Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಧೂಮಪಾನದಿಂದ ಪಾರ್ಶ್ವವಾಯು ಅಪಾಯ ಹೆಚ್ಚು, ತಡೆಗಟ್ಟುವುದು ಹೇಗೆ?
ಗೆಳೆಯರೊಂದಿಗೆ ಪಾರ್ಟಿನಲ್ಲಿ ಬೆರೆಯುವಾಗಲೋ ಅಥವಾ ತಮಾಷೆಗೆ, ಖುಷಿಗೆ ಹೀಗೆ ಒಂದೊಂದು ಕಾರಣಕ್ಕೆ ಆರಂಭವಾಗುವ ಕೆಲವು ಚಟಗಳು ಬಳಿಕ ನಮ್ಮನ್ನೇ ಬಲಿತೆಗೆದುಕೊಳ್ಳುತ್ತವೆ.

ಅಕ್ಟೋಬರ್ 29, ವಿಶ್ವ ಪಾರ್ಶ್ವವಾಯು ದಿನ. ತಮಾಷೆಗೆ ಶುರು ಮಾಡುವ ಧೂಮಪಾನ ನಂತರ ಚಟವಾಗಿ, ಪಾರ್ಶ್ವವಾಯು ಬರಲು ಹೇಗೆ ಕಾರಣವಾಗುತ್ತದೆ, ಈ ಚಟಕ್ಕೆ ಬಲಿಯಾಗದಿಲು ಧೂಮಪಾನ ಬಿಡುವುದು ಹೇಗೆ ಎಂದು ಹೇಳಿದ್ದೇವೆ ನೋಡಿ:
ಇವತ್ತು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಬಾರದು ಎಂಬ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದರೂ, ಬೀಡಿ ಸಿಗರೇಟಿನ ಬೆಲೆ ಗಗನಕ್ಕೇರಿದ್ದರೂ ಅದರ ಬಳಕೆ ಮಾಡುವವರ ಸಂಖ್ಯೆ ಕಡಿಮೆಯಾಗಿಲ್ಲ. ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಗೊತ್ತಿದ್ದರೂ ಅದನ್ನು ಬಿಟ್ಟು ಬದುಕುವವರು ಕಡಿಮೆಯೇ.

ಸಿಗರೇಟ್ ಸೇವನೆ ಘನತೆಯೆಂಬಂತೆ ವರ್ತನೆ
ಸಾಮಾನ್ಯವಾಗಿ ಯುವಕರು ಸಿಗರೇಟ್ ಹಿಡಿದುಕೊಂಡು ಕುಳಿತುಕೊಳ್ಳುತ್ತಿರುವ ದೃಶ್ಯಗಳು ಟೀ ಅಂಗಡಿಗಳಲ್ಲಿ ಕಂಡು ಬರುತ್ತಿವೆ. ಕೆಲವರು ಸಿಗರೇಟ್ ಸೇದುವುದೇ ಘನತೆ ಎಂಬಂತೆ ನಡೆದುಕೊಳ್ಳುವುದು ಇಲ್ಲದಿಲ್ಲ. ಕೆಲವರನ್ನು ಮಾತನಾಡಿಸಿದರೆ ಸಿಗರೇಟ್ ಸೇದುವುದರಿಂದ ಮನಸ್ಸು ರಿಲ್ಯಾಕ್ಸ್ ಆಗುತ್ತದೆ. ಟೆನ್ಷನ್ ದೂರವಾಗುತ್ತದೆ ಎನ್ನುತ್ತಾರೆ. ಮತ್ತೆ ಕೆಲವರು ಖುಷಿಗೆ ಸೇದುತ್ತಿರುವುದಾಗಿ ಹೇಳುತ್ತಾರೆ. ತಮ್ಮ ಸಂಪಾದನೆಯಲ್ಲಿ ಕಾಲು ಭಾಗವನ್ನು ಸಿಗರೇಟಿಗೆ ಸುರಿಯುತ್ತಾರೆ. ಇನ್ನು ಧೂಮಪಾನ ಚಟವನ್ನು ಮೈಗೆ ಅಂಟಿಸಿಕೊಂಡ ವ್ಯಕ್ತಿ ಅದು ಇಲ್ಲದೆ ಹೋದರೆ ವಿಚಿತ್ರವಾಗಿ ವರ್ತಿಸುತ್ತಾನೆ. ಏನೋ ಕಳೆದುಕೊಂಡಂತೆ ಒದ್ದಾಡುತ್ತಾನೆ. ಜತೆಗೆ ಒಂದಕ್ಕೆ ದುಪ್ಪಟ್ಟು ಹಣವನ್ನು ನೀಡಿಯಾದರೂ ಸೇದಿಯೇ ಬಿಡುತ್ತಾನೆ.
ವಿದ್ಯಾರ್ಥಿಗಳು ಈ ಚಟಕ್ಕೆ ಹೆಚ್ಚಾಗಿ ಒಳಗಾಗುತ್ತಾರೆ. ಮುಂದುವರಿದ ಈ ದಿನಗಳಲ್ಲಿ ಹೆಣ್ಣು ಮಕ್ಕಳು ಕೂಡ ಸಿಗರೇಟ್ ಸೇದುವ ಚಟವನ್ನು ರೂಢಿಸಿಕೊಳ್ಳುತ್ತಿರುವುದು ನಿಜಕ್ಕೂ ಆತಂಕಕಾರಿ ಬೆಳವಣಿಗೆಯಾಗಿದೆ. ಸಿಗರೇಟ್ ಹೊಗೆ ಶರೀರದೊಳಕ್ಕೆ ಹೋಗಿ ಅದು ಹೆಣ್ಣು ಮಕ್ಕಳ ಮೇಲೆ ಭಾರೀ ಪರಿಣಾಮ ಬೀರುತ್ತದೆ ಎನ್ನುವುದು ವೈದ್ಯಕೀಯವಾಗಿ ದೃಢವಾಗಿದೆ.

ಮತ್ತೆ ಸೇದುವಂತೆ ಮಾಡುವ ನಿಕೋಟಿನ್
ಸಿಗರೇಟ್ ಸೇದಿದರೆ ಮಜಾ ಸಿಗುತ್ತೆ ಎಂಬ ಭ್ರಮೆಗೆ ಒಳಗಾಗಲು ಸಿಗರೇಟಿನಲ್ಲಿರುವ ನಿಕೋಟಿನ್ ಕಾರಣವಂತೆ. ಇದು ಮತ್ತೆ ಮತ್ತೆ ಸೇದುವಂತೆ ಮಾಡಿ ಸಿಗರೇಟಿಗೆ ದಾಸರಾಗಿಸಿಬಿಡುತ್ತದೆ. ಇದರಿಂದ ಮಜಾ ಸಿಗುತ್ತದೆ ಎನ್ನುವುದು ಭ್ರಮೆಯಾದರೂ ಆರೋಗ್ಯವಂತು ಹದಗೆಡುತ್ತದೆ ಎನ್ನುವುದು ವಾಸ್ತವವಾಗಿದೆ. ಉಸಿರಾಟಕ್ಕೆ ಅಡಚಣೆ, ಕೆಮ್ಮು, ಕಫ, ಶ್ವಾಸಕೋಸದ ತೊಂದರೆ, ಕ್ಯಾನ್ಸರ್, ದೈಹಿಕ ಅಸಮರ್ಥತೆ ಹೀಗೆ ಹತ್ತು ಹಲವು ತೊಂದರೆಗಳು ಕಾಣಿಸಿಕೊಳ್ಳುತ್ತಾ ಹೋಗುತ್ತದೆ. ಸಿಗರೇಟ್ ಸೇದುವುದರಿಂದ ತಮ್ಮ ಆರೋಗ್ಯ ಹದಗೆಡುತ್ತದೆ ಎಂಬುದು ಪ್ರತಿಯೊಬ್ಬರಿಗೂ ಗೊತ್ತಿದೆ. ಆದರೆ ರಿಲ್ಯಾಕ್ಸ್ ಪಡೆಯುವ ಸಲುವಾಗಿ ಮೇಲಿಂದ ಮೇಲೆ ಸಿಗರೇಟ್ ಸೇದಲು ಆರಂಭಿಸುವ ವ್ಯಕ್ತಿ ಕಾಯಿಲೆಯ ಗೂಡಾಗಿ ಸಾವನ್ನು ತಮ್ಮ ಮೇಲೆ ಎಳೆದುಕೊಳ್ಳುತ್ತಾನೆ.

ಧೂಮಪಾನ ಸೇದುವುದರಿಂದ ಬರುವುದು ಪಾರ್ಶ್ವವಾಯು
ಪಾರ್ಶ್ವವಾಯು ಬರಲು ಧೂಮಪಾನ ಕೂಡ ಒಂದು ಕಾರಣ, ಅಧಿಕ ಸೇದುವವರೆಗೆ ಇದರ ಅಪಾಯ ತಪ್ಪಿದ್ದಲ್ಲ. ನೀವು ದಿನದಲ್ಲಿ 20 ಸಿಗರೇಟ್ ಸೇದುವುದಾದರೆ ಪಾರ್ಶ್ವವಾಯು ಬರುವ ಸಾಧ್ಯತೆ ಆರು ಪಟ್ಟು ಅಧಿಕ. ನಿಕೋಟಿನ್ ದೇಹವನ್ನು ಸೇರಿ, ರಕ್ತನಾಳಗಳಲ್ಲಿ ರಕ್ತ ಹೆಪ್ಪುಗಟ್ಟುವಂತೆ ಮಾಡಿದೆ. ಅಲ್ಲದೆ ದೇಹಕ್ಕೆ ಆಮ್ಲಜನಕ ಪೂರೈಕೆ ಕೂಡ ಕಡಿಮೆಯಾಗುವುದು. ಇದರಿಂದಾಗಿ ಪಾರ್ಶ್ವವಾಯು ಉಂಟಾಗುವುದು.

ಧೂಮಪಾನದಿಂದ ಸ್ಟ್ರೋಕ್/ಪಾರ್ಶ್ವವಾಯು ಉಂಟಾಗುವುದು ಹೇಗೆ?
ಸಿಗರೇಟ್‌ನಲ್ಲಿ 7000ಕ್ಕೂ ಅಧಿಕ ರಾಸಾಯನಿಕಗಳಿವೆ, ಕಾರ್ಬನ್ ಮಾನೋಕ್ಸೈಡ್, ಫಾರ್ಮಲ್ ಡೀಹೈಡ್, ಆರ್ಸೆನಿಕ್ ಈ ರಾಸಾಯನಿಕಗಳು ಶ್ವಾಸಕೋಶದ ಮೂಲಕ ರಕ್ತಕ್ಕೆ ಸೇರುವುದು, ಇದರಿಂದ ಕಣಗಳಿಗೆ ಹಾನಿಯುಂಟಾಗು ಪಾರ್ಶ್ವವಾಯು ಉಂಟಾಗುವುದು.

ಮನಸ್ಸಿದ್ದರೆ ಸಿಗರೇಟ್ ಬಿಡುವುದು ಕಷ್ಟವೇನಲ್ಲ
ಆರೋಗ್ಯವಿದ್ದಾಗ ಅದರ ಹೊಡೆತ ಗೊತ್ತಾಗುವುದಿಲ್ಲ ಒಮ್ಮೆ ಆರೋಗ್ಯ ತಪ್ಪಿದಾಗ ಸಿಗರೇಟ್‌ನ ಚಮತ್ಕಾರ ಗೊತ್ತಾಗಿ ಬಿಡುತ್ತದೆ. ನಮ್ಮ ಕಾಯಿಲೆಯಲ್ಲಿ ಅದರ ಪಾತ್ರ ಎಷ್ಟಿದೆ ಎಂಬುದು ಅರಿವಾಗುತ್ತದೆ. ಕಾಯಿಲೆ ಬಂದು ಅದರಿಂದ ಹೇಗೋ ಬಿಡುಗಡೆಗೊಂಡು ಇನ್ನುಮುಂದೆ ಸಿಗರೇಟ್ ಸಹವಾಸ ಬೇಡಪ್ಪಾ ಎಂದು ಅದನ್ನು ಬಿಟ್ಟವರು ಕೆಲವೊಮ್ಮೆ ಕೆಲವೊಂದು ತೊಂದರೆಗಳಿಂದ ಬಳಲುತ್ತಾರೆ. ಕೆಲವರು ಮಾನಸಿಕವಾಗಿಯೂ ಕುಗ್ಗಿಬಿಡುತ್ತಾರೆ. ಮನಸ್ಸು ಮಾಡಿದರೆ ಯಾವುದೂ ಅಸಾಧ್ಯವಲ್ಲ. ಇವತ್ತಿನ ದಿನಗಳಲ್ಲಿ ಬೀಡಿ ಸಿಗರೇಟ್ ದುಬಾರಿಯಾಗಿದೆ. ಅದನ್ನು ಬಿಟ್ಟರೆ ಆರೋಗ್ಯ ಮಾತ್ರವಲ್ಲ, ಆರ್ಥಿಕವಾಗಿಯೂ ಸದೃಢರಾಗಲು ಸಾಧ್ಯವಿದೆ. ದುಶ್ಚಟಗಳನ್ನು ಕಲಿಯುವುದು ಸುಲಭ ಆದರೆ ಅದನ್ನು ತ್ಯಜಿಸುವುದು ಕಷ್ಟದ ಕೆಲಸ. ಆದರೆ ಗಟ್ಟಿ ಮನಸ್ಸು ಮಾಡಿ ಅದಕ್ಕೆ ತಿಲಾಂಜಲಿ ಹೇಳುವುದು ಇಂದಿನ ಅನಿವಾರ್ಯತೆಯಾಗಿದೆ. ಬಹಳಷ್ಟು ಮಂದಿ ಇವತ್ತು ಧೂಮಪಾನ ಸೇವನೆ ಬಿಟ್ಟು ಉತ್ತಮ ಆರೋಗ್ಯ ಕಂಡು ಕೊಂಡಿದ್ದಾರೆ.

ಗಟ್ಟಿ ಮನಸ್ಸು ಮಾಡಿ ಸಿಗರೇಟ್ ಬಿಡಿ
ತಜ್ಞರು ಹೇಳುವ ಪ್ರಕಾರ ಧೂಮಪಾನ ಮಾಡುವುದನ್ನು ಬಿಟ್ಟರೆ, ಆ ನಂತರ ವಿಟಮಿನ್- ಇ ಮಾತ್ರೆಗಳನ್ನು ಒಂದಷ್ಟು ಪ್ರಮಾಣದಲ್ಲಿ ಸೇವಿಸಬೇಕಂತೆ. ಇದರಿಂದ ಹೃದಯದ ಆರೋಗ್ಯಕ್ಕೆ ಹಾನಿಯಾಗುವುದಿಲ್ಲವಂತೆ. ಈ ಸಂಗತಿಯನ್ನು ಅಮೆರಿಕದಲ್ಲಿರುವ ಓಹಿಯೋ ಸ್ಟೇಟ್ ಯೂನಿವರ್ಸಿಟಿ ಸಂಶೋಧಕರು ತಿಳಿಸಿದ್ದಾರೆ. ಇ ವಿಟಮಿನ್ ನಿಂದ ಹೃದಯಕ್ಕೆ ಯಾವುದೇ ಸಮಸ್ಯೆ ಉಂಟಾಗದು. ರಕ್ತ ಪ್ರಸಾರ ಸುಗಮವಾಗಿರುತ್ತದೆ ಎಂದು ಅಧ್ಯಯನ ಸಂದರ್ಭದಲ್ಲಿ ಗಮನಿಸಿದ್ದಾರೆ. ಅಲ್ಲದೇ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಶೇ. 19 ಕಡಿಮೆಯಾಗುತ್ತದೆ ಎಂದು ಹೇಳಿದ್ದಾರೆ. ಒಂದು ವಾರದಷ್ಟು ಸಮಯ ಧೂಮಪಾನ ಮಾಡದೆ ಇದ್ದವರಲ್ಲಿ ಶೇ.2.8 ರಷ್ಟು ರಕ್ತ ಪ್ರಸಾರದ ವ್ಯವಸ್ಥೆ ಸುಗಮವಾಗಿರುತ್ತಂತೆ. ವಿಟಮಿನ್ ಇ' ಯನ್ನು ಗಾಮ ಟೋಕೋಫೆರಾಲ್ ರೂಪದಲ್ಲಿ ಸೇವಿಸಿದರಲ್ಲಿ ಶೇ. 1.5 ರಷ್ಟು ವೃದ್ಧಿ ಕಂಡು ಬಂದ ಸಂಗತಿಯನ್ನು ವಿಜ್ಞಾನಿಗಳು ಜಗತ್ತಿಗೆ ತಿಳಿಸಿದ್ದಾರೆ. ಈಗಾಗಲೇ ಸಿಗರೇಟ್ ಸೇದುವವರು ಆರೋಗ್ಯ ಸರಿಯಾಗಿಲ್ಲ ಸಮಸ್ಯೆಯಾಗುತ್ತಿದೆ ಎಂಬುದು ಗೊತ್ತಾಗುತ್ತಿದ್ದಂತೆಯೇ ಗಟ್ಟಿ ಮನಸ್ಸು ಮಾಡಿ ಬಿಟ್ಟು ಬಿಡಿ. ಇದರಿಂದ ಒಳ್ಳೆಯ ಆರೋಗ್ಯವಂತ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಲಿದೆ.



Click it and Unblock the Notifications