Latest Updates
-
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಗರ್ಭಕಂಠದ ಕ್ಯಾನ್ಸರ್ ಲಸಿಕೆ ಬಗ್ಗೆ ನೀವು ತಿಳಿದಿರಲೇಬೇಕಾದ ಸಂಗತಿಗಳಿವು
ಭಾರತದಲ್ಲಿ ಗರ್ಭಕಂಠದ ಕ್ಯಾನ್ಸರ್/ ಸರ್ವಿಕಲ್ ಕ್ಯಾನ್ಸರ್ ತಡೆಗಟ್ಟಲು ಲಸಿಕೆ ಕಂಡು ಹಿಡಿಯಲಾಗಿದ್ದು, ಈ ಲಸಿಕೆ ಇನ್ನೇನು ಕೆಲವೇ ದಿನಗಳಲ್ಲಿ ಮಾರುಕಟ್ಟೆಗೆ ಬರಲಿದೆ. ಸೆರಂ ಇನ್ಸಿಟ್ಯೂಟ್ ಆಫ್ ಇಂಡಿಯಾ (SII)ಈ ವ್ಯಾಕ್ಸಿನ್ ಕಂಡು ಹಿಡಿದಿದ್ದು ದಿ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI)ದಿಂದ ಅನುಮತಿ ದೊರಕಿದೆ. ಜನರಿಗೆ ಕೈಗೆಟುಕುವ ದರದಲ್ಲಿ ಈ ಲಸಿಕೆ ನೀಡಲು ತೀರ್ಮಾನಿದ್ದು, ಈ ಲಸಿಕೆ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನನಲ್ಲಿ ಮಹತ್ತರದ ಹೆಜ್ಜೆಯಾಗಿದೆ.
ಮಹಿಳೆಯರನ್ನು ಕಾಡುತ್ತಿರುವ ಕ್ಯಾನ್ಸರ್ ಸಮಸ್ಯೆಗಳಲ್ಲಿ ಗರ್ಭಕಂಠದ ಕ್ಯಾನ್ಸರ್ 2ನೇ ಸ್ಥಾನದಲ್ಲಿದೆ. ಭಾರತದಲ್ಲಿ ಗರ್ಭಕಂಠದ ಕ್ಯಾನ್ಸರ್ 15-44 ವರ್ಷದವರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಸರ್ವಿಕಲ್ ಕ್ಯಾನ್ಸರ್ ಲಸಿಕ ಪಡೆಯುವುದರಿಂದ ಈ ಕಾಯಿಲೆಯನ್ನು ಶೇ. 85-90ರಷ್ಟು ತಡೆಯಬಹುದಾಗಿದೆ. ಈ ಲಸಿಕೆ ಡಿಸೆಂಬರ್‌ನಲ್ಲಿ ದೊರೆಯಲಿದೆ.

ಗರ್ಭಕಂಠದ ಕ್ಯಾನ್ಸರ್ ಹೇಗೆ ಬರುತ್ತದೆ?
ಗರ್ಭಕಂಠದ ಕ್ಯಾನ್ಸರ್ ಪ್ರಮುಖವಾಗಿ ಲೈಂಗಿಕ ಸೋಂಕಿನಿಂದ ಬರುತ್ತದೆ. HPV ಅಂದರೆ human papillomaviruses ಲೈಂಗಿಕ ಸೋಂಕಿನಿಂದಾಗಿ ಬರುತ್ತದೆ. ಈ ಲೈಂಗಿಕ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಬೇಗನೆ ಹರಡುವುದು. ಮಹಿಳೆಯರಿಗೆ ಈ ಸೋಂಕು ತಗುಲಿದಾಗ ಗರ್ಭಕಂಠದ ಕ್ಯಾನ್ಸರ್ ಉಂಟಾಗುವುದು.
ಆದರೆ ಈ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಬಹುದು ಎಂಬುವುದೇ ಸಮಧಾನಕರ.
ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಲಸಿಕೆ ಬಂದಿದ್ದು ಇದರ ಬಗ್ಗೆ ಕೆಲ ತಪ್ಪು ಕಲ್ಪನೆಗಳು ಹರಿದಾಡುತ್ತಿದೆ, ಅದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ:

ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಲಸಿಕೆ ಬಗ್ಗೆ ತಿಳಿಯಲೇಬೇಕಾದ ಸಂಗತಿಗಳು
HPV ಸೋಂಕು ಲೈಂಗಿಕ ಕ್ರಿಯೆಯಿಂದ ಒಬ್ಬರಿಂದ ಮತ್ತೊಬ್ರಿಗೆ ಹರಡುತ್ತದೆ. ಈಗ ಬಂದಿರುವ ಹೊಸ ಲಸಿಕೆ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಪರಿಣಾಮಕಾರಿಯಾಗಿದೆ. ಈ ಲಸಿಕೆ ಬಗ್ಗೆ ನೀವು ಈ ಸಂಗತಿಗಳನ್ನು ತಿಳಿದುಕೊಂಡರೆ ಒಳ್ಳೆಯದು
* HPV ವೈರಸ್ ಲೈಂಗಿಕಕ್ರಿಯೆ ಮೂಲಕ ಹರಡುತ್ತದೆ. ಆದ್ದರಿಂದ ಲಸಿಕೆಯನ್ನು ಹದಿಹರೆಯದ ಪ್ರಾಯದಲ್ಲಿಯೇ ತೆಗೆದುಕೊಳ್ಳುವುದು ಒಳ್ಳೆಯದು. ಆಗ ಈ ಸೋಂಕು ತಡೆಗಟ್ಟಲು ಸುಲಭವಾಗುವುದು.
* ಮಹಿಳೆಯರು ಈ ಲಸಿಕೆಯನ್ನು ತೆಗೆದುಕೊಳ್ಳಲೇಬೇಕು, ಹಾಗಂತ ಅವರು ಮಾತ್ರ ಈ ಲಸಿಕೆ ತೆಗೆದುಕೊಳ್ಳಬೇಕು ಎಂದೇನಿಲ್ಲ ಪುರುಷರಿಗೂ HPV ಸೋಂಕು ಹರಡುವುದರಿಂದ ಪುರುಷರು, ಮಂಗಳಮುಖಿಯರು ಈ ಲಸಿಕೆ ಪಡೆಯಬಹುದು.
* ಈ ಲಸಿಕೆಯನ್ನು ಎರಡು ಡೋಸ್‌ನಲ್ಲಿ ನೀಡಲಾಗುತ್ತಿದ್ದು ಮೊದಲ ಡೋಸ್ ಪಡೆದಾದ ಮೇಲೆ 6 ತಿಂಗಳ ನಂತರ ಮತ್ತೊಂದು ಡೋಸ್ ಪಡೆಯಬೇಕು. 9-14ರ ಪ್ರಾಯದಲ್ಲಿ ಈ ಲಸಿಕೆ ಪಡೆಯುವುದು ಒಳ್ಳೆಯದು.

ಸರ್ವಿಕಲ್ ಕ್ಯಾನ್ಸರ್ ವ್ಯಾಕ್ಸಿನ್ ಸುರಕ್ಷಿತವೇ?
* HPV ಲಸಿಕೆಯನ್ನು ತುಂಬಾ ಸುರಕ್ಷಿತ ಎಂದು ಪರಿಗಣಿಸಲಾಗಿದೆ, ಒಂದು ಸ್ವಲ್ಪ ಅಡ್ಡಪರಿಣಾಮವಾದರೂ ಒಂದು ಅಥವಾ 2 ದಿನಕ್ಕಿಂತ ಹೆಚ್ಚು ದಿನ ಆ ಸಮಸ್ಯೆ ಇರಲ್ಲ.
ಸಾಮಾನ್ಯವಾಗಿ ಕಂಡು ಬರುವ ಅಡ್ಡಪರಿಣಾಮಗಳೆಂದರೆ
* ಜ್ವರ
* ಸುಸ್ತು
*ಲಸಿಕೆ ಚುಚ್ಚಿದ ಭಾಗದಲ್ಲಿ ನೋವು
* ಮೈಕೈ ನೋವು
* ಸಂಧಿಗಳಲ್ಲಿ ನೋವು
ಕೊನೆಯದಾಗಿ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಈ ಲಸಿಕೆ ತುಂಬಾನೇ ಪ್ರಯೋಜನಕಾರಿಯಾಗಿದೆ.



Click it and Unblock the Notifications
