Latest Updates
-
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ!
Health tips: ಹೃದಯ, ಕಣ್ಣಿನ ಆರೋಗ್ಯಕ್ಕೆ ಪವರ್‌ಫುಲ್ ಮದ್ದು ಪೀಚ್ ಹಣ್ಣು
ನಮ್ಮ ಆರೋಗ್ಯ ಹಿತದೃಷ್ಟಿಯಿಂದ ನಿತ್ಯ ವಿಭಿನ್ನ ರೀತಿಯ ಹಣ್ಣುಗಳನ್ನು ಸೇವಿಸಬೇಕು ಎಂಬುದು ವೈದ್ಯರ ಸಲಹೆ. ಅದರಂತೆ ನಾವು ಸಹ ನಿತ್ಯ ಎಲ್ಲ ರೀತಿಯ ಹಣ್ಣುಗಳನ್ನು ನಿತ್ಯ ಸೇವಿಸಲು ಬಯಸುತ್ತೇವೆ. ಇಂದಿನಿಂದ ನಿಮ್ಮ್ ಹಣ್ಣುಗಳ ಪಟ್ಟಿಯಲ್ಲಿ ಆದ್ಯತೆಯ ಆಹಾರವಾಗಿ ಪೀಚ್ ಹಣ್ಣನ್ನು ಸೇರಿಸಿಕೊಳ್ಳಿ.

ವಿಟಮಿನ್ ಸಿ ಹೇರಳವಾಗಿರುವ ಪೀಚ್ ಹಣ್ಣಿನ ಸೇವನೆಯಿಂದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ, ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ, ಹೃದಯದ ಆರೋಗ್ಯವನ್ನು ಉತ್ತಮವಾಗಿಸುತ್ತದೆ ಅಷ್ಟೇ ಅಲ್ಲದೆ ಕಣ್ಣಿನ ದೃಷ್ಟಿಯನ್ನು ಸಹ ಸುಧಾರಿಸುತ್ತದೆ.
ಇಷ್ಟೆಲ್ಲಾ ಪ್ರಯೋಜನ ಇರುವ ಪೀಚ್ ಹಣ್ಣನ್ನು ತಪ್ಪಿಸಲು ಸಾಧ್ಯವೇ?. ಇಲ್ಲ, ಪೀಚ್ ಹಣ್ಣು ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳನ್ನು ಹೇಗೆ ನೀಡುತ್ತದೆ ಮುಂದೆ ನೋಡೋಣ:

ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ
ವಿಟಮಿನ್ ಸಿ ಪೀಚ್ ನಲ್ಲಿ ಹೇರಳವಾಗಿ ಕಂಡುಬರುತ್ತದೆ. ಈ ಅಗತ್ಯ ಪೋಷಕಾಂಶವು ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಉತ್ಕರ್ಷಣ ನಿರೋಧಕಗಳನ್ನು ಹೊಂದಿರುವ ಆಹಾರವನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ನೀವು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಬಯಸಿದರೆ ಪೀಚ್ ಅನ್ನು ಸೇವಿಸಬಹುದು.

ಹೃದಯದ ಆರೋಗ್ಯಕ್ಕೆ
ಆರೋಗ್ಯ ತಜ್ಞರ ಪ್ರಕಾರ, ಅಧಿಕ ರಕ್ತದೊತ್ತಡವು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ. ಹೃದ್ರೋಗಕ್ಕೆ ಹಲವು ಕಾರಣಗಳಿವೆ ಕೆಟ್ಟ ಕೊಲೆಸ್ಟ್ರಾಲ್ ಕೂಡ ಒಂದು ಕಾರಣ. ಕೆಟ್ಟ ಕೊಲೆಸ್ಟ್ರಾಲ್ ನಿಂದ ಪಾರ್ಶ್ವವಾಯು ಬರುವ ಅಪಾಯವೂ ಇದೆ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು, ನೀವು ಪ್ರತಿದಿನ ಪೀಚ್ ಅನ್ನು ಸೇವಿಸಬಹುದು. ಇದರ ಬಳಕೆಯಿಂದ ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿರುತ್ತದೆ. ಹಾಗೆಯೇ ಹೃದಯವೂ ಆರೋಗ್ಯವಾಗಿರುತ್ತದೆ.

ಅಧಿಕ ರಕ್ತದೊತ್ತಡ ನಿಯಂತ್ರಣದಲ್ಲಿಡುತ್ತದೆ
ಪೀಚ್ ಹಣ್ಣಿನಲ್ಲಿ ಪೊಟ್ಯಾಶಿಯಂ ಕಂಡುಬರುತ್ತದೆ. ಪೊಟ್ಯಾಸಿಯಮ್ ದೇಹದಲ್ಲಿ ಇರುವ ಸೋಡಿಯಂ ಅನ್ನು ಸಮತೋಲನಗೊಳಿಸುತ್ತದೆ. ದೇಹದಲ್ಲಿ ಸೋಡಿಯಂ ಅಧಿಕವಾಗಿರುವುದರಿಂದ ಅಧಿಕ ರಕ್ತದೊತ್ತಡದ ಸಮಸ್ಯೆ ಹಾಗೂ ಅತಿಯಾದ ಒತ್ತಡದಿಂದಾಗಿ ಅಧಿಕ ರಕ್ತದೊತ್ತಡದ ಸಮಸ್ಯೆಯೂ ಬರಬಹುದು. ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ನೀವು ದೀರ್ಘಕಾಲದವರೆಗೆ ತೊಂದರೆಗೊಳಗಾಗಿದ್ದರೆ, ಖಂಡಿತವಾಗಿಯೂ ಪೀಚ್ ಅನ್ನು ನಿಮ್ಮ ಆಹಾರದಲ್ಲಿ ಸೇರಿಸಿ. ಪೀಚ್ ಸೇವನೆಯಿಂದ ಅಧಿಕ ಬಿಪಿ ನಿಯಂತ್ರಣದಲ್ಲಿಡುತ್ತದೆ.

ದೃಷ್ಟಿ ಉತ್ತಮವಾಗಿಸುತ್ತದೆ
ಪೀಚ್‌ನಲ್ಲಿ ಬೀಟಾ ಕ್ಯಾರೋಟಿನ್ ಅಂಶ ಕಂಡುಬರುತ್ತದೆ. ಬೀಟಾ ಕ್ಯಾರೋಟಿನ್ ಕಣ್ಣುಗಳಿಗೆ ಮುಖ್ಯವೆಂದು ಪರಿಗಣಿಸಲಾಗುತ್ತದೆ. ವಿಟಮಿನ್ ಎ ಯುಕ್ತ ಆಹಾರ ಸೇವಿಸುವುದರಿಂದ ದೃಷ್ಟಿ ಹೆಚ್ಚಾಗುತ್ತದೆ. ಅಲ್ಲದೆ, ವಿಟಮಿನ್ ಎ ರೆಟಿನಾವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.



Click it and Unblock the Notifications