Latest Updates
-
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ!
ಮಹಿಳೆಯರೇ ಗುಡ್ ನ್ಯೂಸ್: ನಿಮ್ಮ ಆರೋಗ್ಯ ರಕ್ಷಣೆಗಾಗಿಯೇ ಬರಲಿದೆ 128 ಕ್ಲಿನಿಕ್‌ಗಳು
ಮಹಿಳೆಯರಿಗೆ ಇದೀಗ ದೇಶದ ಎಲ್ಲಡೆ ಮಾನ್ಯತೆ ಸಿಗುತ್ತದೆ. ಎಲ್ಲಾ ವಿಭಾಗದಲ್ಲೂ ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಕ್ಷೇತ್ರದಲ್ಲಿ ಮಹಿಳೆಯರು ಸಾಧನೆ ಮಾಡುತ್ತಿದ್ದಾರೆ. ಹೀಗೆ ಮನೆ ಹಾಗೂ ಕಚೇರಿ ಕೆಲಸವನ್ನು ನಿರ್ವಹಿಸುವ ಮಹಿಳೆಯರು ಹಲವು ಅನಾರೋಗ್ಯಗಳಿಗೆ ತುತ್ತಾಗುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರ ಆರೋಗ್ಯಕ್ಕೆ ಆದ್ಯತೆ ನೀಡಲು ಕರ್ನಾಟಕ ಸರ್ಕಾರ ಮುಂದಾಗಿದೆ.

ಹೌದು, ಮಹಿಳೆಯರ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯದಲ್ಲಿ ಮಹಿಳಾ ಕ್ಲಿನಿಕ್ ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಒಟ್ಟು 128 ಮಹಿಳಾ ಕ್ಲಿನಿಕ್‌ಗಳನ್ನು ಪ್ರಾರಂಭಿಸಲು ರಾಜ್ಯ ಆರೋಗ್ಯ ಇಲಾಖೆ ಯೋಜಿಸುತ್ತಿದ್ದು ಆಗಸ್ಟ್ ನಲ್ಲಿ ಈ ಯೋಜನೆ ಆರಂಭವಾಗುವ ಸಾಧ್ಯತೆ ಇದೆ. ನಗರದಲ್ಲಿ ವಾಸವಿರುವ ಮಹಿಳೆಯರಿಗೆ ಇದರಿಂದ ಸಹಾಯವಾಗಲಿದೆ.
ಈ ಪೈಕಿ ಬಿಬಿಎಂಪಿ ವ್ಯಾಪ್ತಿಯಲ್ಲಿ 57 ಕ್ಲಿನಿಕ್‌ಗಳು ಸ್ಥಾಪನೆಗೊಂಡರೆ, ಉಳಿದವು ರಾಜ್ಯಾದ್ಯಂತ ಇತರ ನಗರಗಳಲ್ಲಿ ನೆಲೆಗೊಳ್ಳಲಿವೆ ಎಂದು ರಾಷ್ಟ್ರೀಯ ಆರೋಗ್ಯ ಮಿಷನ್‌ನ ನಿರ್ದೇಶಕಿ ಡಾ.ಅರುಂದತಿ ಚಂದ್ರಶೇಖರ್ ತಿಳಿಸಿದ್ದಾರೆ. ಇದೇ ಮೊದಲ ಬಾರಿಗೆ ಇಂತಹ ಮಹಿಳಾ ಸ್ನೇಹಿ ಯೋಜನೆಯೊಂದು ಕರ್ನಾಟಕದಲ್ಲಿ ಜಾರಿಗೊಳ್ಳುತ್ತಿದ್ದು ದೇಶಕ್ಕೆ ಮಾದರಿಯಾಗಲಿದೆ ಎಂದು ಅರುಂದತಿ ತಿಳಿಸಿದ್ದಾರೆ. ಇನ್ನು ಈ ಮಹಿಳಾ ಕ್ಲಿನಿಕ್ ಗಳು ನಗರ ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿ ಆರಂಭಿಸಲಾಗುತ್ತಿದ್ದು, ಇದಕ್ಕಾಗಿ ವಿಶೇಷ ಕೊಠಡಿಗಳು ಇರಲಿವೆ.
ಅಲ್ಲದೇ ಮಹಿಳೆಯರನ್ನು ಪರೀಕ್ಷಿಸಲು ಪ್ರತ್ಯೇಕ ಕೊಠಡಿಗಳು ಸೇರಿ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತದೆ. ಈ ಕ್ಲಿನಿಕ್ ನಲ್ಲಿ ಮಹಿಳೆಯರಿಗೆ ಸಂಬಂಧಿಸಿದ ಸಮಸ್ಯೆಗಳು, ಸ್ಕ್ರೀನಿಂಗ್, ಕೌನ್ಸಿಲಿಂಗ್, ಕುಟುಂಬ ಯೋಜನೆ ಸೇವೆಗಳು, ಆಂಟಿ-ನೇಟಲ್ ಕೇರ್ ಮತ್ತು ಇತರ ಸಮಸ್ಯೆಗಳನ್ನು ಪರಿಹರಿಸಲಾಗುತ್ತದೆ. ಇನ್ನು ಮೈಸೂರಿನಲ್ಲಿ ಪ್ರಾಯೋಗಿಕವಾಗಿ ಇಂತಹ 10 ಕ್ಲಿನಿಕ್‌ಗಳನ್ನು ಈಗಾಗಲೇ ಪ್ರಾರಂಭಿಸಿದ್ದು, ಅಲ್ಲಿನ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇನ್ನು ಮೈಸೂರಿನಲ್ಲಿ ಪ್ರಯೋಗಿಕವಾಗಿ ಆರಂಭಿಸಿರುವ ಮಹಿಳಾ ಕ್ಲಿನಿಕ್ ಗಳಿಗೆ ಪ್ರತಿನಿತ್ಯ 50 ರಿಂದ 100 ಮಹಿಳಾ ರೋಗಿಗಳು ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಿಕೊಂಡು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತಿದ್ದಾರೆ.
ಈ ಚಿಕಿತ್ಸಾಲಯಗಳು ಕೇವಲ ಮಹಿಳೆಯರ ಆರೋಗ್ಯಕ್ಕೆ ಮಾತ್ರವಲ್ಲದೇ ಅವರ ವೈಯಕ್ತಿಕ, ಖಾಸಗಿ, ಗೌಪ್ಯ ವಿಷಯಗಳನ್ನು ಮಹಿಳಾ ವೈದ್ಯರೊಂದಿಗೆ ಹಂಚಿಕೊಳ್ಳಲು ಸಹಾಯ ಮಾಡುತ್ತವೆ ಮತ್ತು ಅನೇಕ ಸಮಸ್ಯೆಗಳನ್ನು ಆರಂಭದಲ್ಲಿಯೇ ಪರಿಹರಿಸಬಹುದು ಜೊತೆಗೆ ಚಿಕಿತ್ಸೆ ಕೂಡ ಪಡೆಯಬಹುದಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications

