Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ರಾತ್ರಿ ಸರಿಯಾಗಿ ನಿದ್ರೆ ಬರ್ತಿಲ್ವಾ? ಹಾಗಾದ್ರೆ ಈ ಆಹಾರಗಳನ್ನು ತಪ್ಪದೇ ಸೇವಿಸಿ
ನಿದ್ರೆ ಎನ್ನುವುದು ಮನುಷ್ಯನ ಜೀವನದಲ್ಲಿ ತುಂಬಾನೇ ಮುಖ್ಯವಾಗುತ್ತದೆ. ನಾವು ಆರೋಗ್ಯವಾಗಿರಬೇಕಾದರೆ ಸರಿಯಾದ ನಿದ್ರೆಯ ಅವಶ್ಯಕತೆ ತುಂಬಾನೇ ಇದೆ. ಕೆಲವೊಂದು ಬಾರಿ ನಾವು ನಿದ್ರಾಹೀನತೆಯ ಸಮಸ್ಯೆಯನ್ನು ಅನುಭವಿಸುತ್ತೇವೆ. ಇದಕ್ಕೆಲ್ಲಾ ಕಾರಣ ನಮ್ಮ ಜೀವನ ಶೈಲಿ.

ಹೌದು, ನಾವು ಸೇವಿಸುವ ಆಹಾರ ಹಾಗೂ ನಮ್ಮ ಜೀವನ ಶೈಲಿ ಉತ್ತಮವಾಗಿದ್ದಾಗ ಮಾತ್ರ ನಮ್ಮ ನಿದ್ರಾಚಕ್ರವು ಸರಿಯಾಗಿರುತ್ತದೆ. ಹಾಗಾದ್ರೆ ಮಲಗುವ ಮೊದಲು ನಾವು ಎಂತಹ ಆಹಾರವನ್ನು ಸೇವಿಸಬೇಕು? ಯಾವ ರೀತಿಯ ಆಹಾರವು ನಮಗೆ ನೈಸರ್ಗಿಕ ನಿದ್ರೆಗೆ ಸಹಕರಿಸುತ್ತದೆ? ಹಾಗಾದ್ರೆ ರಾತ್ರಿ ಮಲಗುವ ಮುನ್ನ ಸೇವಿಸಲೇಬೇಕಾದ ಆಹಾರ ಯಾವುದು ಅನ್ನೋದನ್ನ ತಿಳಿಯೋಣ.

1. ಬಾದಾಮಿ
ಬಾದಾಮಿಯು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಬಾದಾಮಿಯಲ್ಲಿ ಪ್ರೋಟೀನ್‌ಗಳು, ಫಾಸ್ಫರಸ್ ಮತ್ತು ರೈಬೋಫ್ಲಾವಿನ್‌ನಂತಹ ಅನೇಕ ಪೋಷಕಾಂಶಗಳನ್ನು ಹೊಂದಿದೆ. ಬಾದಾಮಿಯು ಹೆಚ್ಚಿನ ಪ್ರಮಾಣದ ಮೆಲಟೋನಿನ್ ಅನ್ನು ಹೊಂದಿರುತ್ತದೆ, ಇದು ನಿದ್ರೆ ಮತ್ತು ಎಚ್ಚರದ ಚಕ್ರವನ್ನು ನಿಯಂತ್ರಿಸುವ ಹಾರ್ಮೋನ್ ಆಗಿದೆ. ಬಾದಾಮಿಯಲ್ಲಿ ಮೆಗ್ನೀಸಿಯಮ್ ಸಮೃದ್ಧವಾಗಿದೆ. ಇದು ನಿದ್ರಾಹೀನತೆಯನ್ನು ಹೊಂದಿರುವವರಿಗೆ ನಿದ್ರೆಯ ಅಭ್ಯಾಸವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಪ್ರತಿನಿತ್ಯ ಬಾದಾಮಿಯನ್ನು ಸೇವಿಸುವುದರಿಂದ ಉತ್ತಮ ನಿದ್ರೆಯ ಗುಣಮಟ್ಟವನ್ನು ಒದಗಿಸುತ್ತದೆ. ಮತ್ತು ಕಾಯಿಲೆಗಳ ಅಪಾಯವನ್ನು ತಪ್ಪಿಸುತ್ತದೆ.

2. ವಾಲ್ನಟ್
ವಾಲ್ನಟ್‌ನಲ್ಲಿ ಕೂಡ ನಿದ್ರೆಯನ್ನು ಉತ್ತೇಜಿಸುವ ಕೆಲವೊಂದು ಸಂಯುಕ್ತ ಅಂಶಗಳಿದೆ. ಇದರಲ್ಲಿ ಉತ್ತಮ ನಿದ್ರೆಗೆ ಅಗತ್ಯ ಪ್ರಮಾಣದ ಮೆಲಟೋನಿನ್, ಸಿರೊಟೋನಿನ್ ಮತ್ತು ಮೆಗ್ನೀಸಿಯಮ್ ಅನ್ನು ಹೊಂದಿದೆ. ಹಾಗೂ ಇದನ್ನು ಸೇವಿಸುವುದರಿಂದ ಆರೋಗ್ಯಕ್ಕೂ ಒಳ್ಳೆಯದು.

3. ಕೀವಿ ಹಣ್ಣು
ಮಲಗುವ ಮುನ್ನ ಕೀವಿ ಹಣ್ಣು ತಿಂದರೆ ಉತ್ತಮ. ಇದು ಕಡಿಮೆ ಕ್ಯಾಲೋರಿ ಮತ್ತು ಹೆಚ್ಚು ಪೌಷ್ಟಿಕಾಂಶ ಹೊಂದಿರುವ ಹಣ್ಣು. ಇದು ವಿಟಮಿನ್ ಸಿ, ವಿಟಮಿನ್ ಕೆ, ಪೊಟ್ಯಾಸಿಯಮ್, ಫೋಲೇಟ್ ಮತ್ತು ಇತರ ಅನೇಕ ಖನಿಜಗಳಿಂದ ಸಮೃದ್ಧವಾಗಿದೆ. ಕೀವಿ ಹಣ್ಣು ನಿದ್ರೆಗೆ ಪ್ರಯೋಜನಕಾರಿಯಾಗಿದೆ. ಏಕೆಂದರೆ ಇದು ಅನೇಕ ನಿದ್ರೆ-ಪ್ರಚೋದಕ ಸಂಯುಕ್ತಗಳನ್ನು ಒಳಗೊಂಡಿದೆ. ಮಲಗುವ ಮುನ್ನ ಪ್ರತಿದಿನ 1-2 ಕೀವಿ ಹಣ್ಣುಗಳನ್ನು ಸೇವಿಸುವುದರಿಂದ ವೇಗವಾಗಿ ನಿದ್ರಿಸಲು ಮತ್ತು ಹೆಚ್ಚು ಸಮಯ ನಿದ್ರಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆಯಿಂದ ಸಾಭೀತಾಗಿದೆ.

4. ಕೊಬ್ಬಿನಾಂಶ ಹೊಂದಿರುವ ಮೀನು
ಸಾಲ್ಮನ್, ಟ್ಯೂನ ಮತ್ತು ಮ್ಯಾಕೆರೆಲ್‌ನಂತಹ ಕೊಬ್ಬಿನಾಂಶ ಹೊಂದಿರುವ ಮೀನುಗಳು ವಿವಿಧ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇವುಗಳಲ್ಲಿ ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ವಿಟಮಿನ್ ಡಿ ಅನ್ನು ಒಳಗೊಂಡಿರುತ್ತವೆ. ಇದು ಆಂತರಿಕ ಉರಿಯೂತವನ್ನು ಕಡಿಮೆ ಮಾಡಲು ಮತ್ತು ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ವಿಟಮಿನ್ ಡಿ ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳ ಸಂಯೋಜನೆಯು ಉತ್ತಮ ನಿದ್ರೆಗೆ ಸಹಕರಿಸುತ್ತದೆ. ವಿಟಮಿನ್ ಡಿ ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳು ದೇಹದಲ್ಲಿನ ಸಿರೊಟೋನಿನ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

5. ಕುಂಬಳಕಾಯಿ ಬೀಜಗಳು
ಕುಂಬಳಕಾಯಿ ಬೀಜಗಳಲ್ಲಿ ಮೆಗ್ನೀಸಿಯಮ್ ಮತ್ತು ಟ್ರಿಪ್ಟೊಫಾನ್ ಸಮೃದ್ಧವಾಗಿದೆ. ಇದು ಅಮೈನೋ ಆಮ್ಲವಾಗಿದ್ದು ಅದು ನಿದ್ರಾಹೀನತೆಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ. ನಿಮ್ಮ ದೇಹವು ಅದನ್ನು ಸಿರೊಟೋನಿನ್ ಮತ್ತು ಮೆಲಟೋನಿನ್ ಆಗಿ ಪರಿವರ್ತಿಸುತ್ತದೆ. ಕುಂಬಕಾಯಿಯಲ್ಲಿರುವ ಆರೋಗ್ಯಕಾರಿ ಗುಣಗಳು ಉತ್ತಮ ನಿದ್ರೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

6. ಅನ್ನ
ಅಕ್ಕಿಯು ಕಾರ್ಬೋಹೈಡ್ರೇಟ್‌ಗಳ ಮೂಲವಾಗಿದ್ದರೂ, ಅನ್ನ ಸೇವನೆಯು ನಿದ್ರೆಯ ಮಾದರಿಯನ್ನು ಸುಧಾರಿಸುತ್ತದೆ ಎಂದು ಅಧ್ಯಯನಗಳಿಂದ ದೃಢಪಟ್ಟಿದೆ. ಬ್ರೆಡ್ ಅಥವಾ ನೂಡಲ್ಸ್ ತಿನ್ನುವುದರ ಬದಲಾಗಿ ಮಲಗುವ ಮುನ್ನ ಅನ್ನವನ್ನು ಸೇವಿಸುವುದು ಒಳ್ಳೆಯದು. ಇದು ಉತ್ತಮ ನಿದ್ರೆಗೆ ಉತ್ತೇಜಿಸುತ್ತದೆ ಎಂದು ಅಧ್ಯಯನದಿಂದ ಸಾಭೀತಾಗಿದೆ.

7. ಮೊಸರು ಅಥವಾ ಯೋರ್ಗಟ್
ಮೊಸರು ಅಥವಾ ಯೋರ್ಗಟ್ ಅನ್ನು ಮಲಗುವ ಮುನ್ನ ತಿಂದರೆ ಉತ್ತಮ. ಏಕೆಂದರೆ ಇದರಲ್ಲಿ ಬಹಳಷ್ಟು ಪ್ರೋಬಯಾಟಿಕ್‌ಗಳು ಮತ್ತು ಅಮಿನೊ ಟ್ರಿಪ್ಟೊಫಾನ್ ಅಂಶ ಹೊಂದಿದೆ. ಮೊಸರಿನಲ್ಲಿರುವ ಅಮಿನೊ ಟ್ರಿಪ್ಟೊಫಾನ್ ನಿಮ್ಮ ನಿದ್ರೆಯ ಚಕ್ರವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

8. ಬಿಸಿ ಹಾಲು
ರಾತ್ರಿಯಲ್ಲಿ ಒಂದು ಲೋಟ ಹಾಲು ಕುಡಿಯುವುದರಿಂದ ಕಣ್ಣುತುಂಬಾ ನಿದ್ದೆ ಮಾಡಬಹುದು. ಮಲಗುವ ಮುನ್ನ ಒಂದು ಲೋಟ ಬೆಚ್ಚಗಿನ ಹಾಲನ್ನು ಸೇವಿಸುವುದರಿಂದ ಒಳ್ಳೆಯದು ಏಕೆಂದರೆ ಹಾಲಿನಲ್ಲಿ ಕೆಲವು ನಿದ್ರೆಯನ್ನು ಉತ್ತೇಜಿಸುವ ಸಂಯುಕ್ತಗಳನ್ನು ಒಳಗೊಂಡಿದೆ. ಅವುಗಳೆಂದರೆ ಟ್ರಿಪ್ಟೊಫಾನ್, ಕ್ಯಾಲ್ಸಿಯಂ, ವಿಟಮಿನ್ ಡಿ, ಮೆಲಟೋನಿನ್ ಇದು ನೈಸರ್ಗಿಕವಾಗಿ ನಿದ್ರೆಯನ್ನು ಉತ್ತೇಜಿಸಲು ಉಪಯುಕ್ತವಾಗಿದೆ.
ಒಟ್ಟಿನಲ್ಲಿ ರಾತ್ರಿ ಚೆನ್ನಾಗಿ ನಿದ್ರೆ ಮಾಡಿದರಷ್ಟೇ ನಮ್ಮ ದಿನಚರಿ ಚೆನ್ನಾಗಿರೋದಕ್ಕೆ ಸಾಧ್ಯ. ಸರಿಯಾಗಿ ನಿದ್ರೆ ಆಗದೇ ಹೋದರೆ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ನಿದ್ರೆಗೂ ಮೊದಲು ನಿಮ್ಮ ಆಹಾರ ಸೇವನೆ ಉತ್ತಮವಾಗಿರಲಿ.



Click it and Unblock the Notifications