Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಕೊರೊನಾ ಲಸಿಕೆ ಹಾಕಿಕೊಳ್ಳಿ ಎಂದು ಒತ್ತಾಯ ಮಾಡುವಂತಿಲ್ಲ: ಸುಪ್ರೀಂಕೋರ್ಟ್‌ನಿಂದ ಮಹತ್ತರದ ಆದೇಶ
ಕೊರೊನಾ ಲಸಿಕೆ ಹಾಕುವಂತೆ ಯಾರನ್ನೂ ಬಲವಂತ ಪಡಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ತರದ ಆದೇಶ ಹೊರಡಿಸಿದೆ. ಅಲ್ಲದೆ ಕೇಂದ್ರ ಸರ್ಕಾರಕ್ಕೆ ಕೊರೊನಾ ಲಸಿಕೆಯ ಅಡ್ಡಪರಿಣಾಮಗಳ ಬಗ್ಗೆ ವರದಿ ಪ್ರಕಟಿಸುವಂತೆ ಹೇಳಿದೆ.

ಸಮಸ್ತ ದೇಹವು ಕಾನೂನಿನ ಅಡಿಯಲ್ಲಿ ರಕ್ಷಿಸಲ್ಪಟ್ಟಿದೆ, ಯಾರೂ ಲಸಿಕೆ ಪಡೆಯುವಂತೆ ಒತ್ತಾಯಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ. ಆದರೆ ವೈಯಕ್ತಿಯ ಹಕ್ಕಿನಲ್ಲಿ ಕೆಲವೊಂದು ಇತಿಮಿತಿಗಳಿವೆ. ಸಮುದಾಯದ ಆರೋಗ್ಯದ ದೃಷ್ಟಿಯಿಂದ ಕೆಲವೊಂದು ನಿರ್ಬಂಧಗಳನ್ನು ವಿಧಿಸಬಹುದು ಎಂದು ಹೇಳಿದೆ.

ಕೊರೊನಾ ಲಸಿಕೆ ಹಾಕದವರಿಗೆ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಬಂಧ ಹಾಕಬಾರದು
ಒಂದು ವೇಳೆ ಕೊರೊನಾ ಕೇಸ್‌ಗಳು ಮಿತಿಯಲ್ಲಿದ್ದರೆ ಕೊರೊನಾ ನಿಯಮಗಳನ್ನು ಪಾಲಿಸಿರುವ ಕೊರೊನಾ ಲಸಿಕೆ ಹಾಕದೇ ಇರುವ ವ್ಯಕ್ತಿಗೆ ಸಾರ್ವಜನಿಕ ಸ್ಥಳಗಳಿಗೆ ಬರುವುದಕ್ಕೆ ನಿರ್ಬಂಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಕೊರೊನಾ ಲಸಿಕೆ ಹಾಕದೇ ಇರುವವರು ತಮ್ಮ ಕಾರ್ಯಗಳನ್ನು ನಿರ್ವಹಿಸಲು ಯಾವುದೇ ಅಡೆತಡೆಯಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ ಈ ತೀರ್ಪು ಕೋವಿಡ್ ನಿಯಮಗಳಿಗೆ ಅನ್ವಹಿಸುವುದಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮುಂತಾದ ಕೊರೊನಾ ನಿಯಮಗಳಿದ್ದರೆ ಅದನ್ನು ಪಾಲಿಸಬೇಕಾಗುತ್ತದೆ.

ಲಸಿಕೆ ಅಡ್ಡ ಪರಿಣಾಮದ ಬಗ್ಗೆ ಮಾಹಿತಿ ನೀಡಿ
ಲಸಿಕೆ ಕುರಿತು ನಡೆಸಿದ ಕ್ಲಿನಿಕಲ್ ಅಧ್ಯಯನ ವರದಿ, ಈ ಹಿಂದೆ ನಡೆದ ಪರೀಕ್ಷೆಗಳು, ಈಗ ನಡೆಸುತ್ತಿರುವ ಪರೀಕ್ಷೆಗಳು, ಲಸಿಕೆಯ ಅಡ್ಡಪರಿಣಾಗಳು ಎಲ್ಲದರ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಹೇಳಿದೆ.

ಮಕ್ಕಳಿಗೆ ನೀಡುವ ಲಸಿಕೆ ಜಾಗತಿಕ ಮಾನದಂಡ ಹೊಂದಿರಬೇಕು
ಮಕ್ಕಳಿಗೆ ಲಸಿಕೆ ನೀಡುವಾಗ ತಜ್ಞರಲ್ಲಿ ಎರಡನೇ ಅಭಿಪ್ರಾಯ ಇರಬಾರದು, ಲಸಿಕೆ ಜಾಗತಿಕ ಮಾನದಂಡವನ್ನು ಹೊಂದಿರಬೇಕು, ಇದರ ಅಡ್ಡಪರಿಣಾಮಗಳ ಕುರಿತು ಆದಷ್ಟು ಬೇಗ ಮಾಹಿತಿ ನೀಡುವಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.



Click it and Unblock the Notifications