Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಮಹಿಳೆಯರೇ, ಮೂಳೆಯನ್ನು ಬಲಪಡಿಸೋದಕ್ಕೆ ಈ ಆಹಾರ ಸೇವಿಸಿ!
ಮನುಷ್ಯನ ದೇಹದ ಎಲ್ಲಾ ಅಂಗಾಂಶಗಳು ಕೂಡ ತುಂಬಾನೇ ಮುಖ್ಯ. ನಾವು ತಿನ್ನುವ ಆಹಾರ ಶೈಲಿ ಇರಬಹುದು ಅಥವಾ ವ್ಯಾಯಾಮ ಮುಂತಾದವುಗಳು ನೇರವಾಗಿ ನಮ್ಮ ದೇಹದ ಮೇಲೆ ಪರಿಣಾಮವನ್ನು ಬೀರುತ್ತದೆ. ಅದ್ರಲ್ಲೂ ಮಹಿಳೆಯರಿಗೆ ಸ್ವಲ್ಪ ವಯಸ್ಸಾಗುತ್ತಿದ್ದಂತೆ ಅನೇಕ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.

ಅದ್ರಲ್ಲಿ ಮುಖ್ಯವಾಗಿ ಮಹಿಳೆಯರು ಮೂಳೆ ಆರೋಗ್ಯದ ಬಗ್ಗೆ ಹೆಚ್ಚಾಗಿ ತಲೆಕೆಡಿಸಿಕೊಳ್ಳಬೇಕಾಗುತ್ತದೆ. ನಮ್ಮ ಮೂಳೆಗಳು ಶಕ್ತಿಯನ್ನು ಕಳೆದುಕೊಂಡರೆ ನಮಗೆ ನಡೆದಾಡುವುದೇ ಕಷ್ಟ ಆಗಬಹುದು. ಯಾವಾಗ ಮೂಳೆಗಳಲ್ಲಿ ಕ್ಯಾಲ್ಸಿಯಂ ಕೊರತೆ ಉಂಟಾಗುತ್ತದೆಯೋ ಆಗ ಈ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.
ಮೂಳೆಗಳ ಆರೋಗ್ಯವನ್ನು ಬಲಪಡಿಸೋದಕ್ಕಾಗಿ ಕೆಲವೊಂದು ಆಹಾರಗಳನ್ನು ಸೇವನೆ ಮಾಡುವುದು ತುಂಬಾನೇ ಮುಖ್ಯವಾಗುತ್ತದೆ. ನಿಯಮಿತವಾಗಿ ಈ ಆಹಾರವನ್ನು ಸೇವನೆ ಮಾಡೋದ್ರಿಂದ ಮೂಳೆಗಳು ಶಕ್ತಿಯುತವಾಗುತ್ತದೆ. ಅಷ್ಟಕ್ಕೂ ಮೂಳೆಗಳಲ್ಲಿ ಕ್ಯಾಲ್ಸಿಯಂ ಕೊರತೆಯನ್ನು ನಿವಾರಿಸಲು ಎಂತಹ ಆಹಾರವನ್ನು ಸೇವಿಸಬೇಕು ಅನ್ನೋದನ್ನು ತಿಳಿಯೋಣ.
ಬಾದಾಮಿ
ಬಾದಾಮಿಯು ಉತ್ತಮ ಪ್ರಮಾಣದ ಕ್ಯಾಲ್ಸಿಯಂ ಅನ್ನು ಹೊಂದಿರುತ್ತದೆ. ಮತ್ತು ಇವುಗಳು ಮೊನೊಸ್ಯಾಕರೈಡ್‌ಗಳು ಮತ್ತು ಪ್ರೋಟೀನ್‌ಗಳ ಉತ್ತಮ ಮೂಲವಾಗಿದೆ. ಇವುಗಳಲ್ಲದೆ ಪಾಲಕ್, ಖರ್ಜೂರ, ಆಲೂಗಡ್ಡೆ ಮತ್ತು
ವಾಲ್‌ನಟ್ ಗಳನ್ನು ಸೇವನೆ ಮಾಡಬಹುದು.
ಹಾಲು ಮತ್ತು ಹಾಲಿನ ಉತ್ಪನ್ನಗಳು!
ಹಾಲು, ಮೊಸರು, ಚೀಸ್, ಮಜ್ಜಿಗೆ ಇತ್ಯಾದಿಗಳು ಕ್ಯಾಲ್ಸಿಯಂನ ಅಗತ್ಯ ಮೂಲಗಳಾಗಿವೆ. ಇವು ಮೂಳೆಗಳ ಬಲವನ್ನು ಹೆಚ್ಚಿಸುತ್ತವೆ. ಹೀಗಾಗಿ ಮಹಿಳೆಯರು ಬೇಕಾದಷ್ಟು ಪ್ರಮಾಣದಲ್ಲಿ ಇವುಗಳನ್ನು ಸೇವನೆ ಮಾಡಿದರೆ ಉತ್ತಮ.
ಬ್ರೊಕೊಲಿ
ಬ್ರೊಕೊಲಿಯು ಉತ್ತಮ ಕ್ಯಾಲ್ಸಿಯಂ ಮೂಲವಾಗಿದೆ. ಮತ್ತು ವಿಟಮಿನ್ ಕೆ, ವಿಟಮಿನ್ ಸಿ ಮತ್ತು ಫೈಬರ್ ಅನ್ನು ಸಹ ಹೊಂದಿದೆ. ಇದು ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ.
ಎಳ್ಳು
ಎಳ್ಳು ಬೀಜಗಳಲ್ಲಿ ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ ಇದೆ. ಇದು ಮೂಳೆಗಳನ್ನು ಬಲ ಪಡಿಸಲು ಸಹಾಯ ಮಾಡುತ್ತದೆ. ಮತ್ತು ಆರೋಗ್ಯವನ್ನು ಸುಧಾರಿಸುತ್ತದೆ.
ತೊಗರಿ ಬೇಳೆ
ತೊಗರಿ ಬೇಳೆಯಲ್ಲಿ ಕ್ಯಾಲ್ಸಿಯಂ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ. ಮತ್ತು ಇದು ಪ್ರೋಟೀನ್‌ನ ಉತ್ತಮ ಮೂಲವಾಗಿದೆ. ಇದು ಅತ್ಯುತ್ತಮ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.
ಮೂಳೆಯ ಆರೋಗ್ಯವನ್ನು ಬಲ ಪಡಿಸೋದಕ್ಕೆ ಮಹಿಳೆಯರು ಈ ಆಹಾರಗಳನ್ನು ನಿಯಮಿತವಾಗಿ ಸೇವನೆ ಮಾಡಿದ್ರೆ ತುಂಬಾನೇ ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
