಮೊಸರಿಗೆ ಕೊಂಚ ನೀರು ಸೇರಿಸಿ,ಇದಕ್ಕೆ ಹಸಿಮೆಣಸು, ಉಪ್ಪು, ಇಂಗು, ಜೀರಿಗೆ ಪುಡಿ, ಚಾಟ್ ಮಸಾಲಾ, ಕೊತ್ತಂಬರಿ ಸೊಪ್ಪು, ಶುಂಠಿ, ಬೇವಿನ ಸೊಪ್ಪು, ಬೆಳ್ಳುಳ್ಳಿ ಮೊದಲಾದವುಗಳನ್ನು ಕೊಂಚ ಕೊಂಚವಾಗಿ ಸೇರಿಸಿ ಮಿಕ್ಸಿಯಲ್ಲಿ ಗೊಟಾಯಿಸಿ ಕುಡಿದರೆ ಇದಕ್ಕ
ಬೇಸಿಗೆಯ ಜೊತೆಗೇ ಮಕ್ಕಳ ಪರೀಕ್ಷೆ ಮತ್ತು ರಜೆಗಳೂ ಸಾಲಾಗಿ ಬಂದಿವೆ. ನಿಧಾನಕ್ಕೆ ಕೆಲವು ಹಣ್ಣುಗಳೂ ಮಾರುಕಟ್ಟೆಗೆ ಲಗ್ಗೆಯಿಡುತ್ತಿವೆ. ಈ ಹೊತ್ತಿನಲ್ಲಿ ಹೊರಹೋಗದೇ ಮಳೆ ಬಂದಾಗ ಹೋಗಲಿಕ್ಕಾಗುತ್ತದೆಯೇ? ಆದರೆ ಸೆಖೆಗೆ ಏನು ಮಾಡುವುದು? ಇದಕ್ಕೆ ಏಸಿಯಲ್ಲಿ ಕುಳಿತುಕೊಳ್ಳುವುದು. ಆದರೆ ಇದರಿಂದ ಹೊರ ಹೋದಂತಾಗುವುದಿಲ್ಲವಲ್ಲ! ವಾವ್..ದೇಹಕ್ಕೆ ತಂಪುಣಿಸುವ ಮಜ್ಜಿಗೆ ಸಾ೦ಬಾರ್ ರೆಸಿಪಿ!
ಇನ್ನೊಂದು ಪರ್ಯಾಯವೆಂದರೆ ಐಸ್ ಕ್ರೀಂ ತಿನ್ನುವುದು, ಇದರಿಂದ ತೂಕ ಹೆಚ್ಚಾಗುತ್ತದಲ್ಲ! ಎಲ್ಲವೂ ನೋಡಬೇಕೆಂದರೆ ತಣ್ಣನೆಯ ಮಜ್ಜಿಗೆ ಕುಡಿಯುವುದೇ ಉತ್ತಮ. ಹೌದು ಆಯುರ್ವೇದದಲ್ಲಿ ಸಾತ್ವಿಕ ಆಹಾರ ಎಂದು ಪರಿಗಣಿಸಲ್ಪಟ್ಟ ಮಜ್ಜಿಗೆ ಬೇಸಿಗೆಯ ದಣಿವನ್ನು ಆರಿಸಲು ಉತ್ತಮವಾಗಿದೆ. ಮಜ್ಜಿಗೆ ಎಂದರೆ ವಾಸ್ತವವಾಗಿ ಮೊಸರಿನಿಂದ ಬೆಣ್ಣೆಯನ್ನು ಕಡೆದು ತೆಗೆದ ಬಳಿಕ ಉಳಿದ ನೀರು. ಆದರೆ ಇದು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಾಗಲು ಸಾಧ್ಯವಿಲ್ಲ. ರುಚಿ ರುಚಿಯಾದ ಮಜ್ಜಿಗೆ ದೋಸೆ ರೆಸಿಪಿ
ಆದ್ದರಿಂದ ಮೊಸರಿಗೆ ಕೊಂಚ ನೀರು ಸೇರಿಸಿ ತೆಳ್ಳಗಾಗಿಸಿ, ಇದಕ್ಕೆ ಹಸಿಮೆಣಸು, ಉಪ್ಪು, ಜೀರಿಗೆ ಪುಡಿ, ಚಾಟ್ ಮಸಾಲಾ, ಕೊತ್ತಂಬರಿ ಸೊಪ್ಪು, ಶುಂಠಿ, ಬೇವಿನ ಸೊಪ್ಪು, ಬೆಳ್ಳುಳ್ಳಿ ಮೊದಲಾದವುಗಳನ್ನು ಕೊಂಚ ಕೊಂಚವಾಗಿ ಸೇರಿಸಿ ಮಿಕ್ಸಿಯಲ್ಲಿ ಗೊಟಾಯಿಸಿ ಕುಡಿದರೆ ಬೇಸಿಗೆಗೆ ಇದಕ್ಕಿಂತ ಉತ್ತಮವಾದ ಪೇಯ ಇನ್ನೊಂದಿಲ್ಲ... ಬನ್ನಿ ಮಜ್ಜಿಗೆಯ ಪ್ರಯೋಜನಗಳೇನು ಎಂಬುದನ್ನು ನೋಡೋಣ.....

ಜೀರ್ಣಕ್ರಿಯೆಗೆ ಬಹಳ ಒಳ್ಳೆಯದು....
ಮಜ್ಜಿಗೆಯಲ್ಲಿ ಮೊಸರು ಮುಖ್ಯವಾಗಿರುವ ಕಾರಣ ಮೊಸರಿನ ಗುಣಗಳೆಲ್ಲವೂ ಇದೆ. ಇದರಲ್ಲಿರುವ ಪ್ರೋಬಯೋಟಿಕ್ಸ್ ಅಥವಾ ಜೀರ್ಣಕ್ರಿಯೆಗೆ ಸಹಕರಿಸುವ ಪೋಷಕಾಂಶಗಳು ಜೀರ್ಣಾಂಗಗಳ ಹೊರೆಯನ್ನು ಕಡಿಮೆ ಮಾಡುತ್ತವೆ. ಅಲ್ಲದೇ ಮಜ್ಜಿಗೆಯಲ್ಲಿ ಸೇರಿಸಿರುವ ಜೀರಿಗೆ ಪುಡಿ ಮೊದಲಾದ ಮಸಾಲೆ ಪದಾರ್ಥಗಳು ಜೀರ್ಣಕ್ರಿಯೆಗೆ ಇನ್ನಷ್ಟು ಸಹಕರಿಸಿ ಜೀರ್ಣಕ್ರಿಯೆಯನ್ನು ಸುಲಭ ಮತ್ತು ಪರಿಪೂರ್ಣಗೊಳಿಸುತ್ತವೆ.

ಹೊಟ್ಟೆ ಉಬ್ಬರಿಕೆ ಮೊದಲಾದ ಸಮಸ್ಯೆಗೆ ರಾಮಬಾಣ
ಸಂಸ್ಕೃತಿಯಲ್ಲಿಯೂ ಅತಿಥಿಗಳು ಹೆಚ್ಚು ಉಂಡಷ್ಟೂ ಹೆಚ್ಚು ಸಂತೋಷಪಡುವುದರಿಂದ ಅತಿಥಿಗಳಿಗೆ ಬೇಡ ಬೇಡ ಎಂದರೂ ಇನ್ನೂ ಕೊಂಚ ಬಡಿಸುತ್ತೇವೆ. ಕಾರಣವಾಗಿ ಹೆಚ್ಚಿನ ಪ್ರಮಾಣದ ಮಸಾಲೆ ಹೊಟ್ಟೆ ಸೇರುತ್ತದೆ. ಇವು ಹೊಟ್ಟೆಯಲ್ಲಿ ಉರಿ, ಆಮ್ಲೀಯತೆ ಮೊದಲಾದ ತೊಂದರೆಗಳನ್ನು ಉಂಟುಮಾಡಬಹುದು. ಆದರೆ ಹಾಲಿನಲ್ಲಿರುವ ಪ್ರೋಟೀನುಗಳು ಮಜ್ಜಿಗೆಯಲ್ಲಿಯೂ ಇದ್ದು ಈ ಉರಿ ತರಿಸುವ ಮಸಾಲೆಗಳನ್ನು ತಟಸ್ಥವಾಗಿಸುತ್ತವೆ. ಆದ್ದರಿಂದ ಊಟದ ಕಡೆಯ ಆಹಾರವಾಗಿ ಮಜ್ಜಿಗೆಯನ್ನು ಸೇವಿಸುವ ಮೂಲಕ ಮಸಾಲೆಗಳ ಕಾರಣ ಎದುರಾಗಬಹುದಾಗಿದ್ದ ಉರಿ, ಆಮ್ಲೀಯತೆ, ಹೊಟ್ಟೆ ಉಬ್ಬರಿಕೆ ಮೊದಲಾದವು ಇಲ್ಲವಾಗುತ್ತವೆ.

ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ
ಮಜ್ಜಿಗೆಯಲ್ಲಿ ಕ್ಯಾಲ್ಸಿಯಂ ಹೊರತಾಗಿ ವಿವಿಧ ಪ್ರೋಟೀನುಗಳು, ವಿಟಮಿನ್ ಬಿ, ಪೊಟ್ಯಾಶಿಯಂ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಇವೆಲ್ಲವೂ ಆರೋಗ್ಯಕ್ಕೆ ಪೂರಕವಾಗಿವೆ. ಅಲ್ಲದೇ ಸಾಕಷ್ಟು ಪ್ರಮಾಣದಲ್ಲಿ ಲ್ಯಾಕ್ಟಿಕ್ ಆಮ್ಲವಿದ್ದು ಜಠರದಲ್ಲಿರುವ ಪಾಥೋಜೆನ್ ಮತ್ತು ಕೆಟ್ಟ ಬ್ಯಾಕ್ಟೀರಿಯಾಗಳ ನಿವಾರಣೆಗೆ ಸಹಕರಿಸುತ್ತದೆ. ಪರಿಣಾಮವಾಗಿ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ
ನಿತ್ಯವೂ ಮಜ್ಜಿಗೆಯನ್ನು ಸೇವಿಸುವ ಮೂಲಕ ದೇಹಕ್ಕೆ ಹಲವು ರೀತಿಯ ಲಾಭಗಳಿವೆ. ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸುವುದು, ರಕ್ತದೊತ್ತಡ ಸಮರ್ಪಕವಾಗಿರುವಂತೆ ನೋಡಿಕೊಳ್ಳುವುದು ಮೊದಲಾದವು ನೇರವಾದ ಲಾಭಗಳಾಗಿವೆ.

ದೇಹಕ್ಕೆ ತಂಪುಣಿಸುತ್ತದೆ
ಬೇಸಿಗೆಯ ಬಿಸಿಯಲ್ಲಿ ದೇಹವೂ ಬಿಸಿಯಾಗತೊಡಗುತ್ತದೆ. ಇದನ್ನು ತಣಿಸಲು ಅತಿ ಹೆಚ್ಚಿನ ಪ್ರಮಾಣದಲ್ಲಿ ಬೆವರು ಹರಿಯಬೇಕಾಗುತ್ತದೆ. ಆಗ ದೇಹದಿಂದ ನಷ್ಟವಾಗುವ ನೀರನ್ನು ಬೇಗನೇ ಭರ್ತಿಮಾಡಿಕೊಳ್ಳದೇ ಇದ್ದರೆ ದ್ರವದ ಪ್ರಮಾಣ ಕಡಿಮೆಯಾಗಿ ದೇಹ ಹೆಚ್ಚು ಬಿಸಿಯಾಗಲು ಕಾರಣವಾಗುತ್ತದೆ. ಮಜ್ಜಿಗೆಯ ಸೇವನೆ ಈ ತೊಂದರೆಯಿಂದ ತಡೆಯುತ್ತದೆ ಹಾಗೂ ದೇಹವನ್ನು ತಂಪಾಗಿಡಲು ನೆರವಾಗುತ್ತದೆ. ಅಲ್ಲದೇ ರಜೋನಿವೃತ್ತಿ ಸಮಯ ಹತ್ತಿರಾಗುತ್ತಿರುವ ಮಹಿಳೆಯರಿಗೆ ಈ ದಿನಗಳ ಮುನ್ನ ಮತ್ತು ಹಿಂದಿನ ದಿನಗಳಲ್ಲಿ ಎದುರಾಗುವ ಸ್ರಾವದಿಂದಲೂ ಮಜ್ಜಿಗೆ ಉಪಶಮನ ನೀಡುತ್ತದೆ.



Click it and Unblock the Notifications
