For Quick Alerts
ALLOW NOTIFICATIONS  
For Daily Alerts

ವರಮಹಾಲಕ್ಷ್ಮಿ ವ್ರತ 2021: ಈ ಮುದ್ದು ಹೀಗೆ ಲಕ್ಷ್ಮಿಯನ್ನು ಕರೆದರೆ ಬಾರದೆ ಇರುತ್ತಾಳೆಯೇ?

|

ಆಗಸ್ಟ್ 20ರಂದು ವರಮಹಾಲಕ್ಷ್ಮಿ ಹಬ್ಬ. ಭಾಗ್ಯದ ಲಕ್ಷ್ಮಿ ಬಾರಮ್ಮಾ... ಎಂದು ಕರೆದು ಲಕ್ಷ್ಮಿಯನ್ನು ಮನೆ ತುಂಬಿಕೊಳ್ಳುವ ಸಮಯ. ಈ ವ್ರತವನ್ನು ಯಾರು ನಿಷ್ಠೆಯಿಂದ ಮಾಡುತ್ತಾರೋ ಅದೃಷ್ಟ ಒಲಿಯುತ್ತದೆ ಹಾಗೂ ಎಲ್ಲಾ ಎಲ್ಲಾ ಕೆಲಸದಲ್ಲಿ ಏಳಿಗೆ ಆಗುತ್ತದೆಂಬ ನಂಬಿಕೆಯೂ ಇದೆ. ಹೀಗಾಗಿ ನಮ್ಮ ಪೂರ್ವಿಕರು ಹೇಳುವ ಮಾತೆಂದರೆ, ಎಲ್ಲಿ ತನು, ಮನ, ಮನೆ ಶುದ್ಧವಾಗಿರುತ್ತದೋ ಅಲ್ಲಿ ಲಕ್ಷ್ಮಿಯು ತಾಂಡವವಾಡುತ್ತಾಳೆ ಎಂದು ಎಲ್ಲದಕ್ಕಿಂತ ಇಲ್ಲಿ ಭಕ್ತಿ ಹಾಗೂ ಶ್ರದ್ಧೆ ಮುಖ್ಯ. ಇನ್ನು ವ್ರತದ ಬಗ್ಗೆ ಹೇಳಬೇಕೆಂದರೆ, ಒಮ್ಮೆ ವರಲಕ್ಷ್ಮಿ ವ್ರತ ಮಾಡಿದರೆ ಅಷ್ಟಲಕ್ಷ್ಮಿಯರಿಗೆ ಪೂಜೆ ಸಲ್ಲಿಸಿದಷ್ಟು ಫಲ ಸಿಗುತ್ತದೆಂದು ಹೇಳುತ್ತಾರೆ.

Laxmi baramma song sung by Mananya

ಶ್ರಾವಣ ಮಾಸದ ಎರಡನೇ ಶುಕ್ರವಾರ ಮುತ್ತೈದೆಯರು ವರಮಹಾಲಕ್ಷ್ಮಿ ವ್ರತವನ್ನು ಶ್ರದ್ಧೆ, ಭಕ್ತಿಯಿಂದ ಆಚರಿಸುತ್ತಾರೆ. ಅಷ್ಟಲಕ್ಷ್ಮಿ ಒಲಿಸಿಕೊಳ್ಳಲು ಈ ಪೂಜೆ ಮಾಡಲಾಗುವುದು.

ಇಲ್ಲಿ ನೋಡಿ ಬೇಬಿ ಮನನ್ಯ ಭಾಗ್ಯದ ಲಕ್ಷ್ಮಿ ಭಾರಮ್ಮಾ... ಎಂದು ಎಷ್ಟು ಮುದ್ದಾಗಿ ಲಕ್ಷ್ಮಿಯನ್ನು ಕರೆಯುತ್ತಿದ್ದಾಳೆ. ಈಕೆ ಹೀಗೆ ಕರೆದರೆ ಲಕ್ಷ್ಮಿ ಓಡೋಡಿ ಬರುತ್ತಾಳೆ ಅಲ್ವಾ? ಈ ವೀಡಿಯೋ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ನಿಮ್ಮ ಮಕ್ಕಳು ಮುದ್ದಾಗಿ ಕತೆ ಹೇಳುವುದಾದರೆ ನಮ್ಮನ್ನು ಇಮೇಲ್ ಮೂಲಕ ಕಾಂಟ್ಯಾಕ್ಟ್ ಮಾಡಿ . ಇಮೇಲ್ ವಿಳಾಸ

ಭಾಗ್ಯದ ಲಕ್ಷ್ಮೀ ಬಾರಮ್ಮ

ರಚನೆ: ಶ್ರೀ ಪುರಂದರದಾಸರು
ಭಾಗ್ಯದ ಲಕ್ಷ್ಮೀ ಬಾರಮ್ಮ ನಮ್ಮಮ್ಮ ನೀ |
ಸೌಭಾಗ್ಯದ ಲಕ್ಷ್ಮೀ ಬಾರಮ್ಮ || ಪ ||

ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುತ
ಗೆಜ್ಜೆ ಕಾಲ್ಗಳ ಧ್ವನಿಯ ತೋರುತ |
ಸಜ್ಜನ ಸಾಧು ಪೂಜೆಯ ವೇಳೆಗೆ
ಮಜ್ಜಿಗೆಯೊಳಗಿನ ಬೆಣ್ಣೆಯಂತೆ || ೧ ||

ಕನಕವೃಷ್ಟಿಯ ಕರೆಯುತ ಬಾರೆ
ಮನಕೆ ಮಾನವ ಸಿದ್ಧಿಯ ತೋರೆ |
ದಿನಕರ ಕೋಟಿ ತೇಜದಿ ಹೊಳೆಯುವ
ಜನಕರಾಯನ ಕುಮಾರಿ ಬೇಗ || ೨ ||

ಅತ್ತಿತ್ತಲಗದೆ ಭಕ್ತರ ಮನೆಯಲಿ
ನಿತ್ಯ ಮಹೋತ್ಸವ ನಿತ್ಯ ಸುಮಂಗಲಿ |
ಸತ್ಯವ ತೋರುವ ಸಾಧು ಸಜ್ಜನರ
ಚಿತ್ತದಿ ಹೊಳೆಯುವ ಪುತ್ಥಳಿ ಬೊಂಬೆ || ೩ ||

ಸಂಖ್ಯೆಯಿಲ್ಲದ ಭಾಗ್ಯವ ಕೊಟ್ಟು
ಕಂಕಣ ಕೈಯ ತಿರುವುತ ಬಾರೆ |
ಕುಂಕುಮಾಂಕಿತ ಪಂಕಜಲೋಚನೆ
ವೆಂಕಟರಮಣನ ಬಿಂಕದ ರಾಣಿ || ೪ ||

ಸಕ್ಕರೆ ತುಪ್ಪದ ಕಾಲುವೆ ಹರಿಸಿ
ಶುಕ್ರವಾರದ ಪೂಜೆಯ ವೇಳೆಗೆ |
ಅಕ್ಕರೆವುಳ್ಳ ಅಳಗಿರಿ ರಂಗನ
ಚೊಕ್ಕ ಪುರಂದರ ವಿಠ್ಠಲನ ರಾಣಿ || ೫ ||

English summary

Varalakshmi Vratha 2021: Laxmi baramma song sung by Mananya

Here is cute video of Laxmi Baramma song sung by Mananya, Read on,
X
Desktop Bottom Promotion