Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ವರಮಹಾಲಕ್ಷ್ಮೀ ವ್ರತದ ಆಚರಣೆ ಹೇಗೆ?
ಶ್ರಾವಣದ ಎರಡನೇ ಶುಕ್ರವಾರದಂದು ಬರುವ ವರಮಹಾಲಕ್ಷ್ಮೀ ಹಬ್ಬವನ್ನು ಸ್ವಾಗತಿಸಲು ಜನರು ತುದಿಗಾಲಿನಲ್ಲಿ ನಿಂತಿದ್ದಾರೆ. ಮಾರ್ಕೆಟ್ ಗೆ ಹೋದರೆ ಹಬ್ಬಕ್ಕೆ ಬೇಕಾದ ಪೂಜಾ ಸಾಮಾಗ್ರಿಗಳೇ ಕಂಡು ಬರುತ್ತಿದೆ.
ಹಣ್ಣು, ಹೂವು, ತರಕಾರಿಗಳ ಮೇಲೆ ಉಳಿದ ಸಮಯಕ್ಕಿಂತ ಸ್ವಲ್ಪ ಜಾಸ್ತಿ ಅನಿಸಿದರೂ ಹೂ ಮತ್ತು ಹಣ್ಣು ತಂದೇ ತರುತ್ತೇವೆ. ಹೀಗೆ ಭಾಗ್ಯದ ಲಕ್ಷ್ಮಿಯನ್ನು ಮನೆಗೆ ತುಂಬಿಸಿಕೊಳ್ಳುವ ಸಡಗರದಲ್ಲಿ ಮನೆಮನೆಗಳಲ್ಲಿ ಸಂಭ್ರಮದ ವಾತಾವರಣ ಕಂಡು ಬರುತ್ತಿದೆ.

ವರಮಹಾಲಕ್ಷ್ಮೀ ಹಬ್ಬದ ಸಮಯದಲ್ಲಿ ವೃತ ಮಾಡಲಾಗುವುದು. ಹೆಸರೇ ಸೂಚಿಸುವಂತೆ ಮನೆಗೆ ಐಶ್ವರ್ಯ ಬರುವಂತೆ ವರವನ್ನು ನೀಡು ತಾಯಿ ಎಂದು ಲಕ್ಷ್ಮಿ ದೇವಿಯ ವ್ರತ ಮಾಡಲಾಗುವುದು. ಈ ವ್ರತವನ್ನು ಶ್ರಾವಣ ಮಾಸದ ಶುಕ್ಲ ಪಕ್ಷದ ಶುಕ್ರವಾರ ಮಾಡಲಾಗುವುದು. ಈ ಸಮಯದಲ್ಲಿ ಮನೆಯನ್ನು ತಳಿರು ತೋರಣಗಳಿಂದ ಅಲಂಕರಿಸಲಾಗುವುದು.
ನಂತರ ವ್ರತ ಮಾಡುವಾಗ ಈ ಕೆಳಗಿನ ಕ್ರಮಗಳನ್ನು ಅನುಸರಿಸಲಾಗುವುದು.
ವರಮಹಾಲಕ್ಷ್ಮೀ ಹಬ್ಬದ ದಿನ ಬೆಳಿಗ್ಗೆ ಎದ್ದು ಮಂಗಳ ಸ್ನಾನ ಮಾಡಬೇಕು. ನಂತರ ವ್ರತ ಮಾಡುವವರು ಪೂಜೆ ಮಾಡುವ ಸ್ಥಳವನ್ನು ಸ್ವಚ್ಚಗೊಳಿಸಿ, ಬಾಳೆ ಕಂದು, ಮಾವಿನ ಎಲೆಗಳಿಂದ ಸಿಂಗರಿಸಿ. ಅಷ್ಟದಳ ಪದ್ಮದ ರಂಗೋಲಿ ಹಾಕಬೇಕು. ಇದರ ಮೇಲೆ ಕಲಶ ಸ್ಥಾಪಿಸಬೇಕು. ಒಂದು ಚೊಂಬಿನಲ್ಲಿ ಸ್ವಲ್ಪ ನೀರು/ಅಕ್ಕಿ ಹಾಕಿ, ಜೊತೆಗೆ ಅರಿಶಿಣದ ಕೊಂಬು, ಅಡಿಕೆ, ಬೆಳ್ಳಿ ನಾಣ್ಯ ಇಟ್ಟು ಅದರ ಮೇಲೆ ಅರಿಶಿಣ ಕುಂಕುಮ ಸವರಿದ ತೆಂಗಿನಕಾಯಿ ಇಟ್ಟು, ಇದರ ಮೇಲೆ ಮುಖದ ಆಕಾರದ ಚಿತ್ರ ಬರೆಯಬಹುದು ಅಥವಾ ಲಕ್ಷ್ಮಿ ದೇವಿಯ ಬೆಳ್ಳಿಯ ಮುಖವಾಡ ಇದ್ದರೆ ಅದನ್ನು ಈ ತೆಂಗಿನಕಾಯಿಗೆ ಜೋಡಿಸಬೇಕು.
ಕಲಶದ ಬಾಯಿಗೆ ವೀಳ್ಯದ ಎಲೆ , ಮಾವಿನ ಎಲೆಗಳನ್ನು ಇಡಬೇಕು. ಈ ಕಲಶವನ್ನು ಅಕ್ಕಿ ಹರಡಿರುವ ತಟ್ಟೆಯ ಮೇಲೆ ಇಡಬೇಕು. ಈ ತಟ್ಟೆಯನ್ನು ಅಷ್ಟದಳ ರಂಗೋಲಿಯ ಮೇಲೆ ಇಡಬೇಕು. ಈ ಕಲಶಕ್ಕೆ ಹೊಸ ರವಿಕೆ ಬಟ್ಟೆ ಅಥವಾ ಸೀರೆ ಉಡಿಸಿ , ವಡವೆ ಹಾಕಿ ಅಲಂಕಾರ ಮಾಡಬೇಕು.
ನಂತರ ಮುತ್ತೈದೆಯರನ್ನು ಕರೆದು ಪೂಜೆ ಮಾಡಿ ಅವರಿಗೆ ತಾಂಬೂಲ ನೀಡಲಾಗುವುದು. ವ್ರತ ಮಾಡುವವರು ಪೂಜೆ ಮುಗಿದ ನಂತರ ಆಹಾರ ಸೇವಿಸುತ್ತಾರೆ. ಮದುವೆ ಮಾಡಿ ಕೊಟ್ಟ ಹೆಣ್ಣು ಮಗಳು ತವರಿಗೆ ಬಂದಿರುತ್ತಾಳೆ, ಈ ಸಂದರ್ಭದಲ್ಲಿ ತಾಯಿ ಬಾಗಿನ ಕೊಟ್ಟು ಅವಳನ್ನು ಹರಿಸುತ್ತಾಳೆ. ಈ ವ್ರತದಲ್ಲಿ ಹಬ್ಬದ ಅಡುಗೆಯನ್ನು ಮಾಡಿ ಮನೆಮಂದಿಯೆಲ್ಲ ಸೇರಿ ಬಹಳ ಸಂಭ್ರಮದಿಂದ ಈ ಹಬ್ಬ ಆಚರಿಸಲಾಗುವುದು.
ಕನ್ನಡ ಬೋಲ್ಡ್ ಸ್ಕೈ ಓದುಗರಿಗೆ ವರಮಹಾಲಕ್ಷ್ಮೀ ಹಬ್ಬದ ಶುಭಾಶಯಗಳು.



Click it and Unblock the Notifications
