Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಕೋವಿಡ್ 19: ಆರೋಗ್ಯ ಇಲಾಖೆ ಹೇಳಿದ ಈ ಲಕ್ಷಣಗಳಿದ್ದರೆ ಆಸ್ಪತ್ರೆಗೆ ದಾಖಲಾಗಿ
ಕೊರೊನಾ ಪಾಸಿಟಿವ್ ಬಂದ್ರೆ ಎಲ್ಲರೂ ಆಸ್ಪತ್ರೆಗೆ ಬರಬೇಕಾಗಿಲ್ಲ, ಮನೆಯಲ್ಲಿಯೇ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯಿರಿ ಎಂದು ಆರೋಗ್ಯ ಇಲಾಖೆಯವರು ಹೇಳುತ್ತಿದ್ದಾರೆ. ಆಸ್ಪತ್ರೆಯಲ್ಲಿ ಬೆಡ್‌ಗಳ ಕೊರತೆ ಇರುವುದರಿಂದ ತುಂಬಾ ಗಂಭೀರವಾದ ರೋಗಿಗಳಿಗಷ್ಟೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ, ಉಳಿದವರಿಗೆ ಔಷಧ ನೀಡಿ ಮನೆಗೆ ಕಳುಹಿಸಲಾಗುತ್ತಿದೆ.
ಆದರೆ ಈಗೀನ ಪರಿಸ್ಥಿತಿಯಿಂದಾಗಿ ಜನರಲ್ಲಿ ಒಂದು ರೀತಿಯ ಆತಂಕ ಉಂಟಾಗಿದೆ. ಕೊರೊನಾ ಸಣ್ಣ ಪುಟ್ಟ ಲಕ್ಷಣಗಳಿದ್ದರೂ ಜನರು ಆಸ್ಪತ್ರೆಗೆ ದಾಖಲಾಗಲು ಬಯಸುತ್ತಿದ್ದಾರೆ, ಆದರೆ ಈ ಆತಂಕ ಬೇಡ, ಕೋವಿಡ್ 19 ಲಕ್ಷಣಗಳು ಅಷ್ಟೇನು ಗಂಭೀರವಾಗಿಲ್ಲ ಎಂದಾದರೆ ಯಾವುದೇ ಆತಂಕ ಬೇಡ, ಮನೆಯಲ್ಲಿಯೇ ಇದ್ದು ಚಿಕಿತ್ಸೆ ಪಡೆಯಿರಿ. ಮನೆಯಲ್ಲಿಯೇ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿರುವವರು ಯಾವಾಗ ಮತ್ತು ಯಾವ ಲಕ್ಷಣಗಳು ಕಂಡು ಬಂದರೆ ಆಸ್ಪತ್ರೆಗೆ ದಾಖಲಾಗಬೇಕೆಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ ನೋಡಿ:

ಹೋಂ ಐಸೋಲೇಷನ್ ಇರುವವರು ಯಾವ ಲಕ್ಷಣಗಳು ಕಂಡು ಬಂದರೆ ಆಸ್ಪತ್ರೆಗೆ ದಾಖಲಾಗಬೇಕು?
* ಆಕ್ಸಿಜನ್ ಸ್ಯಾಚುರೇಷನ್ 93ಕ್ಕಿಂತ ಕಡಿಮೆ ಬಂದ್ರೆ
* ತುಂಬಾ ಸುಸ್ತು ಹಾಗೂ ತಲೆ ತಿರುಗುವುದು
* ಎದೆಯಲ್ಲಿ ನೋವು
ಇಂಥ ಲಕ್ಷಣಗಳು ಕಂಡು ಬಂದ್ರೆ ಆಸ್ಪತ್ರೆಗೆ ದಾಖಲಾಗಬೇಕು.

ಇತರ ಆರೋಗ್ಯ ಸಮಸ್ಯೆಗಳಿದ್ದರೆ
ಒಂದು ವೇಳೆ ಮಧುಮೇಹ, ಕೊಲೆಸ್ಟ್ರಾಲ್, ಒಬೆಸಿಟಿ ಮತ್ತಿತರ ಆರೋಗ್ಯ ಸಮಸ್ಯೆಯಿದ್ದರೆ ಅವರು ತಮ್ಮ ಆರೋಗ್ಯ ಸ್ಥಿತಿಯ ಕುರಿತು ವೈದ್ಯರಿಗೆ ಮಾಹಿತಿ ನೀಡುತ್ತಾ ಇರಬೇಕು. ಒಂದು ವೇಳೆ ಏನಾದರೂ ರೋಗ ಲಕ್ಷಣಗಳು ಅಧಿಕವಾದರೆ ಅಥವಾ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆ ಕಂಡು ಬಂದರೆ ಕೂಡಲೇ ಆಕ್ಸಿಜನ್ ವ್ಯವಸ್ಥೆ ಇರುವ ಆಸ್ಪತ್ರೆಗೆ ದಾಖಲಾಗಬೇಕು.
ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದ್ದು ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ಕೊರತೆ ಉಂಟಾಗುತ್ತಿದೆ, ಇದರ ಕುರಿತು ಮಾತನಾಡಿರುವ ಏಮ್ಸ್ ನಿರ್ದೇಶಕ ಈ ಸಮಸ್ಯೆ ಬಗೆಹರಿಸಲು ಪ್ರಯತ್ನ ನಡೆಯುತ್ತಿವೆ ಎಂದಿದ್ದಾರೆ.

ಹೋಂ ಐಸೋಲೇಷನ್‌ನಲ್ಲಿರುವವರು ಏನನ್ನು ಗಮನಿಸಬೇಕು?
ಕೊರೊನಾ ಪಾಸಿಟಿವ್ ಬಂದು ಮನೆಯಲ್ಲಿಯೇ ಇದ್ದು ಚಿಕಿತ್ಸೆ ಇದ್ದರೆ ದೇಹದ ಉಷ್ಣತೆ, ಹಾರ್ಟ್ ರೇಟ್ ಹಾಗೂ ಆಕ್ಸಿಜನ್ ಲೆವಲ್ ಪರೀಕ್ಷಿಸುತ್ತಿರಬೇಕು. ಇದರಲ್ಲಿ ಏನಾದರೂ ವ್ಯತ್ಯಾಸ ಬಂದರೆ ಆಸ್ಪತ್ರೆಗೆ ದಾಖಲಾಗಬೇಕು.

5 ದಿನಕ್ಕಿಂತ ಅಧಿಕ ಜ್ವರವಿದ್ದರೆ ಆಸ್ಪತ್ರೆಗೆ ದಾಖಲಾಗಿ
5 ದಿನವಾದರೂ ಜ್ವರ ಕಡಿಮೆಯಾಗದಿದ್ದರೆ, ತುಂಬಾ ಕೆಮ್ಮು, ಉಸಿರಾಟಕ್ಕೆ ತೊಂದರೆ ಈ ಲಕ್ಷಣಗಳು ಕಂಡು ಬಂದರೆ ಆಸ್ಪತ್ರೆಗೆ ದಾಖಲಾಗಿ.
ಈ ಸಮಯದಲ್ಲಿ ಜಾಗ್ರತೆ ಮುಖ್ಯ, ನಿರ್ಲಕ್ಷ್ಯ ಬೇಡ. ಯಾವುದೇ ಕಾರಣಕ್ಕೆ ಆತಂಕಕ್ಕೆ ಒಳಗಾಗಬೇಡಿ.
ಕೊರೊನಾ ಸೋಂಕು ಹರಡುವುದನ್ನು ತಡೆಯಲು ಮಾಸ್ಕ್ ಧರಿಸೋಣ, ಕೈಗಳನ್ನು ಆಗಾಗ ಸೋಪು ಹಚ್ಚಿ ತೊಳೆಯೋಣ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳೋಣ.



Click it and Unblock the Notifications
