Latest Updates
-
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್
Aashritha V Olety : ಕರ್ನಾಟಕದ ಹೆಮ್ಮೆ: ಭಾರತದ ಮೊದಲ ಪ್ಲೈಟ್ ಟೆಸ್ಟ್ ಎಂಜಿನಿಯರ್ ಆಶ್ರಿತಾ ವಿ ಒಲೆಟಿ
ಕನಸ್ಸಿನ ಬೆನ್ನತ್ತಿ ಹೋದರೆ ಯಾವುದೂ ಅಸಾಧ್ಯವಲ್ಲ, ಯಾವ ಅಡೆತಡೆಗಳು ಲೆಕ್ಕಕ್ಕಿಲ್ಲ ಎಂಬುವುದಕ್ಕೆ ಸ್ಪೂರ್ತಿ ನಮ್ಮ ಕರ್ನಾಟಕದ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲದ ಯುವತಿ ಆಶ್ರಿತಾ ವಿ ಒಲೆಟಿ.

ಇವರ ಸಾಧನೆಯ ಬಗ್ಗೆ ಹೇಳುವುದಾದರೆ ಭಾರತ ವಾಯು ಪಡೆಯ ಮೊದಲ ಮಹಿಳಾ ಪ್ಲಟ್ ಟೆಸ್ಟ್ ಎಂಜಿನಿಯರ್ ಆಗಿ ಆಯ್ಕೆ ಆಗುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಕೊಳ್ಳೇಗಾಲದವ ಒ.ವಿ. ವೆಂಕಟೇಶ್ ಬಾಬು ಹಾಗೂ ಒ.ವಿ ವಾಣಿ ದಂಪತಿಯ ಪುತ್ರಿ ಇದೀಗ ಕರ್ನಾಟಕದ ಹೆಮ್ಮೆಯ ಪುತ್ರಿಯಾಗಿದ್ದಾಳೆ. ತಾನು ಹೊಸದೊಂದು ಗುರಿ ತಲುಪುವ ಮೂಲಕ ಯುವ ಪೀಳಿಗೆಗೆ ಸ್ಪೂರ್ತಿಯಾಗಿದ್ದಾರೆ.
ಅಶ್ರಿತಾ ವಿ ಒಲೆಟಿಯವರು ಭಾರತದ ಪ್ರತಿಷ್ಠಿತ ಏರ್ ಫೋರ್ಸ್ ಟೆಸ್ಟ್ ಪೈಲೆಟ್ ಸ್ಕೂಲ್‌ನಿಂದ ಪದವಿಯನ್ನು ಪಡೆದುಕೊಂಡಿದ್ದಾರೆ. ಈ ಪದವಿ ಪಡೆಯುವುದು ಸಾಮಾನ್ಯ ವಿಷಯವಲ್ಲ. ವಿಶ್ವದಲ್ಲಿರುವ ಏಳು ಪ್ರತಿಷ್ಠಿತ ಏರ್‌ಫೋರ್ಸ್ ವಿಶ್ವವಿದ್ಯಾನಿಲಯಗಳಲ್ಲಿ ಒಂದು ಭಾರತದಲ್ಲಿದೆ. ಇದನ್ನು 1976ರಲ್ಲಿ ಸ್ಥಾಪನೆ ಮಾಡಲಾಯಿತು. ಅಲ್ಲಿಂದ ಇಲ್ಲಿಯವರೆಗೆ ಅದರಿಂದ 275 ಪದವೀದಾರರು ಮಾತ್ರ ಈ ಕೋರ್ಸ್ ಪೂರ್ಣಗೊಳಿಸಿದ್ದಾರೆ. ಈ ಕೋರ್ಸ್ ಪೂರ್ಣ ಗೊಳಿಸಿರುವ ಮೊದಲ ಮಹಿಳೆ ಆಶ್ರಿತಾ ವಿ. ಒಲೆಟಿ. ಇವರ ಸಾಧನೆಗೆ ನಮ್ಮದ್ದೊಂದು ಸಲ್ಯೂಟ್.
ದೇಶಕ್ಕೆ ಇವರು ಸಲ್ಲಿಸುವ ಸೇವೆಯಿಂದ ಮತ್ತಷ್ಟು ಖ್ಯಾತಿ ಗಳಿಸವಂತಾಗಲಿ ಎಂಬುವುದೇ ನಮ್ಮ ಹಾರೈಕೆ.



Click it and Unblock the Notifications
