Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಬಾದಾಮಿಯಷ್ಟೇ ಅಲ್ಲ, ಈ 5 ಪದಾರ್ಥಗಳನ್ನು ನೆನೆಸಿ ತಿಂದರೆ, ರಕ್ತಹೀನತೆಯಂತಹ ಸಮಸ್ಯೆಗಳನ್ನು ನಿವಾರಿಸಬಹುದು
ದೇಹವನ್ನು ಆರೋಗ್ಯಕರ ಮತ್ತು ಶಕ್ತಿಯುತವಾಗಿಡಲು ಆಹಾರದಲ್ಲಿ ಆರೋಗ್ಯಕರ ವಸ್ತುಗಳನ್ನು ಸೇರಿಸುವುದು ಬಹಳ ಮುಖ್ಯ. ಇದರಲ್ಲಿ ಒಂದು ನೆನೆಸಿದ ಕಾಳುಗಳ ಸೇವನೆ. ನೆನೆಸಿದ ಆಹಾರದ ವಿಷಯಕ್ಕೆ ಬಂದರೆ, ನೆನೆಸಿದ ಬಾದಾಮಿ ಮಾತ್ರವೇ ತಲೆಗೆ ಬರುವುದು. ಆದರೆ ಬಾದಾಮಿಯನ್ನು ಹೊರತುಪಡಿಸಿ ಹಲವು ವಸ್ತುಗಳು ಇವೆ ಎಂದು ನಿಮಗೆ ತಿಳಿದಿದೆಯೇ?. ಹೌದು, ಈ ಪದಾರ್ಥಗಳು. ದೇಹದ ಉತ್ತಮ ಕಾರ್ಯನಿರ್ವಹಣೆಗೆ ಅವಶ್ಯಕವಾಗಿದ್ದು, ರಕ್ತಹೀನತೆ, ಆಯಾಸ, ದೌರ್ಬಲ್ಯ ಮತ್ತು ಮೂಳೆಗಳಲ್ಲಿನ ದೌರ್ಬಲ್ಯದಂತಹ ಸಮಸ್ಯೆಗಳಿಂದ ಮುಕ್ತಿ ನೀಡುವುದು. ಹಾಗಾದರೆ ಆ ಪದಾರ್ಥಗಳಾವುವು ನೋಡೋಣ.
ಉತ್ತಮ ಆರೋಗ್ಯಕ್ಕೆ ಯಾವ ಪದಾರ್ಥವನ್ನು ನೆನೆಸಿ ಸೇವಿಸಬೇಕು ಎಂಬುದನ್ನು ಈ ಕೆಳಗೆ ನೀಡಲಾಗಿದೆ:

ಮೆಂತ್ಯೆ ಕಾಳು:
ಮೆಂತ್ಯೆ ಬೀಜಗಳಲ್ಲಿ ಫೈಬರ್ ಸಮೃದ್ಧವಾಗಿದ್ದು, ಇದು ಕರುಳನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಜೊತೆಗೆ ಮಲಬದ್ಧತೆಗೆ ಚಿಕಿತ್ಸೆ ನೀಡಲು ಇದು ಉತ್ತಮ ಪರಿಹಾರವಾಗಿದೆ. ಒಂದು ಚಮಚ ಮೆಂತ್ಯೆಯನ್ನು ನೀರಿನಲ್ಲಿ ಹಾಕಿ ಮತ್ತು ಬೆಳಿಗ್ಗೆ ಅದನ್ನು ಸೇವಿಸಿ. ಈ ಮನೆಮದ್ದನ್ನು ನಿಯಮಿತವಾಗಿ ಸೇವಿಸುವುದರಿಂದ ನಿಮ್ಮ ಜೀರ್ಣಕಾರಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದು ಮಧುಮೇಹ ರೋಗಿಗಳಿಗೆ ಉತ್ತಮವಾಗಿದ್ದು, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಮುಟ್ಟಿನ ಹೊಟ್ಟೆ ನೋವನ್ನು ಬಹಳ ಮಟ್ಟಿಗೆ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಗಸಗಸೆ:
ಗಸಗಸೆ ಬೀಜಗಳು ಫೋಲೇಟ್, ಥಯಾಮಿನ್ ಮತ್ತು ಪ್ಯಾಂಟೊಥೆನಿಕ್ ಆಮ್ಲದ ಅತ್ಯುತ್ತಮ ಮೂಲಗಳಲ್ಲಿ ಒಂದಾಗಿದೆ. ಗಸಗಸೆಯಲ್ಲಿರುವ ವಿಟಮಿನ್ ಬಿ ಚಯಾಪಚಯವನ್ನು ಹೆಚ್ಚಿಸಿ, ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದನ್ನು ಫ್ಯಾಟ್ ಕಟ್ಟರ್ ಎಂದು ಕರೆಯಲಾಗುತ್ತದೆ. ಆದ್ದರಿಂದ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಉತ್ತಮ ಆಯ್ಕೆಯಾಗಿದೆ. ಇದನ್ನು ನೆನೆಸಿ ತಿಂದರೆ ದೇಹದಲ್ಲಿ ಸಂಗ್ರಹವಾದ ಕೊಬ್ಬನ್ನು ಕಡಿಮೆ ಮಾಡಬಹುದು.

ಅಗಸೆ ಬೀಜ:
ಅಗಸೆ ಬೀಜಗಳು ಒಮೆಗಾ -3 ಕೊಬ್ಬಿನಾಮ್ಲಗಳ ಮೂಲವಾಗಿದೆ. ನೆನೆಸಿದ ಅಗಸೆ ಬೀಜಗಳನ್ನು ಸೇವಿಸುವುದು ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಪ್ರಯೋಜನಕಾರಿಯಾಗಿದೆ ಏಕೆಂದರೆ ಇದು ದೇಹದಲ್ಲಿ ಒಳ್ಳೆಯ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಜೊತೆಗೆ ಇದರಲ್ಲಿ ಆಹಾರದ ಫೈಬರ್‌ನಲ್ಲಿ ಸಮೃದ್ಧವಾಗಿದ್ದು, ಇದು ಜೀರ್ಣಾಂಗ ವ್ಯವಸ್ಥೆಯನ್ನು ಸ್ವಚ್ಛವಾಗಿ ಮತ್ತು ಆರೋಗ್ಯಕರವಾಗಿರಿಸುತ್ತದೆ. ಬೆಳಿಗ್ಗೆ ಇದನ್ನು ಸೇವಿಸುವುದರಿಂದ ನಿಮ್ಮ ಹೊಟ್ಟೆಯನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

ಒಣದ್ರಾಕ್ಷಿ:
ಒಣದ್ರಾಕ್ಷಿಗಳು ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಕಬ್ಬಿಣದಂತಹ ಅಗತ್ಯವಾದ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಆದರೆ ನೆನೆಸಿದ ಒಣದ್ರಾಕ್ಷಿಗಳನ್ನು ನಿಯಮಿತವಾಗಿ ತಿನ್ನುವುದು ದೇಹದಲ್ಲಿ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ಇದು ಚರ್ಮವನ್ನು ಆರೋಗ್ಯಕರವಾಗಿ ಮತ್ತು ನಿಷ್ಕಳಂಕವಾಗಿಡುತ್ತದೆ. ನೀವು ರಕ್ತಹೀನತೆ ಮತ್ತು ಮೂತ್ರಪಿಂಡದ ಕಲ್ಲುಗಳಂತಹ ಸಮಸ್ಯೆಗಳಿಂದ ಬಳಲುತ್ತಿದ್ದರೆ, ನೆನೆಸಿದ ಒಣದ್ರಾಕ್ಷಿ ತಿನ್ನುವುದರಿಂದಈ ಸಮಸ್ಯೆಗಳಿಂದ ಮುಕ್ತರಾಗುತ್ತೀರಿ. ಅಲ್ಲದೆ, ಒಣದ್ರಾಕ್ಷಿಯನ್ನು ರಾತ್ರಿಯಿಡೀ ಸೋಂಪಿನ ಜೊತೆ ನೆನೆಸಿಡುವುದರಿಂದ ಅಸಿಡಿಟಿ ದೂರವಾಗುತ್ತದೆ.

ಹೆಸರು ಕಾಳು:
ಹೆಸರು ಕಾಳು ಪ್ರೋಟೀನ್, ಫೈಬರ್ ಮತ್ತು ಬಿ ವಿಟಮಿನ್‌ಗಳ ಉಗ್ರಾಣವಾಗಿದ್ದು, ಇದು ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಅಲ್ಲದೆ, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಸಮೃದ್ಧವಾಗಿದೆ, ಇದು ಅಧಿಕ ರಕ್ತದೊತ್ತಡ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. ಅಷ್ಟೇ ಅಲ್ಲ, ಇದು ಆಂಟಿಆಕ್ಸಿಡೆಂಟ್‌ಗಳಲ್ಲಿ ಅಧಿಕವಾಗಿದ್ದು, ಮಧುಮೇಹ, ಕ್ಯಾನ್ಸರ್ ಸೇರಿದಂತೆ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.



Click it and Unblock the Notifications










