For Quick Alerts
ALLOW NOTIFICATIONS  
For Daily Alerts

ವಿಶ್ವ ದಾದಿಯರ ದಿನ: ರೋಗಿಯ ಪಾಲಿನ ದೇವರಿಗೆ ನಮಿಸುವ ದಿನ

|

ವಿಶ್ವ ದಾದಿಯರ ದಿನವನ್ನು ಖ್ಯಾತ ದಾದಿ ಪ್ಯಾರೆನ್ಸ್ ನೈಟಿಂಗೇಲ್ ಅವರು ಹುಟ್ಟಿದ ದಿನದಂದು ಆಚರಿಸಲಾಗುವುದು. ಅವರು ಮನುಕುಲಕ್ಕೆ ನೀಡಿದ ಅಮೋಘ ಸೇವೆಯನ್ನು ಸ್ಮರಿಸುವ ಸಲುವಾಗಿ 'ವಿಶ್ವ ದಾದಿಯರ ದಿನ'ಎಂದು ಜಗತ್ತಿನಾದ್ಯಂತ ಮೇ 12ರಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ.

World Nurses Day 2020, History and Significance

ಈ ಆಚರಣೆಯನ್ನು ವಿಶ್ವ ದಾದಿಯರ ಪರಿಷತ್ತು 1971 ರಲ್ಲಿ ಆರಂಭ ಮಾಡಿತ್ತು. 2018ರ ಆಚರಣೆಯ ಧ್ಯೇಯ ವಾಕ್ಯವೆಂದರೆ 'ಆರೋಗ್ಯ ಪ್ರತಿ ಮನುಷ್ಯನ ಮೂಲಭೂತ ಹಕ್ಕು' ಎಂಬುದಾಗಿತ್ತು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೌಲಭ್ಯ ದೊರಕಬೇಕು ಎಂಬುದೇ ಇದರ ಆಶಯವಾಗಿತ್ತು. 2023ರ ಥೀಮ್ ಎಂದರೆ ನಮ್ಮ ನರ್ಸ್ ನಮ್ಮ ಭವಿಷ್ಯ ("Our Nurses. Our Future.") ಎಂಬುವುದಾಗಿದೆ.

'ಮೇ 12ರಂದು ವಿಶ್ವ ದಾದಿಯರ ದಿನ'ಎಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ದಾದಿಯರು ನೀಡುವ ಅಮೂಲ್ಯ ಸೇವೆಯನ್ನು ಸ್ಮರಿಸುವ ಸಲುವಾಗಿ ಈ ದಿನವನ್ನಾಗಿ ಆಚರಿಸಲಾಗುತ್ತದೆ.

ವಿಶ್ವ ದಾದಿಯರ ದಿನವನ್ನು ಖ್ಯಾತ ದಾದಿ ಪ್ಯಾರೆನ್ಸ್ ನೈಟಿಂಗೇಲ್ ಅವರು ಹುಟ್ಟಿದ ದಿನದಂದು ಆಚರಿಸಲಾಗುವುದು. ಅವರು ಮನುಕುಲಕ್ಕೆ ನೀಡಿದ ಅಮೋಘ ಸೇವೆಯನ್ನು ಸ್ಮರಿಸುವ ಸಲುವಾಗಿ 'ವಿಶ್ವ ದಾದಿಯರ ದಿನ'ಎಂದು ಜಗತ್ತಿನಾದ್ಯಂತ ಮೇ 12ರಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಈ ಆಚರಣೆಯನ್ನು ವಿಶ್ವ ದಾದಿಯರ ಪರಿಷತ್ತು 1971 ರಲ್ಲಿ ಆರಂಭ ಮಾಡಿತ್ತು.

ಯಾರೀಕೆ ಫ್ಲಾರೆನ್ಸ್ ನೈಟಿಂಗೇಲ್?

ಯಾರೀಕೆ ಫ್ಲಾರೆನ್ಸ್ ನೈಟಿಂಗೇಲ್?

1820ರ ಮೇ 12ರಂದು ಜನಿಸಿದ ಫ್ಲಾರೆನ್ಸ್ ನೈಟಿಂಗೇಲ್ ಇವರನ್ನು ‘ಆಧುನಿಕ ನರ್ಸಿಂಗ್‍ನ ರೂವಾರಿ' ಎಂದು ಕರೆಯುತ್ತಾರೆ. ಮೂಲತಃ ಇಟಲಿ ದೇಶದಲ್ಲಿ ಜನಿಸಿ ಬಳಿಕ ಬ್ರಿಟಿಷ್ ದೇಶದ ಸಂಜಾತೆಯಾದ ಈಕೆ 13 ಆಗಸ್ಟ್ 1910ರಲ್ಲಿ ಇಹಲೋಕ ತ್ಯಜಿಸಿದರು. ಸುಮಾರು 90 ವರ್ಷಗಳ ಪರಿಪೂರ್ಣ ಬದುಕು ಸವೆಸಿದ ಈಕೆ ತನ್ನ ಜೀವನವನ್ನು ಮನುಕುಲದ ಸೇವೆಗೆ ಮುಡಿಪಾಗಿಟ್ಟಿದ್ದಳು. ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಈಕೆ ವೃತ್ತಿಯಲ್ಲಿ ಅಂಕಿ ಅಂಶ ತಜ್ಞೆಯಾಗಿದ್ದಳು. ಆದರೆ ನೊಂದವರ ದೀನ ದಲಿತರ ಸಾಲಿಗೆ ಈಕೆ ಸಾಕ್ಷಾತ್ ದೇವತೆಯಾಗಿದ್ದಳು.

ಕ್ರಿಮಿನ್ ಯುದ್ಧದ ಸಮಯದಲ್ಲಿ ನುರಿತ ದಾದಿಯರ ತಂಡದ ನಾಯಕಿಯಾಗಿ ಈಕೆ, ಗಾಯಗೊಂಡ ಸೈನಿಕರ ಸೇವೆಯನ್ನು ಹಗಲು ರಾತ್ರಿ ಮಾಡಿ ಹಲವಾರು ಸೈನಿಕರು ಜೀವ ಉಳಿಸಿದ್ದಳು. ರಾತ್ರಿ ಹೊತ್ತು ಯುದ್ಧ ಭೂಮಿಯಲ್ಲಿ ಕತ್ತಲಿನ ನಡುವೆ ದೀಪವನ್ನು ಹಿಡಿದುಕೊಂಡು ನೊಂದ ಮತ್ತು ಗಾಯಗೊಂಡ ಸೈನಿಕರ ಸೇವೆ ಮಾಡಿ ‘ಲೇಡಿ ಆಫ್ ಲ್ಯಾಂಪ್' ಎಂಬ ಹೆಸರಿನಿಂದ ಪ್ರಖ್ಯಾತಿಗೊಂಡಿದ್ದರು.

ಈಕೆ ಮಾಡಿದ ನಿಸ್ವಾರ್ಥ ಸೇವೆಯಿಂದ ವಿಕ್ಟೋರಿಯಾ ಸಂಸ್ಕೃತಿಯಲ್ಲಿ ದಾದಿಗಳಿಗೆ ವಿಶೇಷವಾದ ಸ್ಥಾನಮಾನ ದೊರೆತು ಬಹಳಷ್ಟು ಸೇವಾ ಮನೋಭಾವದ ಜನರು ನರ್ಸಿಂಗ್ ಕಲಿಕೆಗೆ ಮುಂದಾಗಿದ್ದರು ಎಂಬುದು ಗಮನಾರ್ಹ ಅಂಶ ಮತ್ತು ವೈದ್ಯಕೀಯ ಜಗತ್ತಿನಲ್ಲಿ ದಾದಿಯರಿಗೆ ಅತಿ ವಿಶಿಷ್ಟವಾದ ಸ್ಥಾನಮಾನ ಮುಂದೆ ಸಿಗುವಲ್ಲಿ ಸಹಕಾರಿಯಾಯಿತು ಎಂದರೂ ತಪ್ಪಾಗಲಿಕ್ಕಿಲ್ಲ.

ಫ್ಲಾರೆನ್ಸ್ ನೈಟಿಂಗೇಲ್ ನಿಸ್ವಾರ್ಥ ಸೇವೆ ಗುರುತಿಸಿದ ಜಗತ್ತು

ಫ್ಲಾರೆನ್ಸ್ ನೈಟಿಂಗೇಲ್ ನಿಸ್ವಾರ್ಥ ಸೇವೆ ಗುರುತಿಸಿದ ಜಗತ್ತು

ಫ್ಲಾರೆನ್ಸ್ ನೈಟಿಂಗೇಲ್ ಅವರು ಮಾಡಿದ ಸೇವೆಯನ್ನು ಜಗತ್ತಿನೆಲ್ಲೆಡೆ ಗುರುತಿಸಲಾಯಿತು. 1860ರಲ್ಲಿ ‘ನರ್ಸಿಂಗ್ ತರಬೇತಿಗಾಗಿ' ಲಂಡನ್‍ನ ಸೈಂಟ್ ಥಾಮಸ್ ಆಸ್ಪತ್ರೆಯಲ್ಲಿ ನೈಟಿಂಗೇಲ್ ನರ್ಸಿಂಗ್ ಶಾಲೆಯನ್ನು ಆರಂಭಿಸಲಾಯಿತು. ಈಗ ಇದು ಲಂಡನ್‍ನ ಕಿಂಗ್ಸ್ ಕಾಲೇಜಿನ ಅಧೀನದಲ್ಲಿದೆ. ನೈಟಿಂಗೇಲ್ ಅವರ ಸೇವೆಯನ್ನು ಸ್ಮರಿಸುವ ಸಲುವಾಗಿ ಪ್ರತಿ ನರ್ಸಿಂಗ್ ವಿದ್ಯಾರ್ಥಿಯೂ ತನ್ನ ವಿದ್ಯಾರ್ಜನೆಯ ಬಳಿಕ ‘ನೈಟಿಂಗೇಲ್ ಪ್ರಮಾಣ' ಎಂಬ ಪ್ರತಿಜ್ಞಾ ವಿಧಿಯನ್ನು ಪೂರೈಸುತ್ತಾರೆ ಮತ್ತು ನರ್ಸಿಂಗ್ ಸೇವೆಯಲ್ಲಿ ಅತೀ ಹೆಚ್ಚಿನ ಸೇವೆಗೈದ ದಾದಿಯರಿಗೆ ನೈಟಿಂಗೇಲ್ ಮೆಡಲ್ ಅಥವಾ ಪದಕ ನೀಡಿ ಗೌರವಿಸಲಾಗುತ್ತದೆ.

ಕ್ರಿಮಿನ್ ಯುದ್ಧದ ಸಮಯದಲ್ಲಿ ನುರಿತ ದಾದಿಯರ ತಂಡದ ನಾಯಕಿಯಾಗಿ ಈಕೆ, ಗಾಯಗೊಂಡ ಸೈನಿಕರ ಸೇವೆಯನ್ನು ಹಗಲು ರಾತ್ರಿ ಮಾಡಿ ಹಲವಾರು ಸೈನಿಕರು ಜೀವ ಉಳಿಸಿದ್ದಳು. ರಾತ್ರಿ ಹೊತ್ತು ಯುದ್ಧ ಭೂಮಿಯಲ್ಲಿ ಕತ್ತಲಿನ ನಡುವೆ ದೀಪವನ್ನು ಹಿಡಿದುಕೊಂಡು ನೊಂದ ಮತ್ತು ಗಾಯಗೊಂಡ ಸೈನಿಕರ ಸೇವೆ ಮಾಡಿ ‘ಲೇಡಿ ಆಫ್ ಲ್ಯಾಂಪ್' ಎಂಬ ಹೆಸರಿನಿಂದ ಪ್ರಖ್ಯಾತಿಗೊಂಡಿದ್ದರು.

ಈಕೆ ಮಾಡಿದ ನಿಸ್ವಾರ್ಥ ಸೇವೆಯಿಂದ ವಿಕ್ಟೋರಿಯಾ ಸಂಸ್ಕೃತಿಯಲ್ಲಿ ದಾದಿಗಳಿಗೆ ವಿಶೇಷವಾದ ಸ್ಥಾನಮಾನ ದೊರೆತು ಬಹಳಷ್ಟು ಸೇವಾ ಮನೋಭಾವದ ಜನರು ನರ್ಸಿಂಗ್ ಕಲಿಕೆಗೆ ಮುಂದಾಗಿದ್ದರು ಎಂಬುದು ಗಮನಾರ್ಹ ಅಂಶ ಮತ್ತು ವೈದ್ಯಕೀಯ ಜಗತ್ತಿನಲ್ಲಿ ದಾದಿಯರಿಗೆ ಅತಿ ವಿಶಿಷ್ಟವಾದ ಸ್ಥಾನಮಾನ ಮುಂದೆ ಸಿಗುವಲ್ಲಿ ಸಹಕಾರಿಯಾಯಿತು ಎಂದರೂ ತಪ್ಪಾಗಲಿಕ್ಕಿಲ್ಲ.

ದಾದಿಯರಿಗೆ ನೈಟಿಂಗೇಲ್ ಪದಕದ ಗೌರವ

ದಾದಿಯರಿಗೆ ನೈಟಿಂಗೇಲ್ ಪದಕದ ಗೌರವ

ಫ್ಲಾರೆನ್ಸ್ ನೈಟಿಂಗೇಲ್ ಅವರು ಮಾಡಿದ ಸೇವೆಯನ್ನು ಜಗತ್ತಿನೆಲ್ಲೆಡೆ ಗುರುತಿಸಲಾಯಿತು. 1860ರಲ್ಲಿ ‘ನರ್ಸಿಂಗ್ ತರಬೇತಿಗಾಗಿ' ಲಂಡನ್‍ನ ಸೈಂಟ್ ಥಾಮಸ್ ಆಸ್ಪತ್ರೆಯಲ್ಲಿ ನೈಟಿಂಗೇಲ್ ನರ್ಸಿಂಗ್ ಶಾಲೆಯನ್ನು ಆರಂಭಿಸಲಾಯಿತು. ಈಗ ಇದು ಲಂಡನ್‍ನ ಕಿಂಗ್ಸ್ ಕಾಲೇಜಿನ ಅಧೀನದಲ್ಲಿದೆ. ನೈಟಿಂಗೇಲ್ ಅವರ ಸೇವೆಯನ್ನು ಸ್ಮರಿಸುವ ಸಲುವಾಗಿ ಪ್ರತಿ ನರ್ಸಿಂಗ್ ವಿದ್ಯಾರ್ಥಿಯೂ ತನ್ನ ವಿದ್ಯಾರ್ಜನೆಯ ಬಳಿಕ ‘ನೈಟಿಂಗೇಲ್ ಪ್ರಮಾಣ' ಎಂಬ ಪ್ರತಿಜ್ಞಾ ವಿಧಿಯನ್ನು ಪೂರೈಸುತ್ತಾರೆ ಮತ್ತು ನರ್ಸಿಂಗ್ ಸೇವೆಯಲ್ಲಿ ಅತೀ ಹೆಚ್ಚಿನ ಸೇವೆಗೈದ ದಾದಿಯರಿಗೆ ನೈಟಿಂಗೇಲ್ ಮೆಡಲ್ ಅಥವಾ ಪದಕ ನೀಡಿ ಗೌರವಿಸಲಾಗುತ್ತದೆ.

 ದೈವ ಸ್ವರೂಪಿಯಾಗಿ ಕಾಣಿಸುವ ದಾದಿಯರು

ದೈವ ಸ್ವರೂಪಿಯಾಗಿ ಕಾಣಿಸುವ ದಾದಿಯರು

ರೋಗಿಗಳ ಕಾಯಿಲೆ ವಾಸಿ ಮಾಡುವಲ್ಲಿ, ಅವರಲ್ಲಿ ಮಾನಸಿಕ ಧೈರ್ಯ ತುಂಬುವಲ್ಲಿ ರೋಗಿಗಳು ಮಹತ್ವದ ಪಾತ್ರವನ್ನು ವಹಿಸುತ್ತಾರೆ. ಅವರ ಮಾನವೀಯ ಸೇವೆಗೆ ಬೆಲೆ ಕಟ್ಟಲು ಸಾಧ್ಯವಾಗುವುದಿಲ್ಲ. ಕೆಲವೊಮ್ಮೆ ರೋಗಿ ಗುಣಮುಖವಾಗುವಲ್ಲಿ ವೈದ್ಯ ನೀಡಿದ ಔಷಧಿಗಿಂತ ದಾದಿ ನೀಡಿದ ಸೇವೆ ಪ್ರಮುಖವಾಗಿರುತ್ತದೆ. ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಸಮಯದಲ್ಲಿ ದಾದಿ ದೈವೀ ಸ್ವರೂಪಿಯಾಗಿ ಕಾಣಿಸುತ್ತಾರೆ. ಮನುಷ್ಯ ಅಂದ ಮೇಲೆ ಕಾಯಿಲೆ ಬರುವುದು ಸಹಜ. ಆದರೆ ಕೆಲವರಿಗೆ ಅಪಘಾತವಾಗಿ ಅಥವಾ ಬೇರೆ ಯಾವುದೋ ಕಾಯಿಲೆಯಿಂದ ಮಲಗಿದ್ದಲ್ಲಿಯೇ ಆದಾಗ ದಾದಿಯರು ನೀಡುವ ಸೇವೆ ನೋಡುವಾಗ ಎಂಥವರಿಗೂ ಅವರ ಮೇಲೆ, ಅವರ ವೃತ್ತಿ ಮೇಲೆ ಗೌರವ ಮೂಡುವುದು. ರೋಗಿ ಹೇಗೆಯೇ ಇರಲಿ, ಯಾವುದೇ ಹೇಸಿಗೆ ತೋರದೆ ಅವರ ಕೆಲಸಗಳನ್ನು ಮಾಡುತ್ತಾರೆ. ಅಮ್ಮನಂತೆ ಆರೈಕೆ ಮಾಡುತ್ತಾರೆ, ಮನಸ್ಸಿಗೆ ಧೈರ್ಯ ತುಂಬುತ್ತಾರೆ. ಆ ಸಹೋದರಿಯ ಸೇವೆಯಿಂದಲೇ ನಮ್ಮ ದೇಹ ಚೇತರಿಸಿಕೊಳ್ಳಲಾರಂಭಿಸುತ್ತದೆ.

ಪ್ರತಿಯೊಬ್ಬ ಮನುಷ್ಯ ಅವರ ಸೇವೆಯನ್ನು ಪಡೆದುಕೊಂಡೇ ಕೊಳ್ಳುತ್ತಾನೆ. ಅವರ ಸೇವೆಗೆ ಗೌರವನ್ನು ನೀಡುವ ಈ ದಿನದಂದು ಅವರಿಗೆ ನಮ್ಮ ಕೃತಜ್ಞತೆ ಸಲ್ಲಿಸೋಣ, ಅವರ ನಿಸ್ವಾರ್ಥ ಸೇವೆಗೆ ನಮ್ಮದೊಂದು ನಮನ.

English summary

World Nurses Day 2023, History and Significance

Every year on 12 May, International Nurses Day is celebrated worldwide to commemorate the birth of Florence Nightingale and to mark the contribution of nurses and mid-wives towards the society.
X
Desktop Bottom Promotion