Latest Updates
-
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
Makar Sankranti 2026 Wishes : ಮಕರ ಸಂಕ್ರಾಂತಿಗೆ ಶುಭ ಕೋರಲು ಇಲ್ಲಿವೆ ಶುಭಾಶಯಗಳು, ಸಂದೇಶಗಳು
2026ರ ಮೊದಲ ಹಬ್ಬ ಮಕರ ಸಂಕ್ರಾಂತಿ. ಹೊಸ ವರ್ಷದ ಮೊದಲ ಹಬ್ಬ, ಸುಗ್ಗಿಯ ಸಂಭ್ರಮ, ಹಸುಗಳ ಕಿಚ್ಚು ಹಾಯಿಸುವ ಕಾತುರ, ಎಲ್ಲರ ಮನೆ-ಮನೆಗೂ ಎಳ್ಳು ಬೆಲ್ಲ ಬೀರಿ ಸಂತಸ ಹಂಚಿಕೊಳ್ಳುವ ಖುಷಿಯೇ ಭಿನ್ನ. ಈ ವರ್ಷ ಜನವರಿ 14ಕ್ಕೆ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುವುದು.
ರೈತರ ಮನೆಮನೆಯಲ್ಲೂ ಉತ್ಸಾಹ, ಸಂಭ್ರಮ ಮನೆ ಮಾಡುವ ಹಬ್ಬ ಸಂಕ್ರಾಂತಿ ಇದಾಗಿದೆ. ರೈತರು ಬೆಳೆಯ ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಮಾಗಿಯ ಚಳಿ ಮಾಯವಾಗಿ ಸೂರ್ಯನ ರಶ್ಮಿ ಭೂಮಿಗೆ ಚುಂಬಿಸುವ ವೇಳೆ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತದೆ.

ಕರ್ನಾಟಕ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ಈ ಹಬ್ಬವನ್ನು ಸಡಗರ ಸಂಭ್ರಮದಿಂದ ಕುಟುಂಬ ಸದಸ್ಯರೆಲ್ಲಾ ಒಂದಾಗಿ ಆಚರಿಸುವುದು ವಾಡಿಕೆ. 2026ರ ಹಬ್ಬಗಳ ಮುನ್ನುಡಿಯಾದ ಸಂಕ್ರಾಂತಿ ಹಬ್ಬದಂದು ಬಂಧು-ಬಾಂಧವರಿಗೆ, ಸ್ನೇಹಿತರು, ಆಪ್ತರಿಗೆ ಶುಭಾಶಯ ಕೋರಲು ಇಲ್ಲಿದೆ ಕೆಲವು ಸಂದೇಶಗಳು.

ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ
ನೇಸರನು ತನ್ನ ಪಥವ ಬದಲಿಸುತಿರಲು, ಮಾಗಿಯ ಚಳಿ ಮಾಯವಾಗುತಿರಲು, ತನು ಮನದಲಿ ಹೊಸ ಚೈತನ್ಯ ಮೂಡಲಿ, ಹೊಸ ಬೆಳೆ ಹೊಸ ಕ್ರಾಂತಿ ಜಗದಲಿ ಹರಡಲಿ.
ಮಕರ ಸಂಕ್ರಾಂತಿಯ ಶುಭಾಶಯಗಳು

ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ
ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಎಲ್ಲರಲ್ಲೂ ಹೊಸ ಉತ್ಸಾಹ, ನವಚೈತನ್ಯ, ನೆಮ್ಮದಿಯ ಬಾಳನ್ನು ಕರುಣಿಸಲಿ.
ಸುಗ್ಗಿ ಹಬ್ಬದ ಶುಭಾಶಯಗಳು

ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ
ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡೋಣ. ಕಳೆದ ವರ್ಷದ ಎಲ್ಲಾ ಕಹಿಗಳನ್ನು ಮರೆತು ಸಿಹಿಯಾದ ಮಾತುಗಳ ಮೂಲಕ ಬಾಂಧವ್ಯವನ್ನು ವೃದ್ಧಿಸೋಣ.
ಮಕರ ಸಂಕ್ರಮಣದ ಶುಭಾಶಯಗಳು

ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ
ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ. ನೆಮ್ಮದಿಯ ಬಾಳು ನಿಮ್ಮದಾಗಲಿ.
ಮಕರ ಸಂಕ್ರಾಂತಿಯ ಶುಭಾಶಯಗಳು

ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ
ಬೆಳಗುತ್ತಿರುವ ಸೂರ್ಯ ನಿಮ್ಮ ಬಾಳಲ್ಲಿ ಸಂತೋಷ, ಸಮೃದ್ಧಿ, ಸುಖ-ಶಾಂತಿಯನ್ನು ಕರುಣಿಸಲಿ. ಉದಯರವಿಯ ಬೆಳಕಿನ ಚಿಲುಮೆಯಂತೆ ನಿಮ್ಮ ಬಾಳು ಸಮೃದ್ಧಿಸಲಿ.
ಸುಗ್ಗಿ ಮಕರ ಸಂಕ್ರಾಂತಿಯ ಶುಭಾಶಯಗಳು

ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ
ಸಂಕ್ರಾಂತಿಯ ಬೆಂಕಿಯ ಕಿಡಿ ನಿಮ್ಮ ಬದುಕಿನ ಎಲ್ಲಾ ಕಹಿ ಘಟನೆಗಳನ್ನು ಸುಟ್ಟು, ನಿಮ್ಮ ಬಾಳಿನಲ್ಲಿ ಸಂತೋಷ ಮತ್ತು ಸುಖವನ್ನು ನೀಡಲಿ.
ಮಕರ ಸಂಕ್ರಾಂತಿಯ ಶುಭಾಶಯಗಳು

ಸಂಕ್ರಾಂತಿ ಸುಗ್ಗಿಯ ಹರುಷ
ಈ ಮಕರ ಸಂಕ್ರಾಂತಿ ನಿಮ್ಮ ಬಾಳಲ್ಲಿ ಸುಂದರವಾದ ಕ್ಷಣಗಳನ್ನು ನೀಡಲಿ. ಈ ಶುಭ ಸಂದರ್ಭದಲ್ಲಿ ಗಾಳಿಪಟಗಳನ್ನು ಎತ್ತರೆತ್ತರಕ್ಕೆ ಹಾರಿಸುವಂತೆ ನಿಮ್ಮ ಆಸೆ, ಕನಸುಗಳು ಹೊಸ ಎತ್ತರವನ್ನು ತಲುಪಲಿ ಎಂದು ಹಾರೈಸುತ್ತೇವೆ.
ಮಕರ ಸಂಕ್ರಾಂತಿಯ ಶುಭಾಶಯಗಳು

ಸಂಕ್ರಾಂತಿ ಸುಗ್ಗಿಯ ಹರುಷ
ಕಬ್ಬಿನ ಸಿಹಿ, ಎಳ್ಳು ಬೆಲ್ಲದ ರುಚಿ, ಸಿಹಿ ಗೆಣಸು, ಕಡಲೆಯ ಸಾರದಂಥ ಜೀವನ ನಿಮ್ಮದಾಗಲಿ. ಸಂಕ್ರಾಂತಿಯ ಸಮೃದ್ಧ ಬೆಳೆಯಂತೆ ನಿಮ್ಮ ಬಾಳು ಸಹ ಸಮೃದ್ಧವಾಗಿರಲಿ.
ಸುಗ್ಗಿ ಸಂಕ್ರಾಂತಿಯ ಶುಭಾಶಯಗಳು



Click it and Unblock the Notifications
