Latest Updates
-
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್!
ವಾಸ್ತು ಸಲಹೆ: ಮನೆಯಲ್ಲಿ ಮಣ್ಣಿನ ಮಡಿಕೆ ಏಕೆ ಇಡಲೇಬೇಕು ಮತ್ತು ಯಾವ ದಿಕ್ಕಿನಲ್ಲಿ ಇಟ್ಟರೆ ಶುಭ?
ಮಣ್ಣಿನ ಮಡಿಕೆ ಇತ್ತೀಚಿನ ದಿನಗಳಲ್ಲಿ ಮನೆಗಳಲ್ಲಿ ಇಡುವುದು ಬಹಳ ಆಪರೂಪ. ಆದರೆ ಹಿಂದೆಲ್ಲಾ ಮಣ್ಣಿನ ಮಡಿಕೆಯಲ್ಲೇ ಅಡುಗೆ ತಯಾರಿಸುವುದು, ಮಡಿಕೆಯ ನೀರನ್ನೇ ಕುಡಿಯುವುದು. ಹಿಂದಿನಿಂದಲೂ ಈಗಲು ಸಹ ಮಣ್ಣನ್ನು ಮಂಗಳದ ಸಂಕೇತ ಎನ್ನಲಾಗುತ್ತದೆ. ಕುಂಬಾರಿಕೆ ಸಂತೋಷ, ಸಮೃದ್ಧಿ ಮತ್ತು ಅದೃಷ್ಟದ ಸಂಕೇತವಾಗಿದೆ.

ಮನೆಯಲ್ಲಿ ಮಣ್ಣಿನ ಮಡಿಕೆ ಇಡುವುದು ಸಂತೋಷ, ಸಂಪತ್ತು ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಂಲಾಗುತ್ತದೆ. ವಾಸ್ತುಸಲಹೆಯ ಪ್ರಕಾರ ಮನೆಯಲ್ಲಿ ಮಣ್ಣಿನ ಮಡಿಕೆ ಏಕೆ ಇಡಬೇಕು, ಯಾವ ದಿಕ್ಕಿನಲ್ಲಿ ಇಡಬೇಕು, ಇದರ ಪ್ರಯೋಜನಗಳೇನು ಮುಂದೆ ನೋಡೋಣ:

ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಬರುತ್ತದೆ
ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಮಣ್ಣಿನ ಪಾತ್ರೆ ಇರಬೇಕು. ಮಣ್ಣನ್ನು ಮಂಗಳ ಗ್ರಹದ ಸಂಕೇತವೆಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಮಣ್ಣಿನ ಪಾತ್ರೆಯ ನೀರನ್ನು ಸೇವಿಸುವುದರಿಂದ ಧೈರ್ಯ, ಶೌರ್ಯ ಮತ್ತು ಶಕ್ತಿ ಬರುತ್ತದೆ. ಹೂಜಿಯ ನೀರು ಬುಧ ಮತ್ತು ಚಂದ್ರನಿಗೆ ಸಂಬಂಧಿಸಿದೆ, ಇದರಿಂದಾಗಿ ಮನಸ್ಸು ಯಾವಾಗಲೂ ಶಾಂತವಾಗಿರುತ್ತದೆ ಮತ್ತು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸುತ್ತದೆ.

ಮಣ್ಣಿನ ಪಾತ್ರೆಗಳನ್ನು ಯಾವ ದಿಕ್ಕಿನಲ್ಲಿ ಇಡಬೇಕು
ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಈಶಾನ್ಯ ದಿಕ್ಕಿನಲ್ಲಿ ಮಣ್ಣಿನ ಮಡಕೆಯನ್ನು ಇಡುವುದು ಯಾವಾಗಲೂ ಮಂಗಳಕರ. ಇದದಿಂದಾಗಿ, ಮನೆಯ ವಾತಾವರಣವು ಸಕಾರಾತ್ಮಕವಾಗಿರುತ್ತದೆ. ಮಣ್ಣಿನ ಮಡಕೆಯ ಹೊರತಾಗಿ, ಮನೆಯ ಛಾವಣಿಯ ಮೇಲೂ ಹಕ್ಕಿಗಳಿಗೆ ಮಣ್ಣಿನ ಮಡಕೆಯಲ್ಲಿ ಆಹಾರವನ್ನು ಇಡಿ. ಇದು ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕೊನೆಗೊಳಿಸುತ್ತದೆ ಮತ್ತು ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ. ಪಕ್ಷಿಗಳಿಗೆ ಮಣ್ಣಿನ ಮಡಕೆ ಇಡುವುದರಿಂದ ದೇವತೆಗಳು ಮನೆಯಲ್ಲಿ ನೆಲೆಸುತ್ತಾರೆ.

ತುಳಸಿ ಹಾಸಿಗೆಯ ಬಳಿ ದೀಪವನ್ನು ಹಚ್ಚಿ
ವಾಸ್ತು ಶಾಸ್ತ್ರದ ಪ್ರಕಾರ, ತುಳಸಿ ಮಾತೆಯನ್ನು ಪೂಜಿಸುವ ಸಮಯದಲ್ಲಿ, ಅವಳ ಬಳಿ ಮಣ್ಣಿನ ದೀಪವನ್ನು ಬೆಳಗಿಸಿ. ಈ ಕಾರಣದಿಂದಾಗಿ, ಮನೆಯಲ್ಲಿ ಧನಾತ್ಮಕ ಶಕ್ತಿಯು ಹರಡುತ್ತದೆ ಮತ್ತು ಲಕ್ಷ್ಮಿ ದೇವಿಯು ಸಂತೋಷವಾಗಿರುತ್ತಾಳೆ ಮತ್ತು ಅವಳ ಆಶೀರ್ವಾದ ನಿಮ್ಮ ಮೇಲಿರುತ್ತದೆ. ಮಣ್ಣಿನ ದೀಪವನ್ನು ಬೆಳಗಿಸುವುದರಿಂದ ಮನೆಯಲ್ಲಿ ದುಷ್ಟ ಶಕ್ತಿಗಳು ನಾಶವಾಗುತ್ತವೆ, ಜೊತೆಗೆ ಧನಾತ್ಮಕ ಶಕ್ತಿಯ ಹರಿವು ಹೆಚ್ಚಾಗುತ್ತದೆ.

ಮಗುವಿಗೆ ನೀರು ಕುಡಿಸಿ
ನೀವು ಮಣ್ಣಿನ ಮಡಕೆಯನ್ನು ಮನೆಗೆ ತರುವ ಮೊದಲು, ಮನೆಯಲ್ಲಿ ಯಾವುದೇ ಮಗುವಿಗೆ ಮಡಿಕೆಯ ನೀರು ಕುಡಿಸಿ. ಇದು ಮನೆಗೆ ಸಮೃದ್ಧಿಯನ್ನು ತರುತ್ತದೆ ಮತ್ತು ಪೂರ್ವಜರ ಆಶೀರ್ವಾದ ನಿಮ್ಮ ಮೇಲಿರುವಂತೆ ಮಾಡುತ್ತದೆ.



Click it and Unblock the Notifications
