Latest Updates
-
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ? -
ಬೇಕರಿ ಸ್ಟೈಲ್ ಕಚೋರಿ ರೆಸಿಪಿ.. ಮನೆಯಲ್ಲೇ ಈ 4 ಟೇಸ್ಟಿ ಕಚೋರಿ ಮಾಡಿ! ಹೊಸಬರಿಗೆ ಕೂಡ ಸುಲಭ -
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ! ಪ್ರಣಯ ಜೀವನವು ಸುಖಮಯ -
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ! -
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ!
ತ್ವರಿತವಾಗಿ ಬೊಜ್ಜು ಕಡಿಮೆಯಾಗಲು, ಜೇನುತುಪ್ಪದಲ್ಲಿ ಈ 3 ವಸ್ತುಗಳನ್ನು ಬೆರೆಸಿ ಸೇವಿಸಿ
ತೂಕವನ್ನು ಕಳೆದುಕೊಳ್ಳುವುದು ಸುಲಭದ ಕೆಲಸವಲ್ಲ. ಇದಕ್ಕಾಗಿ ಜಿಮ್‌ನಲ್ಲಿ ಕಠಿಣ ಪರಿಶ್ರಮ ಪಡಬೇಕು, ಆರೋಗ್ಯಕರ ಆಹಾರ ತೆಗೆದುಕೊಳ್ಳಬೇಕು. ಈ ಎರಡಕ್ಕೂ ಸಮಯವಿಲ್ಲದಿದ್ದರೆ, ಈ ಟ್ರಿಕ್ ಮೂಲಕ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಹೌದು, ದಿನನಿತ್ಯ ಜೇನುತುಪ್ಪವನ್ನು ಬಳಸುವುದರ ಮೂಲಕ, ಯಾವುದೇ ಅಡ್ಡಪರಿಣಾಮಗಳಿಲ್ಲದೇ, ದೇಹದ ತೂಕವನ್ನು ಕಡಿಮೆ ಮಾಡಬಹುದು. ಜೊತೆಗೆ ಜೇನುತುಪ್ಪ ಆರೋಗ್ಯಕ್ಕೂ ಒಳ್ಳೆಯದು.
ಜೇನುತುಪ್ಪವು ಅದರ ರುಚಿ, ಔಷಧೀಯ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತದ ಗುಣಲಕ್ಷಣಗಳ ಹೊರತಾಗಿ ಫಿಟ್‌ನೆಸ್ ಕಾಪಾಡಿಕೊಳ್ಳಲು ಸಹಕಾರಿ. ಅದಕ್ಕಾಗಿಯೇ ಜೇನುತುಪ್ಪವನ್ನು ತೂಕ ಕಳೆದುಕೊಳ್ಳುವ ನೈಸರ್ಗಿಕ ವಿಧಾನ ಎನ್ನುವುದು. ಇದರಲ್ಲಿ ಫ್ರಕ್ಟೋಸ್ ಕಂಡುಬರಲಿದ್ದು, ಇದು ಕೊಬ್ಬನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಯಕೃತ್ತಿಗೆ ಗ್ಲೂಕೋಸ್ ಮಾಡಲು ಇಂಧನವಾಗಿ ಕಾರ್ಯನಿರ್ವಹಿಸುತ್ತದೆ. ಈ ಗ್ಲುಕೋಸ್ ಮೆದುಳಿನಲ್ಲಿ ಸಕ್ಕರೆಯ ಮಟ್ಟವನ್ನು ನಿರ್ವಹಿಸಿ, ಕೊಬ್ಬನ್ನು ಸುಡುವ ಹಾರ್ಮೋನುಗಳನ್ನು ಬಿಡುಗಡೆ ಮಾಡಲು ಪ್ರೋತ್ಸಾಹಿಸುವುದು.
ತೂಕ ಕಳೆದುಕೊಳ್ಳಲು ಜೇನುತುಪ್ಪವನ್ನು ಹೇಗೆ ಬಳಸಬೇಕು ಎಂಬುದನ್ನು ಈ ಕೆಳಗೆ ನೀಡಲಾಗಿದೆ:

ಆಹಾರದಲ್ಲಿ ಜೇನುತುಪ್ಪ ಬಳಸಿ:
ಹೆಚ್ಚಿನ ಜನರು ಚಹಾ ಅಥವಾ ಕಾಫಿಗೆ ಸಕ್ಕರೆ ಹಾಕಿ ಕುಡಿಯುತ್ತಾರೆ. ಇದು ಕ್ರಮೇಣ ನಿಮ್ಮ ಆರೋಗ್ಯಕ್ಕೆ ಗಂಭೀರ ಹಾನಿಯನ್ನು ಉಂಟುಮಾಡಬಹುದು. ಜೇನುತುಪ್ಪವು ಸಕ್ಕರೆಯನ್ನು ಹೊಂದಿರುತ್ತದೆ, ಆದರೆ ಸಂಸ್ಕರಿಸಿದ ಸಕ್ಕರೆಗೆ ಹೋಲಿಸಿದರೆ ಜೇನುತುಪ್ಪವು ಪ್ರಯೋಜನಕಾರಿ ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತದೆ. ಇದು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಉತ್ತಮ ಆಯ್ಕೆಯಾಗಿದೆ. ನೀವು ವೇಗವಾಗಿ ತೂಕ ಇಳಿಸಿಕೊಳ್ಳಲು ಬಯಸಿದರೆ, ಸಕ್ಕರೆಯ ಬದಲಿಗೆ ಜೇನುತುಪ್ಪವನ್ನು ಬಳಸಬೇಕು. ಮಲಗುವ ಮುನ್ನ ಒಂದು ಚಮಚ ಜೇನುತುಪ್ಪವನ್ನು ಸೇವಿಸುವುದು ತೂಕವನ್ನು ಕಳೆದುಕೊಳ್ಳಲು ಪರಿಣಾಮಕಾರಿ ಮಾರ್ಗವಾಗಿದೆ. ಇದನ್ನು ಮಾಡುವುದರಿಂದ ನಿಮ್ಮ ನಿದ್ರೆಯ ಆರಂಭಿಕ ಗಂಟೆಗಳಲ್ಲಿ ದೇಹವು ಹೆಚ್ಚು ಕೊಬ್ಬನ್ನು ಸುಡಲು ಸಹಾಯ ಮಾಡುತ್ತದೆ.

ಜೇನುತುಪ್ಪ ಮತ್ತು ದಾಲ್ಚಿನ್ನಿ:
ದಾಲ್ಚಿನ್ನಿ ಕೇವಲ ಆಹಾರಕ್ಕೆ ರುಚಿಯನ್ನು ನೀಡುವುದಲ್ಲದೇ, ಆರೋಗ್ಯಕ್ಕೂ ಬಹಳ ಪ್ರಯೋಜನಕಾರಿ. ತೂಕ ನಷ್ಟಕ್ಕೆ ದಾಲ್ಚಿನ್ನಿ ಮತ್ತು ಜೇನುತುಪ್ಪವನ್ನು ಬಳಸುವುದು ಉತ್ತಮ ಮಾರ್ಗವಾಗಿದೆ. ಇದನ್ನು ಮಾಡಲು, ನೀವು ಪ್ರತಿದಿನ ಸೇವಿಸುವ ಗ್ರೀನ್ ಟೀಗೆ ಅರ್ಧ ಟೀಚಮಚ ದಾಲ್ಚಿನ್ನಿ ಮತ್ತು ಒಂದು ಚಮಚ ಜೇನುತುಪ್ಪವನ್ನು ಬೆರೆಸಬಹುದು. ಈ ಮಿಶ್ರಣದಿಂದ, ನಿಮ್ಮ ಚಯಾಪಚಯ ಶಕ್ತಿ ಹೆಚ್ಚಾಗುವುದು ಜೊತೆಗೆ ಪೂರ್ಣ ಶಕ್ತಿಯನ್ನು ಪಡೆಯುತ್ತೀರಿ.

ಜೇನುತುಪ್ಪ ಮತ್ತು ನಿಂಬೆ:
ಈ ಮಿಶ್ರಣವನ್ನು ತೂಕ ನಷ್ಟಕ್ಕೆ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಅರ್ಧ ಟೀಚಮಚ ಜೇನುತುಪ್ಪ ಮತ್ತು ಅರ್ಧ ನಿಂಬೆಹಣ್ಣಿನ ರಸವನ್ನು ಬೆರೆಸಿ ಪ್ರತಿದಿನ ಬೆಳಿಗ್ಗೆ ಅರ್ಧ ಗ್ಲಾಸ್ ಬೆಚ್ಚಗಿನ ನೀರಿಗೆ ಹಾಕಿ ಕುಡಿಯಬಹುದು. ಇದು ದೇಹವನ್ನು ನಿರ್ವಿಷಗೊಳಿಸಲು ಮತ್ತು ಅಂಗಗಳನ್ನು ಸಕ್ರಿಯಗೊಳಿಸಲು ಸಹಾಯ ಮಾಡುತ್ತದೆ. ಇದರಿಂದ ಉಬ್ಬುವಿಕೆ ಕಡಿಮೆಯಾಗುವುದು ಜೊತೆಗೆ ದಿನವಿಡೀ, ಹೆಚ್ಚು ಚೈತನ್ಯವನ್ನು ಅನುಭವಿಸುವಿರಿ. ಅಷ್ಟೇ ಅಲ್ಲ, ಉತ್ತಮ ಚಯಾಚಪಚಯಕ್ಕೂ ಸಹಕಾರಿ.

ಜೇನುತುಪ್ಪ ಮತ್ತು ಬೆಳ್ಳುಳ್ಳಿ:
ತೂಕ ನಷ್ಟಕ್ಕೆ ಬೆಳ್ಳುಳ್ಳಿ ಮತ್ತು ಜೇನುತುಪ್ಪದ ಮಿಶ್ರಣವು ನಿಮ್ಮ ದೇಹವನ್ನು ಆರೋಗ್ಯಕರವಾಗಿ ಮತ್ತು ಫಿಟ್ ಆಗಿ ಇರಿಸಿಕೊಳ್ಳಲು ಉತ್ತಮ ಮಾರ್ಗವಾಗಿದೆ. ಬೆಳಿಗ್ಗೆ ಒಂದು ಚಮಚ ಜೇನುತುಪ್ಪದೊಂದಿಗೆ ಹಸಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ನಿರ್ವಿಶೀಕರಣ ಮತ್ತು ಜೀರ್ಣಕ್ರಿಯೆ ಸುಧಾರಿಸುತ್ತದೆ. ಈ ಮಿಶ್ರಣವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ಒತ್ತಡವನ್ನು ಕಡಿಮೆ ಮಾಡಲು, ಅಧಿಕ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.



Click it and Unblock the Notifications











