Latest Updates
-
ಸ್ಮ್ಯಾಶ್ ಪ್ಯಾಟ್ರಿಯಾರ್ಕಿ: ದಂಪತಿಗಳ ನಡುವಿನ ಜಗಳಕ್ಕೆ 20 ನಿಮಿಷದ 'ಹೋಮ್ ರಿಸೆಟ್' ಪ್ಲಾನ್! -
ಮಳೆಗಾಲದಲ್ಲಿ ನಿಮ್ಮ ಮನೆ ಮತ್ತು ಬಲ್ಕನಿ ಸುರಕ್ಷಿತವಾಗಿಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್: ಕೇರಳದಲ್ಲಿ ಯೆಲ್ಲೋ ಅಲರ್ಟ್! -
ರಕ್ಷಾಬಂಧನಕ್ಕೆ ಪನ್ನೀರ್ ಖರೀದಿಸುವ ಮುನ್ನ ಎಚ್ಚರ: ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ರಾಖಿ ಹಬ್ಬ 2026: ಆಗಸ್ಟ್ 28ರಂದು ರಕ್ಷಾಬಂಧನ ಆಚರಣೆ; ಶುಭ ಮುಹೂರ್ತ ಮತ್ತು ಭದ್ರಾ ಕಾಲದ ಸಂಪೂರ್ಣ ಮಾಹಿತಿ ಇಲ್ಲಿದೆ -
ಬೆಂಗಳೂರು ಮಳೆ: ಮನೆಯಲ್ಲೇ ಮಾಡಿ 15 ನಿಮಿಷದ ನೋ-ಜಂಪ್ ವರ್ಕೌಟ್, ಫಿಟ್ ಆಗಿರಿ! -
ಮಳೆಗಾಲದ ಪ್ರಯಾಣ: ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ನಡೆಯಲು 7 ನಿಮಿಷದ ಸರಳ ವ್ಯಾಯಾಮಗಳು -
ಮಳೆಗಾಲದ ಪ್ರಯಾಣ: ಟ್ರಾಫಿಕ್ ಮತ್ತು ಕ್ಯಾಬ್ ಸಮಸ್ಯೆಗಳ ನಡುವೆ ದಂಪತಿಗಳು ನೆಮ್ಮದಿ ಕಾಪಾಡಿಕೊಳ್ಳುವುದು ಹೇಗೆ? -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ಇಂದಿನ ಪರಿಷ್ಕೃತ ಪಟ್ಟಿ ಮತ್ತು ನಿಮ್ಮ ಪ್ರಕರಣದ ಸ್ಥಿತಿ ಪರಿಶೀಲಿಸಿ -
ಓಣಂ ಹಬ್ಬ: ಮಳೆಗೆ ಹಾಳಾಗದ, ₹500ರೊಳಗೆ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್! -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಜಾಗ ಉಳಿಸುವ ಸುಂದರ ಪೂಕಳಂ ಐಡಿಯಾಗಳು
ಪ್ರತಿದಿನ ಮೊಳಕೆ ಕಾಳುಗಳ ಸೇವಿಸಿದರೆ ಏನಾಗುತ್ತೆ ಗೊತ್ತಾ? ತಿಳಿದರೆ ನಿಮಗೂ ಅಚ್ಚರಿಯಾಗುತ್ತೆ..!
ನಿತ್ಯದ ಒತ್ತಡದ ಜೀವನದಲ್ಲಿ ನಾವು ಆರೋಗ್ಯದ ಕಡೆ ಗಮನಹರಿಸುವುದು ಕಷ್ಟವಾಗುತ್ತಿದೆ. ನಾವು ನಿತ್ಯ ಆರೋಗ್ಯಕರ ಆಹಾರ ಸೇವನೆ ಮಾಡಿತ್ತಿದ್ದೇವೆಯೇ? ಇಲ್ಲ ಕಳಪೆ ಆಹಾರದಿಂದ ನಮ್ಮ ಆರೋಗ್ಯ ಕೆಡುತ್ತಿದೆಯೇ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಅದರಲ್ಲೂ ನಮ್ಮ ಆಹಾರದಲ್ಲಿ ಯಾವೆಲ್ಲಾ ಅಂಶ ಸೇರಿದೆ ಅನ್ನೋದು ಸಹ ನಮ್ಮ ಆರೋಗ್ಯವನ್ನು ನಿರ್ಧರಿಸುತ್ತದೆ.
ಇತ್ತೀಚಿನ ದಿನದಲ್ಲಿ ನಾವು ಅನಾರೋಗ್ಯಕ್ಕೆ ತುತ್ತಾಗುತ್ತಿರುವುದಕ್ಕೆ ನಾವು ಸೇವಿಸುವ ಆಹಾರವೂ ಸಹ ಒಂದು ಕಾರಣವಾಗಿರುತ್ತದೆ. ಹೀಗಾಗಿ ನಾವು ಎಷ್ಟು ಪ್ರಮಾಣದ ಪೋಷಕಾಂಶಯುಕ್ತ ಆಹಾರ ಸೇವಿಸುತ್ತಿದ್ದೇವೆ ಎಂಬುದನ್ನು ನೆನಪಿನಲ್ಲಿಡುವುದು ಬಹಳ ಮುಖ್ಯವಾಗಿದೆ. ಅಲ್ಲದೆ ನಾವು ಸೇವಿಸು ಆಹಾರದಲ್ಲಿ ಎಲ್ಲಾ ವಿಟಮಿನ್‌ಗಳು, ಅಗತ್ಯ ಪೋಷಕಾಂಶಗಳು ಇವೆಯೇ ಎಂಬುದನ್ನು ಸಹ ಖಚಿತ ಮಾಡಿಕೊಳ್ಳಬೇಕು. ಹೀಗಾಗದಿದ್ದರೆ ನಮಗೆ ಹಲವು ಸಮಸ್ಯೆ ಭವಿಷ್ಯದಲ್ಲಿ ಎದುರಾಗಬಹುದು.

ಇನ್ನು ನಾವು ಸದೃಢ ಆರೋಗ್ಯಕ್ಕಾಗಿ ಮೊಳಕೆ ಕಾಳುಗಳನ್ನು ಸೇವಿಸುವ ಅಭ್ಯಾಸ ಇಟ್ಟುಕೊಂಡಿರುತ್ತೇವೆ. ಈ ಅಭ್ಯಾಸ ಇಲ್ಲದವರು ಮೊಳಕೆ ಕಾಳುಗಳ ಸೇವಿಸುವ ಅಭ್ಯಾಸ ಇನ್ನುಮುಂದೆ ಆದರೂ ಬೆಳೆಸಿಕೊಳ್ಳಿ. ಏಕೆಂದರೆ ಈ ಮೊಳಕೆ ಕಾಳುಗಳಲ್ಲಿ ಎಲ್ಲಿಲ್ಲದ ಪೋಷಕಾಂಶವಿರುತ್ತದೆ. ನಿಮ್ಮ ದೇಹಕ್ಕೆ ಅಗತ್ಯವಾದ ವಿಟಮಿನ್ ಜೊತೆ ಪೋಷಕಾಂಶಗಳು ಸಿಗುತ್ತವೆ. ಹಾಗಾದರೆ ಈ ಮೊಳಕೆ ಕಾಳುಗಳಿಂದಾಗುವ 5 ಪ್ರಮುಖ ಲಾಭವೇನು ಅನ್ನೋದನ್ನು ನಾವಿಂದು ತಿಳಿದುಕೊಳ್ಳೋಣ.
ಜೀರ್ಣ ಶಕ್ತಿ ಉತ್ತಮವಾಗುತ್ತದೆ
ನಿಮ್ಮ ಜೀರ್ಣ ಶಕ್ತಿ ಸರಿಯಾಗಿ ಕೆಲಸ ಮಾಡದಿದ್ದರೆ ಇಂದಿನಿಂದಲೇ ಮೊಳಕೆ ಬರಿಸಿದ ಕಾಳುಗಳ ಸೇವಿಸಲು ಆರಂಭಿಸಿ. ಏಕೆಂದರೆ ಇದು ಜೀರ್ಣಕ್ರಿಯೆಗೆ ಉತ್ತಮವಾದ ಗರಿಷ್ಠ ಫೈಬರ್ ಅನ್ನು ಹೊಂದಿರುತ್ತದೆ. ಇದರಿಂದ ನಿಮ್ಮ ಕರುಳಿನ ಆರೋಗ್ಯಕ್ಕೂ ಇದು ಸಹಕಾರಿಯಾಗಿದೆ.
ತೂಕವನ್ನು ಇಳಿಸಲು ಇದು ಸಹಕಾರಿ
ನಿಮ್ಮ ಹೆಚ್ಚುತ್ತಿರುವ ತೂಕದಿಂದ ನೀವು ತೊಂದರೆಗೊಳಗಾಗಿದ್ದರೆ, ಪ್ರತಿದಿನ ಬೆಳಿಗ್ಗೆ ಮೊಳಕೆಯೊಡೆದ ಕಾಳನ್ನು ತಿನ್ನಿರಿ. ಹೀಗೆ ಮಾಡುವುದರಿಂದ ನಿಮ್ಮ ತೂಕ ಬಹಳ ಬೇಗ ಕಡಿಮೆಯಾಗುತ್ತದೆ. ಏಕೆಂದರೆ ಮೊಳಕೆಯೊಡೆದ ಕಾಳಿನಲ್ಲಿ ಅತ್ಯಂತ ಕಡಿಮೆ ಕ್ಯಾಲೋರಿಗಳು ಕಂಡುಬರುತ್ತವೆ. ಇದರಲ್ಲಿ ನಾರಿನ ಪ್ರಮಾಣ ಮಾತ್ರ ಹೆಚ್ಚಾಗಿರುತ್ತದೆ. ಇದನ್ನು ಸೇವಿಸಿದರೆ ಹಸಿವಾಗುವುದು ಕಡಿಮೆಯಾಗುತ್ತದೆ. ಹಸಿವು ಕಡಿಮೆಯಾದರೆ ನೀವು ತಿನ್ನುವುದನ್ನು ಕಡಿಮೆ ಮಾಡುತ್ತೀರಿ. ಹೀಗಾದಾಗ ನಿಮ್ಮ ತೂಕವೂ ಸಹ ಕಡಿಮೆಯಾಗುತ್ತದೆ.
ಹೃದಯದ ಆರೋಗ್ಯಕ್ಕೆ ಬಹಳ ಉಪಯಕ್ತ
ಪ್ರತಿದಿನ ಬೆಳಗ್ಗೆ ಒಂದು ತಟ್ಟೆ ಮೊಳಕೆ ಬರಿಸಿದ ಕಾಳುಗಳನ್ನು ಸೇವಿಸಿದರೆ ಹೃದಯ ಆರೋಗ್ಯವಾಗಿರುತ್ತದೆ. ಇದು ಪ್ರೋಟೀನ್ ಮತ್ತು ಫೈಬರ್‌ನ ಉತ್ತಮ ಮೂಲವೆಂದು ಪರಿಗಣಿಸಲಾಗಿದೆ, ಇದು ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡದ ಮಟ್ಟವನ್ನು ಕಡಿಮೆ ಮಾಡುತ್ತದೆ.
ಕಣ್ಣುಗಳ ಆರೋಗ್ಯಕ್ಕೆ ಸಿದ್ಧೌಷಧ
ನಿಮ್ಮ ದೃಷ್ಟಿ ಸುಧಾರಿಸಲು ನೀವು ಬಯಸಿದರೆ, ಮೊಳಕೆಯೊಡೆದ ಕಾಳನ್ನು ಪ್ರತಿದಿನ ಸೇವಿಸಿ. ವಿಟಮಿನ್ ಎ ಇದರಲ್ಲಿ ಕಂಡುಬರುವ ಕಾರಣ, ಇದು ಲುಟೀನ್ ಮತ್ತು ಜಿಯಾಕ್ಸಾಂಥಿನ್‌ನ ಉತ್ತಮ ಮೂಲವಾಗಿದೆ. ಇವು ಉತ್ಕರ್ಷಣ ನಿರೋಧಕಗಳು, ಇದು ಕಣ್ಣುಗಳನ್ನು ಆರೋಗ್ಯವಾಗಿರಿಸುತ್ತದೆ.
ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚಿಸಲಿದೆ
ನಿಮ್ಮ ದೇಹದಲ್ಲಿ ರಕ್ತದ ಕೊರತೆಯಿದ್ದರೆ, ಮೊಳಕೆಯೊಡೆದ ಕಾಳನ್ನು ಪ್ರತಿದಿನ ಸೇವಿಸಲು ಪ್ರಾರಂಭಿಸಿ. ಏಕೆಂದರೆ ಇದರಲ್ಲಿ ಕಂಡುಬರುವ ಕಬ್ಬಿಣಾಂಶವು ಕೆಂಪು ರಕ್ತ ಕಣಗಳ ರಚನೆಗೆ ಸಹಾಯ ಮಾಡುತ್ತದೆ. ಇದರಿಂದಾಗಿ ದೇಹದಲ್ಲಿ ರಕ್ತವು ವೇಗವಾಗಿ ಉತ್ಪತ್ತಿಯಾಗುತ್ತದೆ. ಜೊತೆಗೆ ಹಿಮೋಗ್ಲೋಬಿನ್ ಹೆಚ್ಚಲು ಸಹ ಕಾರಣವಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications