Latest Updates
-
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್! -
ನವರಾತ್ರಿ ಸಂಭ್ರಮ: ಅತ್ತೆ-ಮಾವಂದಿರ ಮನೆಗೆ ಹೋಗುವಾಗ ನವದಂಪತಿಗಳು ಮರೆಯದೆ ಪಾಲಿಸಬೇಕಾದ ಶಿಷ್ಟಾಚಾರಗಳಿವು! -
ದೆಹಲಿ ಮಳೆ ಅಲರ್ಟ್: ಮನೆಯಲ್ಲಿ ನೀರು ಸೋರಿಕೆ ತಡೆಯಲು 20 ನಿಮಿಷದ ಈ ಕೆಲಸ ಮಾಡಿ! -
ಮುಂಬೈನಲ್ಲಿ ಬಿಸಿಲಿನ ಅಬ್ಬರ: ಯೆಲ್ಲೋ ಅಲರ್ಟ್ ಘೋಷಣೆ, ಆರೋಗ್ಯ ಕಾಪಾಡಿಕೊಳ್ಳಲು ಈ ಕ್ರಮಗಳನ್ನು ತಪ್ಪದೇ ಪಾಲಿಸಿ -
ವಡೋದರಾದಲ್ಲಿ ವಾಯುಪಡೆ ಮುಖ್ಯಸ್ಥರ ಗರ್ಬಾ ನೃತ್ಯ: ವೈರಲ್ ವಿಡಿಯೋದಲ್ಲಿ ಸಿಂಗ್ ಅವರ ಸರಳತೆ ನೋಡಿ!
ಆಹಾ ಏನು ಚೆಂದ ಜಿಲೇಬಿ ಹೂಗಳ ಅಂದ!

ಈ ಹೂಬಳ್ಳಿ ಚಪ್ಪರದಲ್ಲೋ, ಕಾಂಪೌಂಡ್‌ನಲ್ಲೋ ಹಬ್ಬಿ ಹೂಬಿಟ್ಟಿತೆಂದರೆ ಅದರ ಸೌಂದರ್ಯವನ್ನು ಸವಿಯುವುದೇ ಒಂದು ರೀತಿಯ ಮಜಾ. ಹಾಗಾಗಿ ಇದನ್ನು ಮನೆಯ ಮುಂದಿನ ಚಿನ್ನದ ಮಳೆಗೆರೆವ ಹೂಬಳ್ಳಿ ಎಂದರೂ ತಪ್ಪಾಗಲಾರದು. ಸದಾ ಹೂಬಿಟ್ಟು ಕಂಗೊಳಿಸುತ್ತಾ ಮನೆಗೆ, ಉದ್ಯಾನವನಕ್ಕೆ ಮೆರಗು ತರುವ ಈ ಹೂಬಳ್ಳಿ ಮೂಲತಃ ಬ್ರೆಜಿಲ್ ದೇಶದ್ದು. ಉಷ್ಣವಲಯ ಹಾಗೂ ಸಮಶೀತೋಷ್ಣವಲಯದಲ್ಲಿ ಹುಲುಸಾಗಿ ಬೆಳೆಯುತ್ತದೆ.
ನಮ್ಮ ದೇಶದಲ್ಲಿ ಕರ್ನಾಟಕ, ಕೇರಳ, ತಮಿಳುನಾಡುಗಳಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ದಕ್ಷಿಣ ಅಮೆರಿಕಾದಲ್ಲಿ ಪಿರೋಸ್ಟೆಜಿಯಾ ವೀನ್ ಸ್ಟಾಗೆ ಸೇರಿದ ಐದು ತಳಿಗಳಿವೆ. ಮನೆಯ ಮುಂದೆ ಚಪ್ಪರ ಹಾಕಿ ಹಬ್ಬಿಸಿದ್ದೇ ಆದರೆ ಸದಾ ಹೂಬಿಟ್ಟು ಮನೆಗೆ ಶೋಭೆ ತರುವುದರೊಂದಿಗೆ ತಂಪು ವಾತಾವರಣವನ್ನು ನಿರ್ಮಾಣ ಮಾಡುತ್ತದೆ. ಇದನ್ನು ಬೃಂದಾವನಗಳಲ್ಲಿ ಸುಂದರವಾಗಿ ವಿವಿಧ ವಿನ್ಯಾಸದಲ್ಲಿ ಹಬ್ಬಿಸಲಾಗುತ್ತದೆ. ಇದು ಹೂಬಿಟ್ಟಾಗ ತನ್ನ ಚೆಲುವಿನಿಂದ ದೂರದಿಂದಲೇ ಪುಷ್ಪಪ್ರೇಮಿಗಳನ್ನು ತನ್ನತ್ತ ಸೆಳೆಯುತ್ತದೆ.
ಪಿರೋಸ್ಟೆಜಿಯಾ ವೀನ್ ಸ್ಟಾ ಚಪ್ಪರ ಹಾಗೂ ಕಾಂಪೌಂಡ್‌ನ್ನು ಹುಲುಸಾಗಿ ಹಬ್ಬಿ ಬೆಳೆಯಲು ನೇರವಾಗಿ ಬೀಳುವ ಸುರ್ಯನ ಬೆಳಕು ಮತ್ತು ಅಧಿಕ ತೇವಾಂಶದ ಮಣ್ಣು ಬೇಕು. ಬಳ್ಳಿಯು ಹಬ್ಬುತ್ತಾ ಸಾಗಲು ಮರಿ ಬಳ್ಳಿಗಳು ಸಹಾಯ ಮಾಡುತ್ತವೆ. ಬಳ್ಳಿಯಲ್ಲಿ ಎರಡು ಅಥವಾ ಮೂರು ಎಲೆಗಳು ಮತ್ತೆ ಕಾಂಡ ಎಲೆಗಳು ಹೀಗೆ ಇದ್ದು ಇವು ಬಳ್ಳಿ ಹಬ್ಬಲು ಅಂದರೆ ನಾವು ನಿರ್ಮಿಸಿದ ಆಧಾರವನ್ನು ಆಶ್ರಯಿಸಿಕೊಂಡು ಬೆಳೆಯಲು ಸಹಾಯ ಮಾಡುತ್ತವೆ. ಸಾಮಾನ್ಯವಾಗಿ ಜನವರಿಯಿಂದ ಏಪ್ರಿಲ್ ನಡುವೆ ಬಳ್ಳಿಯ ತುಂಬಾ ಕಡು ಕೇಸರಿ ಬಣ್ಣದ ತುತ್ತೂರಿ ಆಕಾರದ ಹೂಗಳು ಗೊಂಚಲು ಗೊಂಚಲಾಗಿ ಬಳ್ಳಿ ತುಂಬಾ ಅರಳಿ ಕಂಗೊಳಿಸುವುದರೊಂದಿಗೆ ನೋಡುಗರನ್ನು ತನ್ನತ್ತ ಸೆಳೆಯುತ್ತವೆ.



Click it and Unblock the Notifications
