Latest Updates
-
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ!
ಗೋವರ್ಧನ ಪೂಜೆ 2021: ದಿನಾಂಕ, ಶುಭ ಮುಹೂರ್ತ, ಪೂಜಾವಿಧಿ
ಈ ಆಚರಣೆಯಂದು ಶ್ರೀಕೃಷ್ಣನ ಮಹಿಮೆಯನ್ನು ಕೊಂಡಾಡಲಾಗುವುದು. ಇಂದ್ರನ ಕೋಪದಿಂದ ವೃಂದಾವನದ ಜನರನ್ನು ರಕ್ಷಿಸಲು ಶ್ರೀ ಕೃಷ್ಣನು ಗೋವರ್ಧನ ಗಿರಿಯನ್ನು ಎತ್ತಿದ ಲೀಲೆಯನ್ನು ಕೊಂಡಾಡಲು ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಗೋವರ್ಧನ ಪೂಜೆಯನ್ನು ಆಚರಿಸಲಾಗುತ್ತದೆ. ಈ ವರ್ಷ ನವೆಂಬರ್ 5ಕ್ಕೆ ಗೋವರ್ಧನ ಪೂಜೆ ಆಚರಿಸಲಾಗುವುದು.

ಗೋವರ್ಧನ ಪೂಜೆಗೆ ಶುಭ ಮೂಹೂರ್ತ
ಗೋವರ್ಧನ ಪೂಜೆಗೆ ಪ್ರಾತಃಕಾಲ: ಬೆಳಗ್ಗೆ 06:36ರಿಂದ 08:47ರವರೆಗೆ
ಗೋವರ್ಧನ ಪೂಜೆಗೆ ಸಾಯಂಕಾಲದ ಮುಹೂರ್ತ: ಮಧ್ಯಾಹ್ನ 03:22ರಿಂದ 05:33ರವರೆಗೆ
ಪ್ರತಿಪಾದ ತಿಥಿ ಪ್ರಾರಂಭ: 5ನೇ ತಾರೀಕು ಬೆಳಗ್ಗಿನ ಜಾವ 02:44ಕ್ಕೆ
ಪ್ರತಿಪಾದ ತಿಥಿ ಮುಕ್ತಾಯ: ನವೆಂಬರ್ 5, ರಾತ್ರಿ 11:14ಕ್ಕೆ

ಗೋವರ್ಧನ ಪೂಜೆಯ ಹಿಂದಿರುವ ಪೌರಾಣಿಕ ಕತೆ
ವೃಂದಾವನದ ಜನರು ಇಂದ್ರಯಜ್ಞಕ್ಕೆ ಸಿದ್ಧರಾಗುತ್ತಿದ್ದರು. ಇದನ್ನು ತಿಳಿದ ಶ್ರೀ ಕೃಷ್ಣ ಪರಮಾತ್ಮನನ್ನು ಇಂದ್ರನನ್ನು ಪೂಜಿಸುವುದನ್ನು ಬಿಟ್ಟು ಅವರು ಗೋವರ್ಧನ ಗಿರಿಯನ್ನು ಆರಾಧಿಸಬೇಕೆಂದು ಸೂಚಿಸಿದನು. ಅದರಂತೆ ವೃಂದಾವನದ ಜನರು ಗೋವರ್ಧನ ಗಿರಿಯನ್ನು ಪೂಜಿಸಲು ನಿಶ್ಚಿಯಿಸಿದರು. ಇದರಿಂದ ಕೋಪಗೊಂಡ ಇಂದ್ರನು ಕೋಪದಿಂದ ಭಾರಿ ಮಳೆ ಸುರಿಸಲು ಮೋಡಗಳಿಗೆ ಆಜ್ಞಾಪಿಸಿದನು. ಆಗ ಕೃಷ್ಣನು ತನ್ನ ಕಿರು ಬೆರಳಿನಿಂದ ಗೋವರ್ಧನ ಗಿರಿಯನ್ನು ಎತ್ತಿ ಹಿಡಿದು ವೃಂದಾವನದ ಎಲ್ಲ ನಿವಾಸಿಗಳಿಗೆ ಅದರ ಕೆಳಗೆ ಆಶ್ರಯ ನೀಡಿದನು.
ಇದರಿಂದಾಗಿ ಇಂದ್ರನಿಗೆ ತಾನು ಮಾಡಿದ ಅರಿವಾಗಿ ಕೃಷ್ಣನ ಬಳಿ ಬಂದು ಕ್ಷಮೆ ಯಾಚಿಸಿದ. ದೇವೋತ್ತಮನಿಗೆ ಶರಣಾದ ಮ ಹಾಗೂ ಭಕ್ತಿಯಿಂದ ಸೇವೆ ಸಲ್ಲಿಸುವ ಭಕ್ತರು ಎಲ್ಲ ಹೊಣೆಗಾರಿಕೆಯಿಂದ ಮುಕ್ತರು ಮತ್ತು ಅವರು ಲೌಕಿಕ ಅನುಕೂಲಕ್ಕಾಗಿ ಯಾವ ದೇವತೆಯನ್ನೂ ಪೂಜಿಸುವ ಅಗತ್ಯ ಇಲ್ಲ ಎನ್ನುವ ಅಂಶವನ್ನು ಕೃಷ್ಣನು ಹೇಳಿದನು. ಇದು ಗೋವರ್ಧನ ಲೀಲೆ ಎಂದು ಪ್ರಸಿದ್ಧಿಯಾಗಿದೆ.

ಪೂಜಾ ವಿಧಾನ
* ಗೋವರ್ಧನ ಪೂಜೆಯ ಹಬ್ಬವನ್ನು ಕಾರ್ತಿಕ ಮಾಸದ ಶುಕ್ಲ ಪಕ್ಷದ ಪ್ರತಿಪಾದದ ದಿನದಂದು ಆಚರಿಸಲಾಗುವುದು. ಈ ದಿನದಂದು ಮೈಗೆ ಎಣ್ಣೆ ಹಚ್ಚಿ ನಂತರ ಸ್ನಾನ ಮಾಡಲಾಗುವುದು.
* ಇದರ ನಂತರ, ಮನೆಯ ಮುಖ್ಯ ಬಾಗಿಲಲ್ಲಿ ಗೋವಿನ ಸಗಣಿಯಿಂದ ಸಾಂಕೇತಿಕ ಗೋವರ್ಧನ ಪರ್ವತವನ್ನು ಮಾಡಬೇಕು, ಅದರ ಮಧ್ಯದಲ್ಲಿ ಶ್ರೀಕೃಷ್ಣನ ವಿಗ್ರಹವನ್ನು ಇರಿಸಬೇಕು.
* ನಂತರ ಗೋವರ್ಧನ ಪರ್ವತ ಮತ್ತು ಗೋವಿನ ಸಗಣಿಯಿಂದ ಮಾಡಿದ ಶ್ರೀಕೃಷ್ಣನಿಗೆ ವಿವಿಧ ರೀತಿಯ ಭಕ್ಷ್ಯಗಳು ಮತ್ತು ಸಿಹಿತಿಂಡಿಗಳನ್ನು ಅರ್ಪಿಸಲಾಗುವುದು.
ಅನ್ನಕೂಟ ಉತ್ಸವ
ಪೂಜೆಯ ವಿಧಾನ ಭಕ್ತರು ಧಾನ್ಯ ಮತ್ತು ತುಪ್ಪದ (ಅನ್ನ, ದಾಲ್, ಹಲ್ವ, ಪಕೋಡ, ಪೂರಿ ಇತ್ಯಾದಿ) ವಿವಿಧ ತಿನಿಸುಗಳನ್ನು ಮತ್ತು ಹಾಲಿನ ಖಾದ್ಯಗಳನ್ನು (ಸಿಹಿ ಅನ್ನ, ಪೊಂಗಲ್, ರಬ್ಡಿ, ಸಂದೇಶ್, ರಸಗುಲ್ಲ, ಲಡ್ಡು ಇತ್ಯಾದಿ) ತಯಾರಿಸಿ, ಅವುಗಳನ್ನು ಬೆಟ್ಟದಂತೆ ಜೋಡಿಸಿ ಭಗವಂತನಿಗೆ ಅರ್ಪಿಸುತ್ತಾರೆ. ಅನಂತರ ಆ ತಿನಿಸುಗಳನ್ನು ಎಲ್ಲರಿಗೂ ಪ್ರಸಾದವಾಗಿ ಹಂಚಲಾಗುವುದು. ಇದನ್ನು ಅನ್ನಕೂಟ ಉತ್ಸವ ಎಂದೂ ಕರೆಯುತ್ತಾರೆ.
* ಈ ದಿನ ಇಂದ್ರ, ವರುಣ, ಅಗ್ನಿಯನ್ನು ಪೂಜಿಸಲಾಗುವುದು.
* ನಂತರ ಗೋವರ್ಧನ ಬೆಟ್ಟದ ಕತೆಯನ್ನು ಕೇಳಲಾಗುವುದು. ಅದಾದ ಬಳಿಕ ಬ್ರಾಹ್ಮಣರಿಗೆ ದಾನ ಮತ್ತು ದಕ್ಷಿಣೆ ನೀಡಿ ಎಲ್ಲರಿಗೆ ಪ್ರಸಾದವನ್ನು ಹಂಚಲಾಗುವುದು.

ಗೋ ಪೂಜೆ
ಗೋವರ್ಧನ ಪೂಜೆಯಂದು ಭಕ್ತರು ಗೋವುಗಳನ್ನೂ ಪೂಜಿಸುತ್ತಾರೆ. ಕೃಷ್ಣನು ಗೋವುಗಳ ಸಂರಕ್ಷಕ, ಗೋಪಾಲ. ವಿಷ್ಣು ಪುರಾಣದಲ್ಲಿ ಕೃಷ್ಣನ ಕುರಿತು ನಮೋ ಬ್ರಾಹ್ಮಣ್ಯ ದೇವಾಯ ಗೋ ಬ್ರಾಹ್ಮಣ ಹಿತಾಯ ಚ ಅಂದರೆ ಇಲ್ಲಿ ಕೃಷ್ಣನನ್ನು ಗೋವುಗಳ ಮತ್ತು ಬ್ರಾಹ್ಮಣರ ಹಿತಚಿಂತಕ ಎಂದು ವರ್ಣಿಸಲಾಗಿದೆ. ಸಂಜೆ ಗೋವುಗಳನ್ನು ಅಲಂಕರಿಸಿ ಅವುಗಳಿಗೆ ಪೂಜೆ ಸಲ್ಲಿಸಿ ಅವುಗಳನ್ನು ಗೋವುಗಳನ್ನು ಮುಂದಿಟ್ಟುಕೊಂಡು ಭಕ್ತರು ಗೋವರ್ಧನ ಗಿರಿಯ ಪ್ರದಕ್ಷಿಣೆ ಮಾಡುವರು.



Click it and Unblock the Notifications
