Latest Updates
-
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ!
ಕೊರೊನಾದಿಂದ ಚೇತರಿಸಿದವರು 6 ತಿಂಗಳ ಬಳಿಕವಷ್ಟೇ ಲಸಿಕೆ ಪಡೆಯಬೇಕು, ಏಕೆ?
ಕೊರೊನಾ ಲಸಿಕೆ ಬಂದಾಗ ಲಸಿಕೆ ಹಾಕಿಕೊಳ್ಳಿ ಎಂದು ಸರ್ಕಾರ ಹೇಳಿದಾಗ ಹಿಂದೇಟು ಹಾಕಿದ್ದ ಜನರು ಇದೀಗ ಕೊರೊನಾ 2ನೇ ಅಲೆಯಲ್ಲಿ ಲಸಿಕೆಯ ಮಹತ್ವ ಅರಿತು ಲಸಿಕೆ ಪಡೆಯಲು ಮುಗಿ ಬೀಳುತ್ತಿದ್ದಾರೆ.
ಕೊರೊನಾ ಲಸಿಕೆ ಪಡೆದವರಿಗೆ ಕೊರೊನಾ ಸೋಂಕು ತಗುಲಿದರೂ ರೋಗ ಲಕ್ಷಣಗಳು ಗಂಭೀರವಾಗದೆ ಬೇಗನೆ ಚೇತರಿಸಿಕೊಳ್ಳುತ್ತಿರುವುದರಿಂದ ಜನರಿಗೆ ಲಸಿಕೆ ಮೇಲೆ ವಿಶ್ವಾಸ ಮೂಡಿ ಲಸಿಕೆ ಪಡೆಯಲು ಉತ್ಸಾಹ ತೋರಿಸುತ್ತಿದ್ದಾರೆ.
ಆದರೆ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರು 6 ತಿಂಗಳವರೆಗೆ ಕೊರೊನಾ ಲಸಿಕೆ ಪಡೆಯಬೇಡಿ ಎಂದು ತಜ್ಞರು ಸಲಹೆ ನೀಡಿದ್ದಾರೆ. ಇದರ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ:

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದರೆ 6 ತಿಂಗಳ ಬಳಿಕ ಲಸಿಕೆ ಪಡೆಯಬೇಕು, ಏಕೆ?
ಕೊರೊನಾ ಪಾಸಿಟಿವ್ ಬಂದ ಚೇರಿಸಿಕೊಂಡವರು 6 ತಿಂಗಳವರೆಗೆ ಲಸಿಕೆ ಪಡೆಯಬಾರದು ಎಂದು ತಜ್ಞರು ಸಲಹೆ ನೀಡಿದ್ದಾರೆ. ಒಮ್ಮೆ ಕೊರೊನಾ ಸೋಂಕಿಗೆ ಒಳಗಾಗಿ ಚೇತರಿಸಿದ ಬಳಿಕ 6 ತಿಂಗಳ ಒಳಗೆ ಲಸಿಕೆ ಪಡೆದರೆ ಆ ಲಸಿಕೆ ಹೆಚ್ಚು ಪರಿಣಾಮಕಾರಿಯಾಗಿರುವುದಿಲ್ಲ. ಅದೇ ಆರು ತಿಂಗಳ ಬಳಿಕ ಲಸಿಕೆ ಪಡೆದರೆ ಆ ಲಸಿಕೆ ತುಂಬಾ ಉತ್ತಮ ಪ್ರಭಾವ ಬೀರುವುದಾಗಿ ಸಂಶೋಧನೆಯಿಂದ ದೃಢಪಟ್ಟಿದೆ.

ಮೊದಲ ಡೋಸ್ ಪಡೆದ ಬಳಿಕ ಕೋವಿಡ್ 19 ಬಂದಿದ್ದರೆ
ಕೊರೊನಾ ಲಸಿಕೆ ಮೊದಲ ಡೋಸ್ ಪಡೆದ ಬಳಿಕ ಕೊರೊನಾ ಬಂದಿದ್ದರೆ ಅಂಥವರು ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕ 8 ವಾರಗಳ ಬಳಿಕ ಎರಡನೇ ಡೋಸ್ ಪಡೆಯಬಹುದಾಗಿದೆ.

ಕೋವಿಶೀಲ್ಡ್ ಮೊದಲನೇ ಹಾಗೂ 2ನೇ ಡೋಸ್ ನಡುವೆ ಅಂತರ ಹೆಚ್ಚಾಗಿದೆ
ಕೋವಿಶೀಲ್ಡ್ ಮೊದಲ ಡೋಸ್ ಪಡೆದ ಬಳಿಕ ಎರಡನೇ ಡೋಸ್ ಅಂತರವನ್ನು 12-16 ವಾರಕ್ಕೆ ಏರಿಸಬೇಕೆಂದೂ ಕೂಡ ಹೇಳಿದ್ದಾರೆ. ಈಗ ಕೋವಿಶೀಲ್ಡ್ ಲಸಿಕೆಯನ್ನು 4-8 ವಾರಗಳ ಅಂತರದಲ್ಲಿ ನೀಡಲಾಗುತ್ತಿತ್ತು. ಕೊವಾಕ್ಸಿನ್ ಡೋಸ್ ತೆಗೆದುಕೊಳ್ಳುವ ಅಂತರದಲ್ಲಿ ಯಾವುದೇ ವ್ಯತ್ಯಾಸವಿಲ್ಲ.

ಕಡಿಮೆ ಅಂತರಕ್ಕಿಂತ ಅದಕ್ಕೆ ಅಂತರವಿದ್ದರೆ ಲಸಿಕೆ ಹೆಚ್ಚು ಪರಿಣಾಮಕಾರಿಯಾಗುವುದು
ಕೋವಿಡ್ 19 ಲಸಿಕೆ ಮೊದಲ ಡೋಸ್ ಪಡೆದು 3 ತಿಂಗಳ ಬಳಿಕ ಎರಡನೇ ಡೋಸ್ ಪಡೆಯುವುದರಿಂದ ಕೊರೊನಾ ಲಸಿಕೆ ಹೆಚ್ಚು ಪ್ರಯೋಜಕಾರಿಯಾಗುವುದು ಎಂದು ಅಧ್ಯಯನದಿಂದ ತಿಳಿದು ಬಂದಿದೆ. ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚು ಸಮಯ ಉಳಿಯುತ್ತದೆ.

ಗರ್ಭೀಣಿಯರು ಲಸಿಕೆ ಪಡೆಯಬಹುದೇ?
NTAGI (The National Technical Advisory Group on Immunisation) ಗರ್ಭಿಣಿಯರು ಕೂಡ ಕೊರೊನಾ ಲಸಿಕೆ ಪಡೆಯಬಹುದೆಂದು ಸಲಹೆ ನೀಡಿದೆ. ಕೋವಿಶೀಲ್ಡ್ ಹಾಗೂ ಕೋವಾಕ್ಸಿನ್‌ನಲ್ಲಿ ಯಾವ ಲಸಿಕೆಯನ್ನಾದರೂ ಎರಡು ಡೋಸ್‌ನಂತೆ ತೆಗೆದುಕೊಳ್ಳಬಹುದಾಗಿದೆ. ಅಲ್ಲದೆ ಎದೆಹಾಲುಣಿಸುವ ತಾಯಂದಿರು ಕೂಡ ಲಸಿಕೆ ಪಡೆಯಬಹುದು ಎಂದು ಸೂಚಿಸಿದೆ.



Click it and Unblock the Notifications