For Quick Alerts
ALLOW NOTIFICATIONS  
For Daily Alerts

ಕಪ್ಪು ಎಳ್ಳಿನಲ್ಲಿದೆ ಆರೋಗ್ಯ ಬೆಳಗಿಸುವ ಶಕ್ತಿ!

|

ಎಳ್ಳು ಕಪ್ಪಾಗಿರಲಿ, ಬಿಳಿಯಾಗಿರಲಿ, ಎರಡೂ ಬಗೆಯ ಎಣ್ಣೆಗಳು ಆರೋಗ್ಯಕ್ಕೆ ತುಂಬಾ ಉಪಯುಕ್ತ. ಚಳಿಗಾಲದಲ್ಲಿ ಉತ್ತಮ ಆರೋಗ್ಯಕ್ಕೆ ಕಪ್ಪು ಎಳ್ಳಿನ ಸೇವನೆಯು ದುಪ್ಪಟ್ಟು ಪ್ರಯೋಜನಕಾರಿ. ಆಯುರ್ವೇದದ ಪ್ರಕಾರ, ಎಲ್ಲಾ ರೀತಿಯ ಎಳ್ಳಿಗಿಂತ ಕಪ್ಪು ಎಳ್ಳು ಹೆಚ್ಚಿನ ಪ್ರಯೋಜನಗಳನ್ನು ಹೊಂದಿದೆ. ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಕಪ್ಪು ಎಳ್ಳು ಬೆಚ್ಚಗಾಗಿಸುವ ಪರಿಣಾಮವನ್ನು ಹೊಂದಿದೆ. ಆದ್ದರಿಂದ ಇದು ಚಳಿಗಾಲಕ್ಕೆ ಉತ್ತಮ.

ಕಪ್ಪು ಎಳ್ಳು ಪ್ರೋಟೀನ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ತಾಮ್ರ, ಮ್ಯಾಂಗನೀಸ್, ಫೈಬರ್, ಕಾರ್ಬೋಹೈಡ್ರೇಟ್ಗಳು ಮತ್ತು ಆರೋಗ್ಯಕರ ಕೊಬ್ಬುಗಳಲ್ಲಿ ಸಮೃದ್ಧವಾಗಿದ್ದು, ಉತ್ತಮ ಆರೋಗ್ಯಕ್ಕೆ ಉಪಯುಕ್ತ. ಇದರ ಇತರ ಆರೋಗ್ಯಕಾರಿ ಪ್ರಯೋಜನಗಳೇನು ಎಂಬುದನ್ನು ತಿಳಿದುಕೊಳ್ಳೋಣ.

ಕಪ್ಪು ಎಳ್ಳಿನ ಪ್ರಯೋಜನಗಳು:

ಮಲಬದ್ಧತೆಯನ್ನು ನಿವಾರಿಸುವುದು :

ಮಲಬದ್ಧತೆಯನ್ನು ನಿವಾರಿಸುವುದು :

ಫೈಬರ್ ಮತ್ತು ಅಪರ್ಯಾಪ್ತ ಕೊಬ್ಬಿನಿಂದ ಸಮೃದ್ಧವಾಗಿರುವ ಕಪ್ಪು ಎಳ್ಳು ಮಲಬದ್ಧತೆಯನ್ನು ನಿವಾರಿಸುವಲ್ಲಿ ಬಹಳ ಪರಿಣಾಮಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ಹೊಟ್ಟೆಯ ಹುಳುಗಳು ಕಡಿಮೆಯಾಗುತ್ತದೆ ಮತ್ತು ಜೀರ್ಣಕ್ರಿಯೆಯು ಉತ್ತಮವಾಗಿರುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು :

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು :

ಕಪ್ಪು ಎಳ್ಳು ಆಂಟಿಆಕ್ಸಿಡೆಂಟ್‌ಗಳಲ್ಲಿ ಸಮೃದ್ಧವಾಗಿದ್ದು, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಉತ್ಕರ್ಷಣ ನಿರೋಧಕಗಳು ದೇಹದ ಜೀವಕೋಶಗಳನ್ನು ಹಾನಿಯಾಗದಂತೆ ರಕ್ಷಿಸುತ್ತವೆ. ಇದು ದೇಹವನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸುತ್ತದೆ. ಎಲ್ಲಾ ವಿಧದ ಎಳ್ಳು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸುವ ಸಾಮರ್ಥ್ಯವನ್ನು ಹೊಂದಿಲ್ಲದಿದ್ದರೂ, ಕಪ್ಪು ಎಳ್ಳು ಹೆಚ್ಚಿನ ಸಾಂದ್ರತೆಯನ್ನು ಹೊಂದಿರುತ್ತದೆ.

ಆರೋಗ್ಯಕರ ಕೂದಲು ಮತ್ತು ಚರ್ಮಕ್ಕಾಗಿ:

ಆರೋಗ್ಯಕರ ಕೂದಲು ಮತ್ತು ಚರ್ಮಕ್ಕಾಗಿ:

ಕಪ್ಪು ಎಳ್ಳು ಹಾನಿಕಾರಕ ನೇರಳಾತೀತ ಕಿರಣಗಳ ದುಷ್ಪರಿಣಾಮಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಹೊಂದಿದೆ. ಗಾಯದ ನಂತರ ಕಪ್ಪು ಎಳ್ಳಿನ ಎಣ್ಣೆಯಿಂದ ಮಸಾಜ್ ಮಾಡುವುದರಿಂದ ನೋವಿನಿಂದ ಪರಿಹಾರವನ್ನು ಪಡೆಯಬಹುದು. ಜೊತೆಗೆ ಕಪ್ಪು ಎಳ್ಳು ಕೂದಲು ಮತ್ತು ತ್ವಚೆಯನ್ನು ಆರೋಗ್ಯವಾಗಿರಿಸುತ್ತದೆ.

ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವುದು:

ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವುದು:

ಪ್ರತಿದಿನ 3.5 ಗ್ರಾಂ ಕಪ್ಪು ಎಳ್ಳನ್ನು ಸೇವಿಸುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ರಕ್ತದೊತ್ತಡವನ್ನು ಸುಧಾರಿಸುವಲ್ಲಿ ಕಪ್ಪು ಎಳ್ಳು ಪ್ರಮುಖ ಪಾತ್ರವನ್ನು ಹೊಂದಿದೆ ಎಂದು ಅನೇಕ ಸಂಶೋಧನೆಗಳಲ್ಲಿ ಬಹಿರಂಗವಾಗಿದೆ. ಎಳ್ಳಿನಲ್ಲಿರುವ ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನೀಸಿಯಮ್, ಸತು ಮತ್ತು ಸೆಲೆನಿಯಮ್ ಹೃದಯವನ್ನು ಅನೇಕ ರೋಗಗಳ ಅಪಾಯದಿಂದ ರಕ್ಷಿಸಲು ಸಹಾಯ ಮಾಡುತ್ತದೆ.

ಮೂಳೆಗಳನ್ನು ಬಲಪಡಿಸುವುದು:

ಮೂಳೆಗಳನ್ನು ಬಲಪಡಿಸುವುದು:

ಎಳ್ಳಿನಲ್ಲಿ ಕ್ಯಾಲ್ಸಿಯಂ, ಆಹಾರದ ಪ್ರೋಟೀನ್ ಮತ್ತು ಅಮೈನೋ ಆಮ್ಲಗಳಿವೆ, ಇದು ಮೂಳೆಗಳನ್ನು ಬಲಪಡಿಸುತ್ತದೆ ಮತ್ತು ಸ್ನಾಯುಗಳನ್ನು ಬಲಪಡಿಸುತ್ತದೆ.

English summary

Health and Nutrition Benefits of Black Sesame in Kannada

Here we talking about Health and Nutrition Benefits of Black Sesame in Kannada, read on
Story first published: Tuesday, November 9, 2021, 17:38 [IST]
X
Desktop Bottom Promotion