Latest Updates
-
ಮದುವೆ ಅವಧಿ ಕಡಿಮೆಯಿದ್ದರೂ ₹50 ಲಕ್ಷ ಜೀವನಾಂಶ: ಹೈಕೋರ್ಟ್ ತೀರ್ಪಿನಿಂದ ಪತಿಗಳಿಗೆ ಎಚ್ಚರಿಕೆ! -
ಗಣೇಶ ವಿಸರ್ಜನೆಗೆ ರೆಡಿಯಾಗಿದ್ದೀರಾ? ಅಪಾರ್ಟ್ಮೆಂಟ್ ನಿವಾಸಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪಾಲಿಕೆ ಸಹಾಯವಾಣಿ! -
ಹಬ್ಬದ ಸೀಸನ್ನಲ್ಲಿ ಎಚ್ಚರ! ದೆಹಲಿಯಲ್ಲಿ ಕಲಬೆರಕೆ ಸ್ವೀಟ್ಸ್ ದಾಳಿ: 30 ಸೆಕೆಂಡ್ಗಳಲ್ಲಿ ಪರೀಕ್ಷಿಸುವುದು ಹೇಗೆ? -
ಸೆಪ್ಟೆಂಬರ್ 25 ಗಣೇಶ ವಿಸರ್ಜನೆ: ಮುಂಬೈ, ಪುಣೆ, ಹೈದರಾಬಾದ್ನಲ್ಲಿ ಟ್ರಾಫಿಕ್ ರೂಟ್ ಬದಲಾವಣೆ, ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ! -
ಗಣೇಶ ವಿಸರ್ಜನೆ ಮೆರವಣಿಗೆ: ಬೆನ್ನು, ಮೊಣಕಾಲು ನೋವು ತಡೆಯಲು 12 ನಿಮಿಷದ ಸ್ಮಾರ್ಟ್ ರೊಟೀನ್ ಇಲ್ಲಿದೆ! -
ಯುಸಿಸಿ ಸಮಿತಿಯಲ್ಲಿ ಭಿನ್ನಮತ: ನಿಮ್ಮ ಮದುವೆ, ಆಸ್ತಿ ಹಕ್ಕಿನ ಮೇಲೆ ಪರಿಣಾಮವೇನು? -
15 ನಿಮಿಷದ ಡೆಂಗ್ಯೂ ಹೋಮ್ ಆಡಿಟ್: ನಿಮ್ಮ ಮನೆಯೇ ಸೊಳ್ಳೆಗಳ ತಾಣವಾಗದಿರಲಿ, ಈ ಸರಳ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ನಕಲಿ ಪ್ರೋಟೀನ್ ಸಪ್ಲಿಮೆಂಟ್ಸ್ ಎಚ್ಚರಿಕೆ: ನಿಮ್ಮ ಆರೋಗ್ಯಕ್ಕೆ ಕಂಟಕವಾಗುವ ಮುನ್ನ ಈ ಲೇಬಲ್ ಚೆಕ್ ಮಾಡಿ! -
ಒಡಿಶಾ-ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ 'ಡೀಪ್ ಡಿಪ್ರೆಷನ್': ನಿಮ್ಮ ಸುರಕ್ಷತೆಗಾಗಿ ಈ 15 ನಿಮಿಷಗಳ ಮುನ್ನೆಚ್ಚರಿಕೆ ಮರೆಯದಿರಿ! -
ದೆಹಲಿ-ಎನ್ಸಿಆರ್ನಲ್ಲಿ ಕಳಪೆ AQI: ಶ್ವಾಸಕೋಶದ ಆರೋಗ್ಯಕ್ಕಾಗಿ ಮನೆಯಲ್ಲೇ ಮಾಡಿ ಈ 10 ನಿಮಿಷದ ಸರಳ ವ್ಯಾಯಾಮ
ಪಾಲಕ್ ಸೇವನೆ ಆರೋಗ್ಯಕರವಾದರೂ, ಈ ಸಮಸ್ಯೆಯಿರುವವರು ಎಚ್ಚರ ವಹಿಸಿ
ಚಳಿಗಾಲದಲ್ಲಿ ಹಸಿರು ಸೊಪ್ಪುಗಳನ್ನು ಸೇವಿಸಬೇಕು ಎನ್ನುವುದು ಆಹಾರ ತಜ್ಞರ ಸಲಹೆ. ಈ ತರಕಾರಿಗಳು ಶೀತ ಋತುವಿನಲ್ಲಿ ನಿಮ್ಮ ದೇಹಕ್ಕೆ ಅನೇಕ ರೀತಿಯ ಪೋಷಕಾಂಶಗಳನ್ನು ಒದಗಿಸುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ವಿಶೇಷವಾಗಿ ಪಾಲಕ್ ಹಲವಾರು ಗುಣಗಳಿಂದ ಕೂಡಿದ್ದು, ಇದು ನಿಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಆದಾಗ್ಯೂ, ಇದು ಎಲ್ಲರಿಗೂ ಪ್ರಯೋಜನಕಾರಿ ಅಲ್ಲ. ಕೆಲವರಿಗೆ ಅಡ್ಡಪರಿಣಾಮಗಳು ಉಂಟಾಗಬಹುದು. ಆದ್ದರಿಂದ, ಪಾಲಕ್‌ನ್ನು ಸೇವಿಸುವ ಮೊದಲು, ಯಾರು ಅದನ್ನು ತಿನ್ನಬಾರದು ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ. ಅದನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ.

ಪಾಲಕ್ ಸೇವನೆಯಿಂದ ಸಿಗುವ ಪ್ರಯೋಜನಗಳು:
ಪಾಲಕವನ್ನು ಸೂಪರ್‌ಫುಡ್ ಎಂದು ಕರೆಯಲು ಹಲವು ಕಾರಣಗಳಿವೆ, ಏಕೆಂದರೆ ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ಆರೋಗ್ಯಕರ ಪೋಷಕಾಂಶಗಳಿಂದ ತುಂಬಿರುತ್ತದೆ. ಇದರಿಂದ ನಿಮ್ಮ ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನ ಸಿಗುವುದು. ಇದು ಅಗತ್ಯ ಖನಿಜಗಳು ಮತ್ತು ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ವಿಟಮಿನ್ ಎ, ಸಿ ಮತ್ತು ಕೆ ನಂತಹ ಜೀವಸತ್ವಗಳಲ್ಲಿ ಸಮೃದ್ಧವಾಗಿದೆ. ಈ ಸೂಪರ್‌ಫುಡ್ ಅನ್ನು ನಿಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವುದರಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು, ತೂಕವನ್ನು ಕಡಿಮೆ ಮಾಡಲು ಮತ್ತು ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಪಾಲಕ್ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ (ಜಿಐ) ಹೊಂದಿರುವುದರಿಂದ ಇದು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಯಾರು ಪಾಲಕ್ ಸೇವಿಸಬಾರದು?:
1. ಕಿಡ್ನಿಯಲ್ಲಿ ಕಲ್ಲುಗಳಿದ್ದರೆ:
ಪಾಲಕ್ ಸೊಪ್ಪಿನ ಅತಿಯಾದ ಸೇವನೆಯಿಂದ ದೇಹದಲ್ಲಿ ಆಕ್ಸಾಲಿಕ್ ಆಸಿಡ್ ಅಧಿಕವಾಗುವುದು. ಇದರಿಂದ ಮ್ಮ ದೇಹವು ಅದನ್ನು ವ್ಯವಸ್ಥೆಯಿಂದ ಹೊರಹಾಕಲು ಕಷ್ಟವಾಗುತ್ತದೆ. ಈ ಕಾರಣದಿಂದಾಗಿ, ಕ್ಯಾಲ್ಸಿಯಂ ಆಕ್ಸಲೇಟ್ ಕಲ್ಲು ಮೂತ್ರಪಿಂಡದಲ್ಲಿ ಸಂಗ್ರಹವಾಗುತ್ತದೆ, ಇದು ಮೂತ್ರಪಿಂಡದ ಕಲ್ಲಿನ ಅಪಾಯವನ್ನು ಹೆಚ್ಚಿಸುತ್ತದೆ.

2. ಕೀಲು ನೋವಿನಿಂದ ಬಳಲುತ್ತಿದ್ದರೆ:
ಪಾಲಕದಲ್ಲಿ ಆಕ್ಸಾಲಿಕ್ ಆಮ್ಲದ ಜೊತೆಗೆ ಪ್ಯೂರಿನ್ ಎಂಬ ಒಂದು ರೀತಿಯ ಸಂಯುಕ್ತವು ಸಮೃದ್ಧವಾಗಿದೆ. ಈ ಎರಡು ಸಂಯುಕ್ತಗಳು ಒಟ್ಟಾಗಿ ಸಂಧಿವಾತದ ನೋವನ್ನು ಪ್ರಚೋದಿಸಬಹುದು. ಈಗಾಗಲೇ ಕೀಲು ನೋವು ಮತ್ತು ಊತದಿಂದ ಬಳಲುತ್ತಿರುವವರಿಗೆ ಪಾಲಕ್ ಸೊಪ್ಪಿನ ಅತಿಯಾದ ಸೇವನೆಯು ರೋಗಲಕ್ಷಣಗಳನ್ನು ಇನ್ನಷ್ಟು ಹದಗೆಡಿಸುತ್ತದೆ.

3. ಯಾವುದೇ ರಕ್ತ ತೆಳುವಾಗಿಸುವ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ:
ಪಾಲಕ್ ವಿಟಮಿನ್-ಕೆ ಯ ಸಮೃದ್ಧ ಮೂಲವಾಗಿದ್ದು, ಇದು ರಕ್ತ ತೆಳುವಾಗಿಸುವವರೊಂದಿಗೆ ಸಂವಹನ ನಡೆಸಬಹುದು. ಆದ್ದರಿಂದ ನೀವೇನಾದರೂ ಯಾವುದೇ ರಕ್ತ ತೆಳುವಾಗಿಸುವ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ, ಪಾಲಕ್ ಸೇವನೆ ತ್ಯಜಿಸಬೇಕು ಅಥವಾ ಕಡಿಮೆ ಪ್ರಮಾಣದಲ್ಲಿ ಸೇವಿಸಬೇಕು.



Click it and Unblock the Notifications
