Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
ಬೇಸಿಗೆಯಲ್ಲಿ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುವ ಹಣ್ಣುಗಳಿವು
ಅಧಿಕ ರಕ್ತದೊತ್ತಡವು ಬೇಸಿಗೆಯಲ್ಲಿ ಹೆಚ್ಚು ತೊಂದರೆ ನೀಡುವ ಸಮಸ್ಯೆಯಾಗಿದೆ. ಈ ಸಮಸ್ಯೆಯನ್ನು ಎದುರಿಸುತ್ತಿರುವ ಜನರಿಗೆ, ಬೇಸಿಗೆಯಲ್ಲಿ ಈ ಸಮಸ್ಯೆಯನ್ನು ನಿಯಂತ್ರಿಸುವುದು ತುಂಬಾ ಕಷ್ಟ. ಆದರೆ ನಿಯಮಿತ ಜೀವನಶೈಲಿ ಮತ್ತು ಆಹಾರದತ್ತ ಗಮನ ಹರಿಸುವುದರ ಮೂಲಕ ರೋಗವನ್ನು ದೊಡ್ಡ ಪ್ರಮಾಣದಲ್ಲಿ ನಿಯಂತ್ರಿಸಬಹುದು. ಇಂದು ನಾವು ಆ ಹಣ್ಣುಗಳ ಬಗ್ಗೆ ಹೇಳುತ್ತಿದ್ದೇವೆ, ಇದರ ಮೂಲಕ ಬೇಸಿಗೆಯಲ್ಲಿ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು.
ಬೇಸಿಗೆಯಲ್ಲಿ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುವ ಹಣ್ಣುಗಳ ಬಗ್ಗೆ ಈ ಕೆಳಗೆ ನೀಡಲಾಗಿದೆ:

ಕಲ್ಲಂಗಡಿ:
ಈ ಕಡಿಮೆ ಕ್ಯಾಲೋರಿ ಇರುವ ಹಣ್ಣಾಗಿದ್ದು, ಸಿಹಿ ಮತ್ತು ತಾಜಾವಾಗಿರುತ್ತದೆ. ಬೇಸಿಗೆಗೆ ಹೇಳಿ ಮಾಡಿಸಿದ ಹಣ್ಣು ಇದಾಗಿದ್ದು, ನೀವು ಇದನ್ನು ನಿಮ್ಮ ಹಣ್ಣಿನ ಸಲಾಡ್‌ನಲ್ಲಿ ಅಥವಾ ಆಹಾರದಲ್ಲಿ ರಸದ ರೂಪದಲ್ಲಿ ಸೇರಿಸಿಕೊಳ್ಳಬಹುದು. ಇದು ವಿಟಮಿನ್ ಸಿ ಮತ್ತು ಎ, ಪೊಟ್ಯಾಸಿಯಮ್, ಅಮೈನೋ ಆಮ್ಲಗಳು, ಲೈಕೋಪೀನ್, ಸೋಡಿಯಂ ಮತ್ತು ಆಂಟಿಆಕ್ಸಿಡೆಂಟ್‌ಗಳನ್ನು ತುಂಬಿದ್ದು ದೇಹವು ಅಧಿಕ ರಕ್ತದೊತ್ತಡದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಕಿವಿ ಹಣ್ಣು:
ಆಂಟಿಆಕ್ಸಿಡೆಂಟ್ಗಳು ಮತ್ತು ಖನಿಜಗಳು ಸಮೃದ್ಧವಾಗಿರುವ ಈ ಹಣ್ಣಿನಲ್ಲಿ ಫೈಬರ್, ವಿಟಮಿನ್ ಸಿ ಮತ್ತು ಫೋಲೇಟ್ ಇದ್ದು, ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಚರ್ಮದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ರಕ್ತದೊತ್ತಡದ ಕಾಯಿಲೆಗಳಾದ ಸ್ಟ್ರೋಕ್, ಹೃದಯಾಘಾತ ಇತ್ಯಾದಿಗಳನ್ನು ಕಿವಿ ಹಣ್ಣು ತಡೆಯಬಹುದು.

ಮಾವು:
ನಾವು ಮಾವನ್ನು ಇಷ್ಟಪಡುತ್ತೇವೆ ಏಕೆಂದರೆ ಅದು ರುಚಿಕರವಾಗಿರುತ್ತದೆ ಆದರೆ, ಅಧಿಕ ರಕ್ತದೊತ್ತಡಕ್ಕೆ ಮಾವು ಒಂದು ಉತ್ತಮ ಹಣ್ಣು. ಏಕೆಂದರೆ ಮಾವಿನಹಣ್ಣು ನಾರು ಮತ್ತು ಬೀಟಾ ಕ್ಯಾರೋಟಿನ್ ನ ಉತ್ತಮ ಮೂಲವಾಗಿದೆ, ಇವೆರಡೂ ರಕ್ತದೊತ್ತಡವನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿರುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ಮಾವಿನಹಣ್ಣನ್ನು ನಿಮ್ಮ ದಿನಚರಿಯಲ್ಲಿ ಸೇರಿಸಿ.

ಬಾಳೆಹಣ್ಣು:
ಪೊಟ್ಯಾಸಿಯಮ್ ಸಮೃದ್ಧವಾಗಿರುವ ಬಾಳೆಹಣ್ಣುನಲ್ಲಿ ಸೋಡಿಯಂ ಕೂಡ ಇದ್ದು, ಇದು ಕಡಿಮೆ ರಕ್ತದೊತ್ತಡ, ಹೃದ್ರೋಗಗಳು ಮತ್ತು ಪಾರ್ಶ್ವವಾಯು ಸಮಸ್ಯೆಯನ್ನು ತಡೆಯುತ್ತದೆ. ಬಾಳೆಹಣ್ಣು ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ, ಜನರು ಹೆಚ್ಚು ಸಮಯದವರೆಗೆ ಹೊಟ್ಟೆ ತುಂಬಿರಲು ಸಹಾಯ ಮಾಡುತ್ತದೆ. ಜೊತೆಗೆ ಅಧಿಕ ರಕ್ತದೊತ್ತಡದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಸ್ಟ್ರಾಬೆರಿ:
ಸ್ಟ್ರಾಬೆರಿಗಳಲ್ಲಿ ಆಂಥೋಸಯಾನಿನ್ (ಆಂಟಿ-ಆಕ್ಸಿಡೆಂಟ್ ಸಂಯುಕ್ತ), ವಿಟಮಿನ್ ಸಿ, ಪೊಟ್ಯಾಸಿಯಮ್ ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳಿವೆ, ಇದು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮಾತ್ರವಲ್ಲ ಬಿಸಿಲಿನ ಬೇಗೆಯನ್ನು ತಡೆಯಲು ಸಹ ಈ ಹಣ್ಣು ಸಹಾಯ ಮಾಡುತ್ತದೆ.



Click it and Unblock the Notifications
