Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಅರ್ಜುನ ಪ್ರಶಸ್ತಿ ಗೆದ್ದ ಮೊದಲ ಮಹಿಳಾ ಕ್ರೀಡಾಪಟು..! ಯಾರು ಈ ದಿವ್ಯಾಕೃತಿ ಗೊತ್ತಾ?
ಕುದುರೆ ಸವಾರಿಯಲ್ಲಿ 41 ವರ್ಷಗಳ ಸುದೀರ್ಘ ಯಶಸ್ಸಿನ ನಂತರ ದೇಶಕ್ಕೆ ಐತಿಹಾಸಿಕ ಚಿನ್ನದ ಪದಕ ಗೆದ್ದುಕೊಟ್ಟ ಭಾರತದ ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್ ತಂಡದ ಸದಸ್ಯೆ ರಾಜಸ್ಥಾನದ ದಿವ್ಯಾಕೃತಿ ಸಿಂಗ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಿದರು.
ಏಷ್ಯನ್ ಗೇಮ್ಸ್ 2023ರಲ್ಲಿ ಅವರ ಅತ್ಯುತ್ತಮ ಪ್ರದರ್ಶನಕ್ಕಾಗಿ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಗೌರವ ಪಡೆದ ಏಕೈಕ ಭಾರತೀಯ ಮಹಿಳೆ ಎಂಬ ಕೀರ್ತಿಗೆ ಅವರು ಭಾಜನರಾಗಿದ್ದಾರೆ. ಹಾಗಾದರೆ ಯಾರು ಈ ದಿವ್ಯಾಕೃತಿ? ಆಕೆಯ ಸಾಧನೆ ಏನು? ಈ ಎಲ್ಲಾ ಮಾಹಿತಿ ಇಲ್ಲಿದೆ ನೋಡಿ.
ದಿವ್ಯಾಕೃತಿ ಸಿಂಗ್ ರಾಥೋಡ್ ಮೂಲತಃ ನಾಗೌರ್‌ನವರು, ಅವರು ಪ್ರಸ್ತುತ ರಾಜಸ್ಥಾನದ ಜೈಪುರದಲ್ಲಿ ವಾಸಿಸುತ್ತಿದ್ದಾರೆ. ದಿಲ್ಲಿ ವಿಶ್ವವಿದ್ಯಾನಿಲಯದಲ್ಲಿ ಮನಃಶಾಸ್ತ್ರ ಓದುತ್ತಿದ್ದಾಗ ಸ್ಪರ್ಧೆಯಲ್ಲಿ ಭಾಗವಹಿಸಲು ಕುದುರೆ ಇಲ್ಲದ ಕಾರಣ ದಿವ್ಯಾಕೃತಿ ಎರಡು ವರ್ಷಗಳ ಕಾಲ ಯಾವುದೇ ಸ್ಪರ್ಧೆಯಲ್ಲಿ ಭಾಗವಹಿಸಿರಲಿಲ್ಲ.

ಆದರೆ ಆಕೆಯ ತಂದೆ ಮಗಳ ಪ್ರತಿಭೆಯನ್ನು ಗುರುತಿಸಿ ಜರ್ಮನಿಯಿಂದ ಕುದುರೆಯನ್ನು ಖರೀದಿಸಿ ಪ್ರೋತ್ಸಾಹಿಸಿದರು. ಕುದುರೆಯ ಸಹಾಯದಿಂದ, ಅವರು ತಮ್ಮ ಹೆಚ್ಚಿನ ತರಬೇತಿಯನ್ನು ಪೂರ್ಣಗೊಳಿಸಿದರು, ಇದರ ಪರಿಣಾಮವಾಗಿ ಭಾರತ ತಂಡವು ಏಷ್ಯನ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಪ್ರದರ್ಶನವನ್ನು ನೀಡಲು ಸಾಧ್ಯವಾಗಿತ್ತು.
ಆನುವಂಶಿಕವಾಗಿ ಕುದುರೆ ಸವಾರಿ
ದಿವ್ಯಾಕೃತಿ ಅತ್ಯುತ್ತಮ ಕುದುರೆ ಸವಾರಿ ಪಟು. ಅವರು ಈ ಕ್ರೀಡೆಯನ್ನು ಆನುವಂಶಿಕವಾಗಿ ಪಡೆದಿದ್ದಾರೆ. ಕುಟುಂಬದಲ್ಲಿ ಕುದುರೆ ಸವಾರಿಯ ಮೊದಲ ಪಾಠವನ್ನು ಪಡೆದರು. ದಿವ್ಯಾಕೃತಿಯ ತಂದೆ ವಿಕ್ರಮ್ ಸಿಂಗ್ ರಾಥೋಡ್ ಕೂಡ ಈ ಕ್ರೀಡೆಯಲ್ಲಿ ವಿಶೇಷ ಗುರುತನ್ನು ಹೊಂದಿದ್ದಾರೆ. ಅವರು ರಾಜಸ್ಥಾನ ಪೋಲೋ ಅಸೋಸಿಯೇಷನ್ ಕ್ಲಬ್‌ನಲ್ಲಿ ಕುದುರೆ ಸವಾರಿ ಮಾಡಿರುವ ಅನುಭವ ಹೊಂದಿದ್ದಾರೆ.
ಇಲ್ಲಿಂದ ತರಬೇತಿ ಪಡೆದರು
ದಿವ್ಯಾಕೃತಿ ದೆಹಲಿ ವಿಶ್ವವಿದ್ಯಾಲಯದ ಜೀಸಸ್ ಮತ್ತು ಮೇರಿ ಕಾಲೇಜಿನಲ್ಲಿ ಓದುತ್ತಿದ್ದಾಗ ಯುರೋಪ್ (ನೆದರ್ಲ್ಯಾಂಡ್ಸ್, ಬೆಲ್ಜಿಯಂ, ಜರ್ಮನಿ, ಆಸ್ಟ್ರಿಯಾ) ನಲ್ಲಿ ತರಬೇತಿ ಪಡೆಯುತ್ತಿದ್ದರು. ಅಷ್ಟೇ ಅಲ್ಲ, ವಿಶ್ವದ ಕುದುರೆ ಸವಾರಿ ರಾಜಧಾನಿ ಎನಿಸಿಕೊಂಡಿರುವ ಅಮೆರಿಕದ ವೆಲ್ಲಿಂಗ್ಟನ್-ಫ್ಲೋರಿಡಾದಲ್ಲಿ ತರಬೇತಿಯನ್ನೂ ಪಡೆದಿದ್ದಾರೆ.
ದಿವ್ಯಾಕೃತಿ ಸಿಂಗ್ ಕಳೆದ ಕೆಲವು ವರ್ಷಗಳಿಂದ ಜರ್ಮನಿಯಲ್ಲಿ ಕುದುರೆ ಸವಾರಿ ತರಬೇತಿ ಪಡೆಯುತ್ತಿದ್ದಾರೆ. ಈ ಹಿಂದೆ, 2022 ರ ಏಷ್ಯನ್ ಗೇಮ್ಸ್‌ಗೆ ಆಯ್ಕೆಯಾಗದಿದ್ದಾಗ ಅವರು ಸಾಕಷ್ಟು ಎದೆಗುಂದಿದ್ದರು, ಆದರೆ ಬಳಿಕ ಕಠಿಣ ಅಭ್ಯಾಸದ ಬಳಿಕ ಮತ್ತೆ ಆಯ್ಕೆಯಾದರು. ಮೊದಲು ಚಿನ್ನದ ಪದಕವನ್ನು ಗೆದ್ದರು ಮತ್ತು ಈಗ ಅರ್ಜುನ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ದೇಶಕ್ಕೆ ಗೌರವ ತಂದಿದ್ದಾರೆ.
ಯಾರಿಗೆಲ್ಲಾ ಪ್ರಶಸ್ತ ನೀಡಲಾಗಿದೆ.
ಅರ್ಜುನ ಪ್ರಶಸ್ತಿ ಪಡೆದವರಲ್ಲಿ 12 ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಸೇರಿದ್ದಾರೆ. ಮೊಹಮ್ಮದ್ ಶಮಿ (ಕ್ರಿಕೆಟ್) ಅಜಯ್ ರೆಡ್ಡಿ (ಅಂಧರ ಕ್ರಿಕೆಟ್), ಓಜಸ್ ಪ್ರವೀಣ್ ಡಿಯೋಟಾಲೆ (ಆರ್ಚರಿ), ಅದಿತಿ ಗೋಪಿಚಂದ್ ಸ್ವಾಮಿ (ಆರ್ಚರಿ), ಶೀತಲ್ ದೇವಿ (ಪ್ಯಾರಾ ಆರ್ಚರಿ), ಪಾರುಲ್ ಚೌಧರಿ ಮತ್ತು ಮುರಳಿ ಶ್ರೀಶಂಕರ್ (ಅಥ್ಲೆಟಿಕ್ಸ್), ಮೊಹಮ್ಮದ್ ಹುಸಾಮುದ್ದೀನ್ (ಬಾಕ್ಸಿಂಗ್), ಆರ್. ವೈಶಾಲಿ (ಚೆಸ್), ದಿವ್ಯಾಕೃತಿ ಸಿಂಗ್ ಮತ್ತು ಅನುಷ್ ಅಗರ್ವಾಲಾ (ಈಕ್ವೆಸ್ಟ್ರಿಯನ್), ದೀಕ್ಷಾ ದಾಗರ್ (ಗಾಲ್ಫ್), ಕ್ರಿಶನ್ ಬಹದ್ದೂರ್ ಪಾಠಕ್ (ಹಾಕಿ), ಸುಶೀಲಾ ಚಾನು (ಹಾಕಿ), ಪಿಂಕಿ (ಲಾನ್ ಬಾಲ್), ಐಶ್ವರಿ ಪ್ರತಾಪ್ ಸಿಂಗ್ ತೋಮರ್ (ಶೂಟಿಂಗ್), ಅಂತಿಮ್ ಪಂಘಲ್ (ಕುಸ್ತಿ), ಐಹಿಕಾ ಮುಖರ್ಜಿ (ಟೇಬಲ್ ಟೆನಿಸ್).



Click it and Unblock the Notifications
